ಡಿಕೆಶಿ-ಜಾರಕಿಹೊಳಿ ನಡುವೆ ವೈಯಕ್ತಿಕವಾಗಿ ವೈಮನಸ್ಸಿರಬಹುದು: ಮಧು ಬಂಗಾರಪ್ಪ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಸಚಿವ ಸತೀಶ ಜಾರಕಿಹೊಳಿ ಅವರ ನಡುವೆ ವೈಯಕ್ತಿಕವಾಗಿ ವೈಮನಸ್ಸು ಇರಬಹುದು. ಆದರೆ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಮತವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

DK Shivakumar vs Jarkiholi issue Madhu bangarappa statement here rav

ಕುಕನೂರ (ಕೊಪ್ಪಳ): ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಸಚಿವ ಸತೀಶ ಜಾರಕಿಹೊಳಿ ಅವರ ನಡುವೆ ವೈಯಕ್ತಿಕವಾಗಿ ವೈಮನಸ್ಸು ಇರಬಹುದು. ಆದರೆ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಮತವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿ, ಬೆಳಗಾವಿ ಶಾಸಕರ ಅಸಮಾಧಾನ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಐದು ವರ್ಷದವರೆಗೂ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್ ಸರ್ಕಾರ ಉಳಿಯುವುದಿಲ್ಲ ಎಂಬ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಬಿಜೆಪಿಯವರು ಬಸ್ ನಿಲ್ದಾಣದಲ್ಲಿ ಕುಳಿತು ಭವಿಷ್ಯ ನುಡಿಯುತ್ತಾರೆ. ಬಿಜೆಪಿ ಕಳೆದ ಚುನಾವಣೆಯಲ್ಲಿ ಎಷ್ಟು ಸ್ಥಾನ ಪಡೆದಿದೆ ಎಂಬುದನ್ನು ನೆನಪಿಸಿಕೊಳ್ಳಲಿ ಎಂದರು.

ಕರ್ನಾಟಕ ಪಬ್ಲಿಕ್‌ ಶಾಲಾ ಮಕ್ಕಳಿಗೆ ಸ್ಕೂಲ್‌ ಬಸ್‌ ಭಾಗ್ಯ: ಶಿಕ್ಷಣ ಸಚಿವ ಮಧು ಬಂಗಾರಪ್ಪ

20 ಸಾವಿರ ಶಿಕ್ಷಕರ ಶೀಘ್ರ ನೇಮಕ:

ಮುಂಬರುವ ವರ್ಷದಲ್ಲಿ ೨೦ ಸಾವಿರ ನೂತನ ಶಿಕ್ಷಕರ ನೇಮಕ ಮಾಡಿಕೊಳ್ಳುವ ಉದ್ದೇಶ ಹೊಂದಿದ್ದು, ಸಿಎಂ ಸಿದ್ದರಾಮಯ್ಯ ಜತೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ನನ್ನ ತಂದೆ ಬಂಗಾರಪ್ಪ ಅವರ ಆಡಳಿತದಲ್ಲಿ ಯಲಬುರ್ಗಾ ಕ್ಷೇತ್ರದಲ್ಲಿ ೫೫ ಎಕರೆಯಲ್ಲಿ ರಾಯರಡ್ಡಿ ನೇತೃತ್ವದಲ್ಲಿ ಆಶ್ರಯ ಮನೆ ಮಂಜೂರುಗೊಂಡಿದ್ದವು. ಕಳೆದ ೩೩ ವರ್ಷಗಳಿಂದ ನಮ್ಮ ತಂದೆಯ ಆಡಳಿತ ಅವಧಿಯಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಿ, ಹಲವು ಜನಪರ ಯೋಜನೆ ಜಾರಿಗೊಳಿಸಿದ್ದರು. ಸಿಎಂ ಸಿದ್ದರಾಮಯ್ಯ ಕೂಡ ಚುನಾವಣೆ ಪೂರ್ವದಲ್ಲಿ ಜನತೆಗೆ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದಾರೆ. ಇನ್ನು ೪೦ ಸಾವಿರ ಶಿಕ್ಷಕರ ಕೊರತೆ ಇದ್ದು, ಸದ್ಯ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಬರುವ ವರ್ಷದಲ್ಲಿಯೇ ೨೦ ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಸಲಾಗುವುದು. ಮುಂದಿನ ೩ ವರ್ಷದಲ್ಲಿ ೩ ಸಾವಿರ ಕೆಪಿಎಸ್ ಶಾಲೆ ಪ್ರಾರಂಭಿಸುತ್ತೇವೆ. ಕೆಪಿಎಸ್ ಶಾಲೆಗೆ ಉಚಿತ ಬಸ್ ಸೇವೆ ಕೂಡ ಪ್ರಾರಂಭಿಸಲಾಗುತ್ತಿದೆ ಎಂದರು.

ಶಾಸಕ ಬಸವರಾಜ ರಾಯರಡ್ಡಿ ನಮ್ಮ ತಂದೆ ಜತೆ ಸಾಕಷ್ಟು ಸಂಬಂಧ ಹೊಂದಿದ್ದರು. ಇಂದಿಗೂ ನಮ್ಮ ತಂದೆಯನ್ನು ಗುರುಗಳು ಎಂದು ಕರೆಯುತ್ತಾರೆ. ನಾನು ಚಿಕ್ಕವನಾಗಿದ್ದಾಗ ಹಂಪಿಗೆ ಬಂದಾಗ ಕಾರ್‌ನಲ್ಲಿ ರಾಯರಡ್ಡಿ ತೊಡೆ ಮೇಲೆ ಕುಳಿತುಕೊಳ್ಳುತ್ತಿದೆ. ಈಗ ಕುಳಿತುಕೊಳ್ಳಲು ಆಗುವುದಿಲ್ಲ ಎಂದು ನೆನಪುಗಳನ್ನು ಮೆಲುಕು ಹಾಕಿದರು. ರಾಯರಡ್ಡಿ ವೇಗವಾಗಿ ಕೆಲಸ ಮಾಡಿಸಿಕೊಂಡು ಕಾಲೇಜು, ಪ್ರೌಢಶಾಲೆ ಮಂಜೂರು ಮಾಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಯಾವ ಶಾಸಕರು ಸಹ ಇಷ್ಟು ಒತ್ತಡ ಹಾಕಿ ಕೆಲಸ ತೆಗೆದುಕೊಂಡಿಲ್ಲ. ಮಹತ್ವದ ಕಾರ್ಯ ಇದ್ದರೂ ಅವುಗಳನ್ನು ಬದಿಗೊತ್ತಿ ರಾಯರಡ್ಡಿ ಅವರಿಗೆ ಸಮಯ ನೀಡಿದ್ದೇನೆ ಎಂದರು.

ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, ಈ ಹಿಂದೆ ಕೇವಲ ನೆರೆ ಹಾವಳಿ ಇತ್ತು. ಸದ್ಯ ಕ್ಷೇತ್ರದಲ್ಲಿ ಅಭಿವೃದ್ಧಿಯ ಸುನಾಮಿ ಎದ್ದಿದೆ. ಸಿಎಂ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ. ಮಾಜಿ ಸಿಎಂ ಬಂಗಾರಪ್ಪ ನನ್ನ ಗುರುಗಳು. ಕೇಂದ್ರದಲ್ಲಿ ವಾಜಪೇಯಿ, ಐ.ಕೆ. ಗುಜ್ರಾಲ್, ರಾಜ್ಯದಲ್ಲಿ ರಾಮಕೃಷ್ಣ ಹೆಗಡೆ, ಜೆ.ಎಚ್. ಪಟೇಲ ಒಳ್ಳೆಯ ಕೆಲಸ ಮಾಡಿದ್ದಾರೆ. ಮಧು ಬಂಗಾರಪ್ಪ ನನ್ನ ತೊಡೆಯ ಮೇಲೆ ಕುಳಿತುಕೊಳ್ಳುತ್ತಿದ್ದರು. ಶಿಕ್ಷಣ ಇಲಾಖೆಯ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು.

ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭ: ಸಚಿವ ಮಧು ಬಂಗಾರಪ್ಪ

ರಾಜಕಾರಣ ಎಂದರೆ ಜಾತಿ, ಹಣದ ಮೇಲೆ ಅಧಿಕಾರ ನಡೆದಿದೆ. ಚಿಲ್ಲರೆ ರಾಜಕಾರಣ ಮಾಡುವುದಿಲ್ಲ. ವಿರೋಧ ಪಕ್ಷದವರ ಗ್ರಾಮದಲ್ಲಿಯೇ ಅಭಿವೃದ್ಧಿ ಕಾರ್ಯ ಆರಂಭಿಸಿದ್ದೇವೆ ಎಂದರು.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಜಗದೀಶ ಜಿ.ಎಚ್., ತಹಸೀಲ್ದಾರ್ ಎಚ್.ಪ್ರಾಣೇಶ, ಡಿಡಿಪಿಐ ಶ್ರೀಶೈಲ ಬಿರಾದಾರ, ತಾಪಂ ಇಒ ಸಂತೋಷ ಬಿರಾದಾರ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಸವರಾಜ ಅಂಗಡಿ, ಮಾಜಿ ಜಿಪಂ ಸದಸ್ಯರಾದ ಯಂಕಣ್ಣ ಯರಾಶಿ, ಹನುಮಂತಗೌಡ ಪಾಟೀಲ್, ಪ್ರಮುಖರಾದ ಬಸವರಾಜ ಉಳ್ಳಾಗಡ್ಡಿ, ರಾಘವೇಂದ್ರಾಚಾರ ಜೋಶಿ, ಸತ್ಯನಾರಾಯಣಪ್ಪ ಹರಪನಹಳ್ಳಿ, ಕಾಶೀಮಸಾಬ್ ತಳಕಲ್ ಇತರರಿದ್ದರು.

Latest Videos
Follow Us:
Download App:
  • android
  • ios