ಬೆಂಗಳೂರು (ಡಿ.01):  ಮುಂಬರುವ ಚುನಾವಣೆ ಎದುರಿಸಲು ಹಾಗೂ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಬಿಜೆಪಿಯ ನಾಥೂರಾಮ್‌ ಗೋಡ್ಸೆ ಹಾಗೂ ವೀರ ಸಾವರ್ಕರ್‌ ಅವರು ಪ್ರತಿಪಾದಿಸುವ ಹಿಂದುತ್ವಕ್ಕೆ ಪ್ರತಿಯಾಗಿ ಮಹಾತ್ಮಾ ಗಾಂಧೀಜಿ ಹಾಗೂ ಸ್ವಾಮಿ ವಿವೇಕಾನಂದರ ಹಿಂದುತ್ವ ಪ್ರತಿಪಾದಿಸಲು ರಾಜ್ಯ ಕಾಂಗ್ರೆಸ್‌ ಮುಂದಾಗಿದೆ.

ಮುಂಬರುವ ಪಂಚಾಯಿತಿ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆ ಕುರಿತಂತೆ ಸೋಮವಾರ ದೇವನಹಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ನಡೆದ ಹಿರಿಯ ನಾಯಕರ ಸಭೆಯಲ್ಲಿ, ಹಿಂದುತ್ವ ಒಂದು ಪಕ್ಷದ ಆಸ್ತಿಯಾಗಲು ಬಿಡಬಾರದು. ಬಿಜೆಪಿಯನ್ನು ಹಿಂದುತ್ವದ ಅಸ್ತ್ರದ ಮೂಲಕವೇ ಎದುರಿಸಬೇಕೆಂದು ಮುಖಂಡರು ಅಭಿಪ್ರಾಯಪಟ್ಟರು ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಶಾಸಕ ಸಿದ್ದು ಸವದಿ ಎಳೆದಾಡಿದ್ದ ಪುರಸಭೆ ಸದಸ್ಯೆಗೆ ಗರ್ಭಪಾತ

ಸಿದ್ದು ಸವದಿ ವಿರುದ್ಧ ಹೋರಾಟ

ಬಿಜೆಪಿ ಶಾಸಕ ಸಿದ್ದು ಸವದಿ ಅವರು ಹೆಣ್ಣು ಮಗಳೊಬ್ಬರ ಮೇಲೆ ನಡೆಸಿದ ದೌರ್ಜನ್ಯದಿಂದ ಹೆಣ್ಣಿಗೆ ಗರ್ಭಪಾತ ಆಗಿದೆ ಎಂದು ತಿಳಿದುಬಂದಿದೆ. ಇಷ್ಟಾದರೂ ಮುಖ್ಯಮಂತ್ರಿಯಾಗಲಿ, ಪೊಲೀಸ್‌ ಇಲಾಖೆಯಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ವಾರದ ಒಳಗಾಗಿ ಸ್ಥಳಕ್ಕೆ ಭೇಟಿ ನೀಡಿ ದೌರ್ಜನ್ಯ ನಡೆಸಿದವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನೆ ನಡೆಸುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದರು.