ಡಿಕೆಶಿ ಸಿಎಂ ಆಗ್ತಾರೆ ನೊಣವಿನಕೆರೆ ಸ್ವಾಮೀಜಿ ಭವಿಷ್ಯ; ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದ ಎಂಬಿ ಪಾಟೀಲ್

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಸದ್ಯ ಖಾಲಿ ಇಲ್ಲ. ಮುಖ್ಯಮಂತ್ರಿ ಮಾಡುವ ವಿಷಯ ಕಾಂಗ್ರೆಸ್ ಪಕ್ಷದ ವರಿಷ್ಠರ ಕೈಯಲ್ಲಿ ಇರುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಹೈಕಮಾಂಡ್ ಇದೆ. ಎಲ್ಲ ಅವರು ನಿರ್ಧರಿಸುತ್ತಾರೆ.  ನೋಣವಿನಕೆರೆ ಸ್ವಾಮೀಜಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗಲಿ ಎಂದು ಹೇಳಿಕೆ ನೀಡಿದ ಕುರಿತು ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯಿಸಿದರು.

DK Shivakumar will CM Nonavinakere shree predict issue MB Patil reaction at vijayapur rav

 ವಿಜಯಪುರ (ಡಿ.10):  ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಏನು ಮಾತನಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇಂಥ ವಿಷಯಗಳಲ್ಲಿ ಬಹಿರಂಗವಾಗಿ ಚರ್ಚಿಸದೇ ಪಕ್ಷದ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಪಟ ಕಾಂಗ್ರೆಸ್ಸಿಗರಾದ ಬಿ.ಕೆ.ಹರಿಪ್ರಸಾದ್ ಬದ್ಧತೆಯನ್ನು ನಾವ್ಯಾರೂ ಪ್ರಶ್ನೆ ಮಾಡುವುದಿಲ್ಲ, ಪ್ರಶ್ನೆ ಮಾಡಲೂ ಆಗದು. ಅನೇಕ ಬಾರಿ ಅವರು ಸಲಹೆ, ಸೂಚನೆ ಕೊಟ್ಟಿದ್ದಾರೆ. ಎಲ್ಲ ಸಮುದಾಯಗಳಿಗೂ ಅನುದಾನ ಕೊಡಿ ಎಂದು ಅವರು ಹೇಳಿರುತ್ತಾರೆ. ಹಿಂದುಳಿದ ಸಮುದಾಯಗಳ ನಾಯಕರಾದ ಅವರು ಜನರ ನೋವನ್ನು ಅರ್ಥೈಸಿಕೊಂಡವರು. ಹೀಗಾಗಿ, ಎಲ್ಲರಿಗೂ ಅನುದಾನ ಕೊಡಿ ಎಂದು ಹೇಳಿರಬಹುದು, ಅದರಲ್ಲೇನು ತಪ್ಪಿದೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗ್ತಾರೆ: ಶಿವಯೋಗೇಶ್ವರ ಸ್ವಾಮೀಜಿ ಭವಿಷ್ಯ

ನೋಣವಿನಕೆರೆ ಸ್ವಾಮೀಜಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗಲಿ ಎಂದು ಹೇಳಿಕೆ ನೀಡಿದ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಸದ್ಯ ಖಾಲಿ ಇಲ್ಲ. ಮುಖ್ಯಮಂತ್ರಿ ಮಾಡುವ ವಿಷಯ ಕಾಂಗ್ರೆಸ್ ಪಕ್ಷದ ವರಿಷ್ಠರ ಕೈಯಲ್ಲಿ ಇರುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಹೈಕಮಾಂಡ್ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇದ್ದಾರೆ. ಅವರು ಶಾಸಕರ ಅಭಿಪ್ರಾಯ ಪಡೆದು, ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಿರ್ಧಾರ ಮಾಡುತ್ತಾರೆ ಎಂದರು. 

ಜೆಡಿಎಸ್‌ನಲ್ಲಿದ್ದಾಗ ಮುಸ್ಲಿಮರ ಓಲೈಕೆ ಮಾಡ್ತಿದ್ದ ಯತ್ನಾಳ, ಬಿಜೆಪಿ ಸೇರುತ್ತಲೇ ಹಿಂದೂ ಹುಲಿ ಆಗಿಬಿಟ್ಟ: ಎಂಬಿ ಪಾಟೀಲ್

Latest Videos
Follow Us:
Download App:
  • android
  • ios