60% ಕನ್ನಡ ಫಲಕ ಇಲ್ಲವೆಂದು ಮಳಿಗೆ ಮುಚ್ಚಬೇಡಿ: ಹೈಕೋರ್ಟ್
ರಾಜ್ಯದ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಿ ಜಾರಿಗೊಳಿಸಿರುವ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022 ಮತ್ತು ಶೇ.60ರಷ್ಟು ಕನ್ನಡ ಬಳಸದ ಸಂಸ್ಥೆಗಳನ್ನು ಮುಚ್ಚುವುದಾಗಿ ತಿಳಿಸಿ 2024ರ ಫೆ.28ರಂದು ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಟೈಟಾನ್ ಕಂಪನಿ ಲಿಮಿಟೆಡ್ ಮತ್ತು ಪಿವಿಆರ್ ಐನಾಕ್ಸ್ ಲಿಮಿಟೆಡ್ ಮತ್ತಿತರ ಬೃಹತ್ ವಾಣಿಜ್ಯ ಸಂಸ್ಥೆಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿವೆ.
ಬೆಂಗಳೂರು(ಮಾ.19): ಶೇ.60 ರಷ್ಟು ಕನ್ನಡ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳ ವಿರುದ್ದ ಬಲವಂತದ ಕ್ರಮ ಜರುಗಿಸ ಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನಿರ್ದೇಶಿಸಿದೆ.
ರಾಜ್ಯದ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಿ ಜಾರಿಗೊಳಿಸಿರುವ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022 ಮತ್ತು ಶೇ.60ರಷ್ಟು ಕನ್ನಡ ಬಳಸದ ಸಂಸ್ಥೆಗಳನ್ನು ಮುಚ್ಚುವುದಾಗಿ ತಿಳಿಸಿ 2024ರ ಫೆ.28ರಂದು ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಟೈಟಾನ್ ಕಂಪನಿ ಲಿಮಿಟೆಡ್ ಮತ್ತು ಪಿವಿಆರ್ ಐನಾಕ್ಸ್ ಲಿಮಿಟೆಡ್ ಮತ್ತಿತರ ಬೃಹತ್ ವಾಣಿಜ್ಯ ಸಂಸ್ಥೆಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿವೆ.
ಕನ್ನಡ ಫಲಕ ಹಾಕದ ಮಳಿಗೆಗೆ ದಂಡ, ಬೀಗ: ಬಿಬಿಎಂಪಿ ಎಚ್ಚರಿಕೆ
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವು ದಾಗಿ (ಸೀಲ್ಡ್ ಡೌನ್) ತಿಳಿಸಿರುವುದು ಕಠಿಣ ಕ್ರಮವಾಗ ಲಿದೆ. ದಂಡ ಹಾಕುವ ಅಥವಾ ಪರವಾನಗಿ ರದ್ದುಪಡಿಸುವ ಕ್ರಮವಾದರೆ ಯೋಚಿಸಬಹುದು. ಆದರೆ, ಸಂಸ್ಥೆಯನ್ನೇ ಮುಚ್ಚುವುದು ಸರಿಯಾದ ಕ್ರಮವಲ್ಲ. ಮೇಲಾಗಿ ಕಾಯ್ದೆ ಮೂಲಕ ನಿಯಮಗಳನ್ನು ಸುತ್ತೋಲೆ ರೂಪದಲ್ಲಿ ಜಾರಿಗೊಳಿಸಲು ಸಾಧ್ಯವಿಲ್ಲ. ಆದ್ದರಿಂದ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ನ್ನಡ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳನ್ನು ಸೀಲ್ ಡೌನ್ ಮಾಡುವಂತಹ ಬಲವಂತದ ಕ್ರಮ ಜರುಗಿಸಬಾರದು. ಉಳಿದಂತೆ ಸುತ್ತೋಲೆ ಉಲ್ಲೇಖಿಸಿರುವ ಇತರೆ ಅಂಶಗಳು ಅರ್ಜಿ ಕುರಿತ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಮಧ್ಯಂತರ ಆದೇಶ ಮಾಡಿತು.
ಕನ್ನಡ ಫಲಕ ಹಾಕದ ಬೆಂಗಳೂರಿನ 18,000 ಮಳಿಗೆಗೆ ನೋಟಿಸ್
ಯಾವ ದಿನದಿಂದ 'ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022' ಜಾರಿ ಮಾಡಲಾಗಿದೆ ಎಂಬ ಬಗ್ಗೆ ಗೆಜೆಟ್ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಿಲ್ಲ. ಆ ಕುರಿತು ಸರ್ಕಾರ ಮಾಹಿತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ (ಮಾ.22) ಮುಂದೂಡಿತು.
ಕನ್ನಡ ನಾಮಫಲಕ ಹಾಕಲು ಏನು ಸಮಸ್ಯೆ?
ಶೇ.60ರಷ್ಟು ಕನ್ನಡ ಬಳಕೆಗೆ ರೂಪಿಸಿರುವ ಕಾಯ್ದೆಯ ನಿಯಮಗಳನ್ನು ನ್ಯಾಯಾಲಯ ಪರಿಶೀಲಿಸಿ ಉತ್ತರ ಸಹ ನೀಡಲಿದೆ. ಕಾಯ್ದೆಯ ಎಲ್ಲ ಅಂಶಗಳಿಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಲಿದೆ. ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವುದನ್ನು ನ್ಯಾಯಾ ಲಯ ಸಹ ಒಪ್ಪುವುದಿಲ್ಲ. ಆದರೆ, ನಾಮಫಲಕದಲ್ಲಿ ಕನ್ನಡವನ್ನು ದೊಡ್ಡದಾಗಿ ಬಳಸಿದರೆ ನಿಮಗೆ ಯಾವ ಸಮಸ್ಯೆಯಾಗುತ್ತದೆ ಎಂಬುದು ನನಗೆ ಅರ್ಥ ವಾಗುತ್ತಿಲ್ಲ. ಕನ್ನಡ ಬಳಕೆಗೆ ಸಮಯಾವಕಾಶ ಬೇಕಾ ದರೆ ಸರ್ಕಾರ ಒದಗಿಸಲಿದೆ ಎಂದು ನ್ಯಾಯಮೂರ್ತಿ ಗಳು ಹೇಳಿದರು.