ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಕನ್ನಡದಲ್ಲಿ ನಾಮಫಲಕ ಹಾಕುವಂತೆ ಮಾಡಲು ಹೋರಾಟ ಮಾಡುತ್ತಿದ್ದು, ಅವರ ವಿರುದ್ಧ ಸುಳ್ಳು ಕೇಸು ದಾಖಲಿಸದಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು (ಡಿ.18): ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಕನ್ನಡದಲ್ಲಿ ನಾಮಫಲಕ ಹಾಕುವಂತೆ ಮಾಡಲು ಹೋರಾಟ ಮಾಡುತ್ತಿದ್ದು, ಅವರ ವಿರುದ್ಧ ಸುಳ್ಳು ಕೇಸು ದಾಖಲಿಸದಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ಹಾಗೂ ಟಿ.ಎ.ನಾರಾಯಣಗೌಡ ಅವರ ಭೇಟಿ ಕುರಿತು ಪ್ರತಿಕ್ರಿಯಿಸಿದರು.
ನಾರಾಯಣಗೌಡ ಅವರು ಹೋರಾಟಗಾರರು, ಹೋರಾಟ ಮಾಡುವುದು ಸಹಜ. ಕರ್ನಾಟಕದಲ್ಲಿ ಕನ್ನಡದಲ್ಲಿ ನಾಮಫಲಕ ಹಾಕುವಂತೆ ಆದೇಶ ಇದೆ. ಯಾರೋ ಅವರ ವಿರುದ್ಧ ದೂರು ನೀಡಿದ್ದಾರೆ. ಆ ಸಂಬಂಧ ಮಾತನಾಡಿದೆವು ಎಂದು ಹೇಳಿದರು.
'ಭಾರತ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ, ಇದು ಬಹುತ್ವದ ದೇಶ' : ಸಿಎಂ
ಈ ಬಗ್ಗೆ ನಾನು ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ. ಹೋರಾಟಗಾರರಿಗೆ ನಾವು ಎಷ್ಟು ಗೌರವ ನೀಡಬೇಕೋ ಅದನ್ನು ನೀಡಲೇಬೇಕು. ಅವರ ಹೋರಾಟದಿಂದ ಕನ್ನಡ ಉಳಿಯುತ್ತಿದೆ. ಅವರಿಗೆ ರಾಜಕೀಯ ಬೇಡ. ಅವರ ವಿರುದ್ಧ ಸುಳ್ಳು ಕೇಸು ದಾಖಲಿಸಬಾರದು ಎಂದು ಆಯುಕ್ತರಿಗೆ ಹೇಳಿದ್ದೇನೆ ಎಂದರು.
