ಕೊರೋನಾ ವಿರುದ್ಧ ಹೋರಾಟಕ್ಕೆ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾದ ರಾಜ್ಯ ಸರ್ಕಾರ

ಕೋವಿಡ್ 19 ​ ಸೋಂಕು ಹರಡದಂತೆ ತಡೆಯುವ ಪ್ರಯತ್ನ ತೀವ್ರತರವಾಗಿ ನಡೆಯುತ್ತಿದೆ. ಈ ನಡುವೆ ಅಲೋಪಥಿ ಔಷಧ ಅಭಿವೃದ್ಧಿ ಪಡಿಸುವ ಪ್ರಯತ್ನ ಜಗತ್ತಿನ ನಾನಾ ಭಾಗದಲ್ಲಿ ನಡೆದಿದೆ. ಅದರಲ್ಲೂ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

Dr Giridhar Kaje meets health minister Sriramulu Over ayurveda treatment For covid-19

ಬೆಂಗಳೂರು, (ಜೂನ್.24):  ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ಆದರೂ ಸೋಂಕಿತ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್19 ಸೋಂಕಿಗೆ ಆಯುರ್ವೇದ ಚಿಕಿತ್ಸೆ ಅಸ್ತ್ರ ಪಯೋಗಿಸಲು ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ  ಆಯುರ್ವೇದ ವೈದ್ಯ ಡಾ. ಗಿರಿಧರ ಕಜೆ ಅವರು ಇಂದು (ಬುಧವಾರ)  ಆರೋಗ್ಯ ಸಚಿವ ಶ್ರೀರಾಮುಲು ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದರು.

ಕೊರೋನಾಕ್ಕೆ ಔಷಧಿ ಕಂಡುಹಿಡಿದೆವು ಎಂದು ಬೀಗುತ್ತಿದ್ದ ಪತಂಜಲಿಗೆ ಆಯುಷ್ ಶಾಕ್!

ಸೋಮವಾರ ಟಾಸ್ಕ್​ ಫೋರ್ಸ್​ ಸಭೆ ನಡೆಯಲಿದ್ದು ಅಲ್ಲಿ ಆಯುರ್ವೇದ ಚಿಕಿತ್ಸೆ ಕುರಿತು ಚರ್ಚೆ ನಡೆಯಲಿದೆ ಎಂಬ ಅಂಶ ಬಹಿರಂಗವಾಗಿದೆ. ಡಾ.ಕಜೆ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ ವಿಚಾರವನ್ನು ಶ್ರೀರಾಮುಲು ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೂ ಮುನ್ನ ಡಾ.ಕಜೆಯವರು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನೂ ಭೇಟಿ ಮಾಡಿ, ಆಯುರ್ವೇದ ಚಿಕಿತ್ಸೆ ವಿಚಾರವನ್ನು ಚರ್ಚಿಸಿದ್ದಾರೆ. ಈ ಬೆಳವಣಿಗೆಗಳೊಂದಿಗೆ ಸೋಮವಾರ ನಡೆಯಲಿರುವ ಟಾಸ್ಕ್​ ಫೋರ್ಸ್ ಸಭೆಯಲ್ಲಿ ಆಯುರ್ವೇದ ಚಿಕಿತ್ಸೆಯ ಪರಿಣಾಮ ಏನೆಂಬುದು ಬಹಿರಂಗವಾಗುವ ನಿರೀಕ್ಷೆ ಇದೆ.

ಭಾರತದ ಆಯುರ್ವೇದ ಚಿಕಿತ್ಸೆಯಲ್ಲಿ ವೈರಾಣು ಸೋಂಕಿಗೆ ಔಷಧ ಇದೆ ಎಂಬುದನ್ನು ಆಯುರ್ವೇದ ಪರಿಣತರು ಈಗಾಗಲೆ ಪ್ರತಿಪಾದಿಸಿದ್ದಾರೆ. 

ಇದರಂತೆ ಕರ್ನಾಟಕ, ಗೋವಾ ಸೇರಿ ಕೆಲವು ರಾಜ್ಯಗಳಲ್ಲಿ ಕೋವಿಡ್19 ಸೋಂಕಿಗೆ ಆಯುರ್ವೇದ ಚಿಕಿತ್ಸೆಗೂ ಅವಕಾಶ ನೀಡಿವೆ. ಇದರ ಫಲಿತಾಂಶದ ಏನಿರಬಹುದೆಂಬ ಕುತೂಹಲ ಎಲ್ಲರನ್ನೂ ಕಾಡಿದೆ. ರಾಜ್ಯದಲ್ಲೂ ಪ್ರಾಯೋಗಿಕವಾಗಿ ಕೋವಿಡ್ 19 ಸೋಂಕಿಗೆ ಆಯುರ್ವೇದ ಚಿಕಿತ್ಸೆ ನೀಡುವುದಕ್ಕೆ ಸರ್ಕಾರ ಅವಕಾಶ ನೀಡಿತ್ತು. 

Latest Videos
Follow Us:
Download App:
  • android
  • ios