ಹಾಲಿ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ನಿವೃತ್ತಿ ಬಳಿಕ ಡಾ.ರಜನೀಶ್ ಗೋಯಲ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಡಾ.ರಜನೀಶ್ ಗೋಯಲ್ ಅವರು ನ. 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. 

ಬೆಂಗಳೂರು(ನ.21): ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ಅವರು ನೇಮಕ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಹಾಲಿ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ನಿವೃತ್ತಿ ಬಳಿಕ ಡಾ.ರಜನೀಶ್ ಗೋಯಲ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಡಾ.ರಜನೀಶ್ ಗೋಯಲ್ ಅವರು ನ. 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಡಾ.ರಜನೀಶ್ ಗೋಯಲ್ ಅವರು ಹಾಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹಾಗೂ ಗೃಹ ಇಲಾಖೆ ಕಾರ್ಯದರ್ಶಿಯೂ ಆಗಿದ್ದಾರೆ. 

ಸಿದ್ದರಾಮಯ್ಯಗೆ ಸಂಕಷ್ಟ ತಂದ ಹಲೋ ಅಪ್ಪಾಜಿ ವಿಡಿಯೋ, ಆರೋಪ-ಪ್ರತ್ಯಾರೋಪದ ಸುರಿಮಳೆ!

ಸಿಎಂ ಭೇಟಿ ಮಾಡಿದ ರಜನೀಶ್ ಗೋಯೆಲ್

ಡಾ.ರಜನೀಶ್ ಗೋಯಲ್ ಅವರು ತಾಜ್ ವೆಸ್ಟ್ ಎಂಡ್ ಹೊಟೇಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿದ್ದಾರೆ. ಸಿಎಂ ಭೇಟಿಯಾದ ಕೆಲವೇ ಕ್ಷಣಗಳಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್‌ ನಾಯಕ ರಣದೀಪ್‌ ಸಿಂಗ್‌ ಸುರ್ಜೆವಾಲಾ ಸಭೆಯ ನಡುವೆಯೇ ರಜನೀಶ್ ಗೋಯೆಲ್ ಸಿಎಂ ಭೇಟಿ ಮಾಡಿದ್ದಾರೆ.