ಸೌಜನ್ಯ ಕೇಸ್‌: ಭಕ್ತರು ಗೊಂದಲಕ್ಕೆ ಈಡಾಗದಂತೆ ಡಾ.ಹೆಗ್ಗಡೆ ಮನವಿ

ಸೌಜನ್ಯ ಸಾವು ಪ್ರಕರಣದಲ್ಲಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ವಿನಂತಿಸಿದ್ದಾರೆ.

Dr Veerendra Heggade appeals to devotees not to be confused For Sowjanaya Case gvd

ಬೆಳ್ತಂಗಡಿ (ಆ.02): ಸೌಜನ್ಯ ಸಾವು ಪ್ರಕರಣದಲ್ಲಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ವಿನಂತಿಸಿದ್ದಾರೆ. ಈ ಕುರಿತು ಧರ್ಮಾಧಿಕಾರಿಯವರು ಮಂಗಳವಾರ ಪ್ರಕಟಣೆ ನೀಡಿದ್ದು, ಪ್ರಕಟಣೆಯ ಪೂರ್ಣವಿವರ ಇಂತಿದೆ:

2012ರಲ್ಲಿ ನಡೆದ ಪಾಂಗಳ ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಸಿಐಡಿ ನಂತರದಲ್ಲಿ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿಬಿಐ ಮೂಲಕ ತನಿಖೆ ನಡೆಸುವಂತೆ ಸರ್ಕಾರವನ್ನು ಶ್ರೀ ಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸಲಾಗಿತ್ತು. ಅದರಂತೆ ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಆದೇಶಿಸಿರುತ್ತದೆ. ಅದರಂತೆ ತನಿಖೆ ನಡೆಸಿ ಇಲಾಖೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತದೆ.

ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌, ಬೆಟ್ಟಿಂಗ್‌ ನಿಷೇಧ ಚಿಂತನೆ: ಸಿಎಂ ಸಿದ್ದರಾಮಯ್ಯ

ನಂತರದಲ್ಲಿ ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪಿತನನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದು ತಿಳಿದಿದೆ. ಆ ನಂತರದಲ್ಲಿ ಕೆಲವು ವ್ಯಕ್ತಿಗಳು ಶ್ರೀ ಕ್ಷೇತ್ರವನ್ನು ಹಾಗೂ ನಮ್ಮ ಕುಟುಂಬವನ್ನು ಗುರಿಯಾಗಿರಿಸಿಕೊಂಡು ಸುಳ್ಳು ಆರೋಪ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದರಿಂದ ಶ್ರೀ ಕ್ಷೇತ್ರದ ಭಕ್ತರಲ್ಲಿ ಹಾಗೂ ಕ್ಷೇತ್ರದೊಂದಿಗೆ ತೊಡಗಿಸಿಕೊಂಡಿರುವ ಅನೇಕರಿಗೆ ಖೇದ ಉಂಟಾಗಿದ್ದು ಈ ಮೂಲಕ ಸಮಸ್ತ ಭಕ್ತಾದಿಗಳಲ್ಲಿ ಹಾಗು ಸಾರ್ವಜನಿಕರ ಗಮನಕ್ಕೆ ತರ ಬಯಸುವುದೆಂದರೆ ಈ ಪ್ರಕರಣದ ಬಗ್ಗೆ ಶ್ರೀ ಕ್ಷೇತ್ರದ ವತಿಯಿಂದ ಈಗಾಗಲೇ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಲಾಗಿತ್ತು. ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ. 

Gruha Jyoti Scheme: ಆಗಸ್ಟ್‌ ಮೊದಲನೇ ದಿನದಿಂದಲೇ ಶೂನ್ಯ ಬಿಲ್‌ ವಿತರಣೆ ಶುರು

ಆ ಪ್ರಕಾರ ಸರ್ಕಾರ ಅತ್ಯುನ್ನತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ದೋಷಾರೋಪಣ ಪಟ್ಟಿಸಲ್ಲಿಸಿ ನ್ಯಾಯಾಲಯಕ್ಕೆ ಪ್ರಕರಣವನ್ನು ವಿಚಾರಣೆಗಾಗಿ ಒಳಪಡಿಸಿರುತ್ತದೆ. ಪ್ರಸ್ತುತ ಈ ವಿಚಾರವು ನ್ಯಾಯಾಲಯ, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡುವರೇ ಒತ್ತಾಯಿಸುತ್ತೇನೆ. ಈ ಬಗ್ಗೆ ಕ್ರಮ ಕೈಗೊಳ್ಳುವರೇ ಸರ್ಕಾರವನ್ನು ಒತ್ತಾಯಿಸುತ್ತೇನೆ. ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದಾಗಿ ವಿನಂತಿಸುತ್ತೇನೆ.

Latest Videos
Follow Us:
Download App:
  • android
  • ios