ಮಿಡಿ ಹಾಕಿದ್ರೆ ದೇವೀರಮ್ಮನ ದರ್ಶನ ಇಲ್ಲ: ದೇಗುಲದ ಹೊಸ ನಿಯಮ ಏನ್ ಹೇಳುತ್ತೆ?
ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧದ ಬೆನ್ನಲ್ಲೇ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸದ್ದಿಲ್ಲದೆ ಡ್ರೆಸ್ ಕೋಡ್ ಅನ್ನು ತರುವ ನಿಟ್ಟಿನಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮುಂದಾಗಿದೆ.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು (ಆ.05): ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧದ ಬೆನ್ನಲ್ಲೇ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸದ್ದಿಲ್ಲದೆ ಡ್ರೆಸ್ ಕೋಡ್ ಅನ್ನು ತರುವ ನಿಟ್ಟಿನಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮುಂದಾಗಿದೆ. ದೀಪಾವಳಿ ಸಮಯದಲ್ಲಿ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಭೇಟಿ ದೇವಿ ದರ್ಶನವನ್ನು ಪಡೆಯುವ , ಐತಿಹಾಸಿಕ ಹಿನ್ನೆಲೆರುವ ದೇವಿರಮ್ಮನ ದೇವಾಲಯದಲ್ಲಿ ಡ್ರೆಸ್ ಕೋಡ್ ಜಾರಿಗೆ ತರುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಮುಂದಾಗಿದೆ.
ಸಾಂಪ್ರಾದಾಯಿಕ ಉಡುಗೆಯಲ್ಲಿ ಆಗಮಿಸಲು ಭಕ್ತರಿಗೆ ಸೂಚನೆ: ದೇವಿರಮ್ಮನ ದೇಗುಲಕ್ಕೆ ಡ್ರೆಸ್‌ಕೋಡ್ ಆದೇಶ ಜಾರಿಯಾಗಿದ್ದು, ಸಾಂಪ್ರದಾಯಿಕ ಉಡುಗೆಯಲ್ಲಿ ಆಗಮಿಸಲು ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸೂಚನೆ ನೀಡಿದೆ.ಇನ್ನು ಮುಂದೆ ಚಿಕ್ಕಮಗಳೂರು ತಾಲೂಕಿನ ಇತಿಹಾಸ ಪ್ರಸಿದ್ಧ ಬಿಂಡಿಗ ದೇವಿರಮ್ಮನ ದೇವಾಲಯದಲ್ಲಿ ಸ್ಕರ್ಟ್, ಮಿಡಿ, ಸ್ಲೀವ್ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ.
ಕುಸಿದ ಒಣದ್ರಾಕ್ಷಿ ದರ: ಸಂಕಷ್ಟಕ್ಕೆ ಸಿಲುಕಿದ ರಾಜ್ಯದ ದ್ರಾಕ್ಷಿ ಬೆಳೆಗಾರರು!
ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್ಗೂ ನೀಷೇಧ ಹೇರಲಾಗಿದೆ. ದೇವರ ದರ್ಶನ ಪಡೆಯುಲು ಬರುವ ಭಕ್ತರು ಮೊಬೈಲ್ ನಲ್ಲಿ ಪೋಟೋ, ಸೆಲ್ಪಿ ತೆಗೆದುಕೊಳ್ಳಲು ಮುಂದಾಗುತ್ತಿದ್ದರು. ಇದರಿಂದ ಸಿಬ್ಬಂದಿಗಳಿಗೆ, ಆಡಳಿತ ಮಂಡಳಿ ಸದಸ್ಯರಿಗೆ ಕಿರಿಕಿರಿ ಉಂಟಾಗುತಿತ್ತು. ಈ ಹಿನ್ನಲೆಯಲ್ಲಿ ದೇವಸ್ಥಾನದ ಆವರಣದ ಒಳಗೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ.
ವೆಡ್ಡಿಂಗ್ ಶೂಟ್ ಹಾಗೂ ರೀಲ್ಸ್‌ಗೆ ಅವಕಾಶವಿಲ್ಲ: ದೀಪಾವಳಿ ವೇಳೆ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಪ್ರತಿವರ್ಷ ಲಕ್ಷಾಂತರ ಭಕ್ತರು ದೇವಿರಮ್ಮನ ಬೆಟ್ಟ ಹತ್ತುತ್ತಾರೆ. ಮಧ್ಯರಾತ್ರಿಯೇ ಪಿರಮಿಡ್ ಆಕಾರದ ಬೆಟ್ಟ ಹತ್ತಿ ಭಕ್ತಿ ಸಮರ್ಪಿಸುತ್ತಾರೆ. ಮಕ್ಕಳಿಂದ ವೃದ್ಧರವರೆಗೂ ಬೆಟ್ಟ ಹತ್ತಿ ಬೆಟ್ಟದ ತಾಯಿಗೆ ಕೈಮುಗಿಯುತ್ತಾರೆ. ಯುವಕ-ಯುವತಿಯರೂ ಬರುತ್ತಾರೆ. ಅವರಲ್ಲಿ ಪ್ರೇಮಿಗಳು ಸಹಾ ಇರುತ್ತಾರೆ.
ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯ ನಿಯಮಾವಳಿಗಳನ್ನು ಮೀರಿಲ್ಲ: ಸಚಿವ ಮಹದೇವಪ್ಪ
ಯಾರೇ ಬಂದರೂ ಸಾಂಪ್ರದಾಯಿಕ ಉಡುಗೆಯಲ್ಲೇ ಬರಬೇಕೆಂದು ದೇವಾಲಯ ಸೂಚನೆ ನೀಡಿದೆ. ದೇವಾಯದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಹಾಗೂ ರೀಲ್ಸ್‌ಗೆ ಅವಕಾಶವಿಲ್ಲ ಎಂದು ಸಂದೇಶ ನೀಡಿದೆ. ಸುಂದರವಾದ ಹಚ್ಚ ಹಸಿರನ ತಾಣದಲ್ಲಿ ದೇವಸ್ಥಾನವಿದ್ದು ಪ್ರಶಾಂತವಾದ ಸ್ಥಳವಾದ ಹಿನ್ನೆಲೆಯಲ್ಲಿ ಹಲವರು ಪ್ರೀ ವೆಡ್ಡಿಂಗ್ ಶೂಟ್ ಹಾಗೂ ರೀಲ್ಸ್ ಮಾಡುತ್ತಿದ್ದರು. ದೇವಸ್ಥಾನದ ಆಡಳಿತ ಮಂಡಳಿ ಒಪ್ಪಿಗೆಯನ್ನೂ ಪಡೆಯದೇ ಪೋಟೋ ಶೂಟ್ ಮಾಡುತ್ತಿರುವ ಹಿನ್ನಲೆಯಲ್ಲಿ ದೇವಸ್ಥಾನ ಮುಂಭಾಗದಲ್ಲಿ ನಿಷೇಧ ಬೋರ್ಡ್ ಹಾಕಲಾಗಿದೆ.