ಕುಡಿದು ವಾಹನ ಓಡಿಸಿದ್ರೆ ಡಿಎಲ್ ರದ್ದು: ಸಿಎಂ ಸಿದ್ದರಾಮಯ್ಯ
ಸರ್ಕಾರ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅಪಘಾತಗಳಿಂದ ಉಂಟಾಗುವ ಸಾವು ತಡೆಯಲು ವಿವಿಧ ಕಾರ್ಯಕ್ರಮ ಹಾಕಿಕೊಂಡಿದೆ. ಇಂತಹ ಕಾರ್ಯಕ್ರಮಗಳಿಗೆ ಸಾರ್ವಜನಿಕರೂ ಸಹ ರಸ್ತೆ ಸುರಕ್ಷತಾ ನಿಯಮ ಪಾಲಿಸುವ ಮೂಲಕ ಸಹಕರಿಸಬೇಕು. ವೇಗವಾಗಿ ವಾಹನ ಚಾಲನೆ ಮದ್ಯಪಾನ ಸೇವಿಸಿ ವಾಹನ ಚಲಾಯಿಸುವವರ ಪರವಾನಗಿ ರದುಪಡಿಸಲು ಕ್ರಮ ಕೈಗೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು(ಸೆ.24): ರಾಜ್ಯದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೀಗಾಗಿ ಮತ್ತೆ ಪಾನಮಾಡಿ ವಾಹನ ಚಲಾಯಿಸುವವರು ಮತ್ತು ಅತೀ ವೇಗವಾಗಿ ವಾಹನ ಚಲಾಯಿಸುವವರ ಚಾಲನಾ ಪರವಾನಗಿ ರದ್ದುಪಡಿಸಲು ಅಗತ್ಯ ಕ್ರಮಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಇಲಾಖೆಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧ ಆವರಣದಲ್ಲಿ 65 ಅತ್ಯಾಧುನಿಕ ಜೀವ ರಕ್ಷಕ ಸೌಲಭ್ಯವುಳ್ಳ ಆಂಬುಲೆನ್ಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅಪಘಾತಗಳಿಂದ ಉಂಟಾಗುವ ಸಾವು ತಡೆಯಲು ವಿವಿಧ ಕಾರ್ಯಕ್ರಮ ಹಾಕಿಕೊಂಡಿದೆ. ಇಂತಹ ಕಾರ್ಯಕ್ರಮಗಳಿಗೆ ಸಾರ್ವಜನಿಕರೂ ಸಹ ರಸ್ತೆ ಸುರಕ್ಷತಾ ನಿಯಮ ಪಾಲಿಸುವ ಮೂಲಕ ಸಹಕರಿಸಬೇಕು. ವೇಗವಾಗಿ ವಾಹನ ಚಾಲನೆ ಮದ್ರ ಪಾನ ಸೇವಿಸಿ ವಾಹನ ಚಲಾಯಿಸುವವರ ಪರವಾನಗಿ ರದುಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸೂಚಿಸಿದರು.
ಮುಡಾ: ಪ್ರಾಸಿಕ್ಯೂಷನ್ ಭವಿಷ್ಯ ಇಂದು ನಿರ್ಧಾರ: ಸಿದ್ದು ರಾಜೀನಾಮೆಯೋ?, ಕಾನೂನು ಹೋರಾಟವೋ?
ಮುಖ್ಯಮಂತ್ರಿ ಆಪತ್ಕಾಲಯಾನ ಆ್ಯಂಬುಲೆನ್ಸ್‌ಗಳಿಗೆ ಸಿದ್ದು ಚಾಲನೆ
ಬೆಂಗಳೂರು ಅಪಘಾತದ ಸಂದರ್ಭಗಳಲ್ಲಿನ ಗೋಲ್ಡನ್ ಅವರ್‌ನಲ್ಲಿ ತುರ್ತು ಚಿಕಿತ್ಸೆ ದೊರೆಯಲು 'ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ'ಯ ಅತ್ಯಾಧುನಿಕ ಜೀವರಕ್ಷಕ ಸೌಲಭ್ಯಗಳುಳ್ಳ 65 ಆ್ಯಂಬುಲೆನ್ಸ್‌ಗಳ ಉಚಿತ ಸೇವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇವೆಯಶಸ್ಸು ಆಧರಿಸಿ ಮುಂದಿನ ಹಂತದಲ್ಲಿ ಪ್ರತಿ ತಾಲೂಕಿನಲ್ಲೂ ಪ್ರತ್ಯೇಕ ಆ್ಯಂಬುಲೆನ್ಸ್ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ, ರಸ್ತೆ ಸುರಕ್ಷತಾ ಪ್ರಾಧಿಕಾರ ವಿಧಾನಸೌಧ ಮುಂಭಾಗ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಆಯುಲೆನ್ಸ್ ಗಳಿಗೆ ಹಸಿರು ನಿಕಾನೆ ತೋರಿ ಮಾತನಾಡಿದರು.
ವೆಂಟಿಲೇಟರ್ ಹಾಗೂ ಅತ್ಯಾಧುನಿಕ ಜೀವ ರಕ್ಷಕ (ಲೈಫ್ ಸಪೋರ್ಟ್) ವ್ಯವಸ್ಥೆಯುಳ್ಳ ಆ್ಯಂಬುಲೆನ್ಸ್ ಸೇವೆಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು. ಅಪಘಾತ ಸಂಭವಿಸುವ ಬ್ಲಾಕ್ ಸ್ಪಾಟ್‌ಗಳಿಗೆ ಈ ಸೇವೆ ದೊರೆಯಲಿದ್ದು, ಇದಕ್ಕಾಗಿ 65 ಸ್ಥಳ ಗುರುತಿಸಲಾಗಿದೆ. 65 ಆ್ಯಂಬುಲೆನ್ಸ್‌ಗಳ ಪೈಕಿ 26 ಆ್ಯಂಬುಲೆನ್ಸ್‌ಗಳಲ್ಲಿ ವೆಂಟಿಲೇಟರ್ ಸೇರಿದಂತೆ ಆಡ್ವಾನ್ಸ್ ಲೈಫ್ ಸಪೋರ್ಟ್ ತಂತ್ರ ಜ್ಞಾನ ಅಳವಡಿಸಲಾ ಗಿದೆ. ಅಪಘಾತಗಳ ಸಂದರ್ಭದಲ್ಲಿ ಆಂಬುಲೆನ್ಗಳು ಹತ್ತಿರದ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಿಗೆ ಗಾಯಾಳುಗಳನ್ನು ರವಾನಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.