ಡ್ರೋನ್ ಬಳಸಿ ಎಸ್‌ಎಸ್‌ಎಲ್ಸಿ ಪರೀಕ್ಷೆ ಅಕ್ರಮ ತಡೆಗೆ ಚಿಂತನೆ
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆಯವುದನ್ನು ತಪ್ಪಿಸಲು ಪರೀಕ್ಷಾ ಕೇಂದ್ರಗಳ ಮೇಲೆ ಡ್ರೋನ್ ಕ್ಯಾಮೆರಾ ಕಣ್ಣಿಡಬೇಕು ಎಂದು ತಜ್ಞರು ಸಲಹೆ ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದೆ.
ಬೆಂಗಳೂರು (ಆ.6) : ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆಯವುದನ್ನು ತಪ್ಪಿಸಲು ಪರೀಕ್ಷಾ ಕೇಂದ್ರಗಳ ಮೇಲೆ ಡ್ರೋನ್ ಕ್ಯಾಮೆರಾ ಕಣ್ಣಿಡಬೇಕು ಎಂದು ತಜ್ಞರು ಸಲಹೆ ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ(SSLC Exams)ಯಲ್ಲಿ ಅಕ್ರಮಗಳನ್ನು ತಡೆಗಟ್ಟುವ ಬಗ್ಗೆ ಇತ್ತೀಚೆಗೆ ಶಿಕ್ಷಣ ಇಲಾಖೆ(Education depertment) ಸಭೆ ನಡೆಸಿತ್ತು. ಸಭೆಯಲ್ಲಿ ಪಾಲ್ಗೊಂಡಿದ್ದ ಕೆಲ ತಜ್ಞರು ಡ್ರೋನ್ ಕ್ಯಾಮೆರಾ ಕಣ್ಗಾವಲು, ನೀಟ್ ಮಾದರಿಯಲ್ಲಿ ವಸ್ತ್ರ ಸಂಹಿತೆ ಜಾರಿ, ಪ್ರಶ್ನೆ ಪತ್ರಿಕೆಗಳಲ್ಲಿ ಕ್ಯೂಆರ್ ಕೋಡ್ ಅಳವಡಿಕೆ ಸೇರಿದಂತೆ ಹಲವು ಸಲಹೆ ನೀಡಿದ್ದರು. ಆದ್ದರಿಂದ ಪರೀಕ್ಷೆ ಸಮಯದಲ್ಲಿ ಡ್ರೋನ್ ಕ್ಯಾಮೆರಾಗಳನ್ನು ಬಾಡಿಗೆಗೆ ಪಡೆದು ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಯಲು ಇಲಾಖೆ ಮುಂದಾಗಿದೆ ಎಂದು ತಿಳಿದುಬಂದಿದೆ.
ವಾರೆ ವ್ಹಾ..ಇನ್ಮುಂದೆ ಡ್ರೋನ್ ಮೂಲಕ ಮನೆ ಬಾಗಿಲಿಗೆ ಬರಲಿದೆ ಪಿಜ್ಜಾ, ವಿಡಿಯೋ ವೈರಲ್
ತಜ್ಞರ ಸಲಹೆಗಳನ್ನು ಆಧರಿಸಿ ಬೆಂಗಳೂರು ಉತ್ತರ ಜಿಲ್ಲೆಯ ಉಪ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ನೆಲ ಮಹಡಿಗೆ ಬದಲಾಗಿ ಮೊದಲನೇ ಮಹಡಿಯಲ್ಲಿ ಪರೀಕ್ಷೆ ನಡೆಸಬೇಕು. ಪ್ರಶ್ನೆ ಪತ್ರಿಕೆಗಳ ಬಂಡಲ್ ತೆಗೆಯುವುದು, ಸೀಲ್ ಮಾಡುವುದನ್ನು ವೆಬ್ ಕಾಸ್ಟಿಂಗ್ ಮಾಡಬೇಕು. ಬಾಡಿಗೆ ಡ್ರೋನ್ ಕ್ಯಾಮೆರಾಗಳ ಮೂಲಕ ಅಕ್ರಮ ತಡೆಯಬೇಕು ಎಂದು ಸೂಚಿಸಿದ್ದಾರೆ.
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಶೇ.100ರಷ್ಟುಸಿಸಿ ಕ್ಯಾಮೆರಾ ಅಳವಡಿಕೆ ಸಾಧ್ಯವಾಗದೆ ಇರುವ ಹಿನ್ನೆಲೆಯಲ್ಲಿ ಡ್ರೋನ್ ಕ್ಯಾಮೆರಾ ಮೂಲಕ ಪರೀಕ್ಷಾ ಅಕ್ರಮ ತಡೆಯಲು ಇಲಾಖೆ ಮುಂದಾಗಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.
ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಡ್ರೋನ್ ಹಾರಿಸಿದ ಇಬ್ಬರ ಬಂಧನ