ಗರ ಸಂಚಾರ ಪೊಲೀಸರು ಶನಿವಾರ ರಾತ್ರಿ ನಗರದ ವಿವಿಧೆಡೆ ನಡೆಸಿದ ಡ್ರಂಕ್ ಆ್ಯಂಡ್ ಡ್ರೈವ್ ವಿರುದ್ಧದ ವಿಶೇಷ ಕಾರ್ಯಾಚರಣೆ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸಿದ 43 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು (ಫೆ.19): ನಗರ ಸಂಚಾರ ಪೊಲೀಸರು ಶನಿವಾರ ರಾತ್ರಿ ನಗರದ ವಿವಿಧೆಡೆ ನಡೆಸಿದ ಡ್ರಂಕ್ ಆ್ಯಂಡ್ ಡ್ರೈವ್ ವಿರುದ್ಧದ ವಿಶೇಷ ಕಾರ್ಯಾಚರಣೆ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸಿದ 43 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನಗರದ ಮೆಜೆಸ್ಟಿಕ್, ಆನಂದರಾವ್ ವೃತ್ತ, ಮೌರ್ಯ ಸರ್ಕಲ್, ಯಶವಂತಪುರ, ಶಾಂತಿನಗರ, ಕೆ.ಆರ್.ಪುರ ಸೇರಿದಂತೆ ನಗರದ ವಿವಿಧೆಡೆ ಸಂಚಾರ ಪೊಲೀಸರು ಡ್ರಂಕ್ ಆ್ಯಂಡ್ ಡ್ರೈವ್ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. 3,804 ವಿವಿಧ ವಾಹನಗಳ ಚಾಲಕರನ್ನು ತಪಾಸಣೆ ಮಾಡಿದ್ದಾರೆ.
ಈ ಪೈಕಿ ದ್ವಿಚಕ್ರ ವಾಹನ 14, ಕಾರು/ಕ್ಯಾಬ್ 13, ಆಟೋರಿಕ್ಷಾ 4, 12 ಖಾಸಗಿ ಬಸ್‌ಗಳು ಸೇರಿದಂತೆ ಒಟ್ಟು 43 ವಾಹನಗಳ ಪಾನಮತ್ತ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಡ್ರಂಕ್ ಆ್ಯಂಡ್ ಡ್ರೈವ್ ವಿರುದ್ಧದ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಪದೇಪದೆ ರೂಲ್ಸ್ ಬ್ರೇಕ್ ಮಾಡ್ತಿದ್ದ ವಾಹನ ಸವಾರರಿಗೆ ಬಿಗ್ ಶಾಕ್; ₹50,000+ ದಂಡ ಬಾಕಿ ಇದ್ದ 85 ವಾಹನ ಜಪ್ತಿ!
