Asianet Suvarna News Asianet Suvarna News

3ನೇ ಅಲೆಗೆ ಮುಂಚೆ ಮಕ್ಕಳಿಗೆ ವಿಟಮಿನ್‌ ಮಾತ್ರೆ, ಡ್ರೈ ಫ್ರೂಟ್ಸ್

  •  ಕೊರೋನಾ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ
  • ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಸರ್ಕಾರದಿಂದಲೇ ಪೌಷ್ಠಿಕ ಆಹಾರ
  • ಕಂದಾಯ ಸಚಿವ ಆರ್‌.ಅಶೋಕ್‌ ಮಾಹಿತಿ
Dry Fruits Vitamin Tablets will distribute to children before 3rd wave snr
Author
Bengaluru, First Published Jun 29, 2021, 7:43 AM IST

 ಬೆಂಗಳೂರು (ಜೂ.29):  ಕೊರೋನಾ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿರುವ ಹಿನ್ನೆಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಸರ್ಕಾರದಿಂದಲೇ ಪೌಷ್ಠಿಕ ಆಹಾರ ಒದಗಿಸಲು ಸಿದ್ಧತೆ ನಡೆದಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದರು.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲೂ ಸಾವಿರದಿಂದ ಮೂರು ಸಾವಿರದವರೆಗೆ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿದ್ದಾರೆ. 

ಕೊರೋನಾ 3ನೇ ಅಲೆ: ಮಕ್ಕಳಿಗೇ 95,000 ಬೆಡ್‌ ಬೇಕು..! ..

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಅಪೌಷ್ಠಿಕತೆ ಹೊಂದಿರುವ ಸುಮಾರು 1500 ಮಕ್ಕಳಿದ್ದಾರೆ. ಅಪೌಷ್ಠಿಕತೆ ಹೊಂದಿರುವ ಮಕ್ಕಳಿಗೆ ರಾಜ್ಯಾದ್ಯಂತ 2 ತಿಂಗಳು ವಿಟಮಿನ್‌ ಯುಕ್ತ ಮಾತ್ರೆ, ಹಣ್ಣು, ಹಾಲು, ಡ್ರೈ ಫ್ರೂಟ್ಸ್ ನೀಡಲು ತಯಾರಿ ನಡೆದಿದೆ. ಈ ಸಂಬಂಧ ಮಾಹಿತಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios