ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್!
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್‌ಗೆ ಬಂದಿರುವ ಈ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
ಬೆಂಗಳೂರು (ಸೆ.28): ರಾಜಧಾನಿಯ ರೇಸ್ ಕೋರ್ಸ್ ರಸ್ತೆ ಬಳಿ ಇರುವ ಪ್ರತಿಷ್ಠಿತ ಖಾಸಗಿ ಹೊಟೇಲ್ ಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊಟೇಲ್ ಇದಾಗಿದ್ದು, ತಕ್ಷಣ ಪೊಲೀಸರು ಎಚ್ಚೆತ್ತು ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಳಿಕ ಇದು ಹುಸಿ ಬಾಂಬ್ ಕರೆ ಎಂಬುದು ಸ್ಪಷ್ಟವಾಗಿದೆ.
ನಗರದ ತಾಜ್ ವೆಸ್ಟೆಂಡ್ ಹೋಟೆಲ್ ಗೆ ಇ ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಇದು ನಗರದ ಲಕ್ಷುರಿ ಹೊಟೇಲ್ ಗಳಲ್ಲಿ ಒಂದಾಗಿದ್ದು, ರಾಜಕಾರಣಿಗಳು, ಕ್ರಿಕೆಟರ್ ಗಳು, ಸಿನೆಮಾ ತಾರೆಯರು ಆಗಾಗ ವಾಸ್ತವ್ಯ ಹೂಡುವ ಪ್ರತಿಷ್ಠಿತ ಹೋಟೆಲ್ ಆಗಿದೆ. ಮಾಹಿತಿ ಬಂದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೊಸೂರು ಟಾಟಾ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, ಬೆಂಕಿ ನಂದಿಸಲು ಹರಸಾಹಸ!
ತಾಜ್ ವೆಸ್ಟ್ ಎಂಡ್ ಹೋಟೆಲ್ ಪರಿಶೀಲನೆ ಬಳಿಕ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಮಾಹಿತಿ ನೀಡಿ, ಸ್ಥಳಕ್ಕೆ ಬಾಂಬ್ ಸ್ಕ್ವಾಂಡ್ ,ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇದೊಂದು ಹುಸಿ ಬಾಂಬ್ ಇ ಮೇಲ್ ಅನ್ನೋದು ಗೊತ್ತಾಗಿದೆ. ಸದ್ಯ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.
ದಕ್ಷಿಣ ಕನ್ನಡದ ಮನಮೋಹಕ ಕುತ್ಲೂರಿಗೆ ರಾಷ್ಟ್ರಪ್ರಶಸ್ತಿ ಗರಿ, ವಿಶ್ವ ಪ್ರವಾಸಿಗರ ದೃಷ್ಟಿ ಈಗ ಸುಂದರ ಹಳ್ಳಿ ಮೇಲೆ!
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸಂಸ್ಥೆಗಳು, ಶಾಲೆಗಳು, ಆಸ್ಪತ್ರೆಗಳು ಮತ್ತು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಮೇಲ್‌ಗಳನ್ನು ಕಳುಹಿಸುವ ಬೆದರಿಕೆ ಹೆಚ್ಚುತ್ತಿದೆ. ಈವರೆಗೆ ಬಂದಿರುವುದೆಲ್ಲ ನಕಲಿ ಎಂದು ಬಳಿಕ ತನಿಖೆಯಿಂದ ತಿಳಿದಿದೆ. ಆದರೂ ಕಳೆದ ಮಾರ್ಚ್ 1 ರಂದು ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದ ಬಳಿಕ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಕಳೆದ ಮೇ ತಿಂಗಳಿನಲ್ಲಿ ಕೂಡ ನಗರದ ಕೆಲವು ಫೈವ್ ಸ್ಟಾರ್ ಹೊಟೇಲ್ ಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು.