ಅಕ್ರಮ ಹಣ ಪ್ರಕರಣದಲ್ಲಿ ಜಾಮೀನು ಸಿಕ್ಕ ಖುಷಿಯಲ್ಲಿರುವ ಮಾಜಿ ಸಚಿವ ಶಿವಕುಮಾರ್ ಗೆ ಇಡಿ ಮತ್ತೆ ಸಂಕಷ್ಟ ತಂದಿಟ್ಟಿದೆ. ಡಿಕೆಶಿಗೆ ಜಾಮೀನು ಮಂಜೂರು ಮಾಡಿದ ವಿರುದ್ಧವಾಗಿ ಇಡಿ ಒಂದು ಹೆಜ್ಜೆ ಮುಂದೆ ಹೋಗಿದೆ.

ನವದೆಹಲಿ, (ಅ.24): ಹವಾಲಾ ಹಣ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿದ್ದ ಕಾಂಗ್ರೆಸ್ ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಕೊನೆಗೂ ಜಾಮೀನು ಸಿಕ್ಕಿದೆ. ಆದ್ರೆ ಇಡಿ ಅಧಿಕಾರಿಗಳು ಮಾತ್ರ ಡಿಕೆಶಿ ಬೆನ್ನು ಬಿಡುತ್ತಿಲ್ಲ.

ಡಿಕೆ ಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಈ ಒಂದೇ ಒಂದು ಕಾರಣಕ್ಕೆ ಡಿಕೆಶಿಗೆ ಜಾಮೀನು ಸಿಕ್ಕಿದ್ದು: ಏನದು?

ಇಂದು [ಬುಧವಾರ] ದೆಹಲಿ ಹೈಕೋರ್ಟ್ ತೀರ್ಪು ಡಿಕೆಶಿಗೆ ಜಾಮೀನು ನೀಡುತ್ತಿದ್ದಂತೆಯೇ ಮತ್ತೊಂದೆಡೆ ಇದನ್ನು ಪ್ರಶ್ನಿಸಿ ಇ.ಡಿ ಪರ ವಕೀಲ ಕೆ.ಎಂ.ನಟರಾಜ್ ಅವರು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಇಡಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ ಅಂದ್ರೆ ಗುರುವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಬರುವ ಸಾಧ್ಯತೆಗಳು ಹೆಚ್ಚಿದ್ದು, ಏನು ಆಗುತ್ತೆ ಎನ್ನುವುದುನ್ನು ಕಾದು ನೋಡಬೇಕಿದೆ. 

ಡಿಕೆಶಿಗೆ ಬಿಗ್ ರಿಲೀಫ್: ಕೊನೆಗೂ ತಿಹಾರ್ ಜೈಲಿನಿಂದ ಹೊರಕ್ಕೆ

ಬುಧವಾರ ದೆಹಲಿ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಸುರೇಶ್‍ಕುಮಾರ್ ಕೈಟಾ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದ್ದರು. ಶಿವಕುಮಾರ್ ಪ್ರಭಾವಿ ವ್ಯಕ್ತಿಯಾಗಿದ್ದು ಅವರಿಗೆ ಜಾಮೀನು ನೀಡದಂತೆ ಇಡಿ ಪರ ವಕೀಲರು ನ್ಯಾಯಾಧೀಶರಿಗೆ ಮನವಿ ಮಾಡಿದ್ದರು.

ಆರೋಪಿಯು ಅತ್ಯಂತ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಸಾಕ್ಷಾಧಾರಗಳನ್ನು ನಾಶಪಡಿಸಲಿದ್ದಾರೆ. ಹೀಗಾಗಿ ಅವರ ಜಾಮೀನು ಅರ್ಜಿಯನ್ನು ವಜಾ ಮಾಡುವಂತೆ ನಟರಾಜ್ ಕೋರಿದ್ದರು. ಆದರೆ ದೆಹಲಿ ಹೈಕೋರ್ಟ್ ಶಿವಕುಮಾರ್‍ ಗೆ ಬುಧವಾರ ಜಾಮೀನು ಮಂಜೂರು ಮಾಡಿದೆ.