ED raid on Mohammed Nalapad:ಬೆಂಗಳೂರಿನ 17 ಕಡೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ್ದು, ಶಾಸಕ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ಅವರ ನಿವಾಸದ ಮೇಲೂ ದಾಳಿ ನಡೆದಿದೆ. 

ಬೆಂಗಳೂರಿನ 17ಕಡೆ ಜಾರಿ ನಿರ್ದೇಶನಾಲಯ ದಾಳಿ

ಬೆಂಗಳೂರಿನ 17 ಕಡೆ ಕೇಂದ್ರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನಿವಾಸದ ಮೇಲೆಯೂ ದಾಳಿ ನಡೆದಿದೆ. ಅಶೋಕ್ ನಗರದಲ್ಲಿರುವ ನಲಪಾಡ್ ನಿವಾಸದ ಮೇಲೆ ಇಡಿ ದಾಳಿ ನಡೆಸಿದ್ದು, ನಿವಾಸದಲ್ಲಿ ಶೋಧ ಕಾರ್ಯ ನಡೆಸುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಟ್ ಕಾಯಿನ್ ದಂಧೆ ಆರೋಪಿ ಶ್ರೀಕಿ ಜೊತೆ ಲಿಂಕ್

ಕಾಂಗ್ರೆಸ್ ಶಾಸಕ ನಲಪಾಡ್ ಹ್ಯಾರಿಸ್ ಬಿಡಿಎ ಅಧ್ಯಕ್ಷರಾಗಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಜೊತೆ ಇವರಿಗೆ ಲಿಂಕ್ ಇರುವ ಆರೋಪ ಕೇಳಿ ಬಂದಿದೆ. ಶಾಸಕ ನಲಪಾಡ್ ಹ್ಯಾರಿಸ್ ಹಾಗೂ ಪುತ್ರ ಮೊಹಮ್ಮದ್ ನಲಪಾಡ್ ಇಬ್ಬರ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ.

ಬೆಳಗ್ಗೆ ಆರು ಗಂಟೆಯಿಂದಲೇ ಶೋಧ ಕಾರ್ಯಾಚರಣೆ

ಅಶೋಕ್ ನಗರದಲ್ಲಿರುವ ನಿವಾಸದಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಸಿಆರ್‌ಪಿಎಫ್ ಸಿಬ್ಬಂದಿಯಿಂದ ಭದ್ರತೆ ಒದಗಿಸಲಾಗಿದ್ದು, ಭಾರಿ ಭದ್ರತೆಯಲ್ಲಿ ಈ ಇಡಿ ರೈಡ್ ನಡೆದಿದೆ. ಬೆಳಗ್ಗೆ 6 ಗಂಟೆಗೆ ಇಡಿ ಅಧಿಕಾರಿಗಳು ನಿವಾಸಕ್ಕೆ ಆಗಮಿಸಿದ್ದು, ಹ್ಯಾರಿಸ್ ನಿವಾಸದಲ್ಲಿ ಶೋಧ ನಡೆಸುತ್ತಿದ್ದಾರೆ. ಸುಮಾರು 12 ಮಂದಿ ಇಡಿ ಅಧಿಕಾರಿಗಳಿಂದ ಶೋಧ ನಡೆಯುತ್ತಿದೆ.

ಇದನ್ನೂ ಓದಿ: ಆಡುಗಳ ಸಾಯಿಸಿದ ನಾಯಿ, ನಾಯಿಗೆ ವಿಷವಿಟ್ಟ ಮನುಷ್ಯ: ವಿಷಪೂರಿತ ನಾಯಿಗಳ ತಿಂದು 25ಕ್ಕೂ ಹೆಚ್ಚು ಅತೀ ಅಪರೂಪದ ರಣಹದ್ದುಗಳು ಸಾವು