ನಾಳೆ ಬಕ್ರೀದ್ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಲಿರುವ ಸಿಎಂ
ನಾಳೆ ಬಕ್ರೀದ್ ಹಬ್ಬ ಹಿನ್ನೆಲೆ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆಯುವ ಸಾಮೂಹಿಕ ಪ್ರಾರ್ಥನೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರು (ಜೂ.16): ನಾಳೆ ಬಕ್ರೀದ್ ಹಬ್ಬ ಹಿನ್ನೆಲೆ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆಯುವ ಸಾಮೂಹಿಕ ಪ್ರಾರ್ಥನೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ (ಜೂ.17)ಬೆಳಗ್ಗೆ 9 ಗಂಟೆಗೆ ಈದ್ಗಾ ಮೈದಾನದಲ್ಲಿ ನಡೆಯಲಿರುವ ಮುಸಲ್ಮಾನ ಬಾಂಧವರ ಸಾಮೂಹಿಕ ಪ್ರಾರ್ಥನೆ. ಅದೇ ವೇಳೆಗೆ ಈದ್ಗಾ ಮೈದಾನದ ಆಗಮಿಸಿ ಮುಸ್ಲಿಂ ಬಾಂಧವರಿಗೆ ಶುಭಾಶಯ ತಿಳಿಸಿ ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಬಕ್ರೀದ್ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ರಸ್ತೆಗಳು, ಫ್ಲೈ ಓವರ್‌ಗಳಲ್ಲಿ ವಾಹನ ಸಂಚಾರ ನಿಷೇಧ
ಅಧಿಕಾರದಲ್ಲಿದ್ದಾಗಲೂ, ಇಲ್ಲದಿದ್ದಾಗಲೂ ಪ್ರತಿವರ್ಷ ಬಕ್ರೀದ್ ಆಚರಣೆ ವೇಳೆ ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗುತ್ತಾ ಬಂದಿದ್ದಾರೆ. ಮುಸ್ಲಿಂ ಧರ್ಮಗುರುಗಳಿಂದ ಸಂಪ್ರದಾಯಿಕವಾಗಿ ಟೋಪಿ ಧರಿಸಿ, ನಾವೆಲ್ಲರೂ ಮನುಷ್ಯರು ಪರಸ್ಪರ ಪ್ರೀತಿಯಿಂದ ಇರಬೇಕು ಎಂಬ ಸಂದೇಶವನ್ನು ನೀಡುತ್ತಾ ಬಂದಿದ್ದಾರೆ. ಅದೇ ರೀತಿ ಈ ಬಾರಿ ಸಂಭ್ರಮ ಸಡಗರದಿಂದ ಆಚರಿಸಲಿರುವ ಬಕ್ರೀದ್ ಹಬ್ಬದಂದು ಸಹ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.