ಸಿಟಿಸ್ಕ್ಯಾನ್ ವೇಳೆ ವೃದ್ಧೆಯನ್ನು ವಿವಸ್ತ್ರಗೊಳಿಸಿ ಲೈಂಗಿಕ ಕಿರುಕುಳ; ಖಾಸಗಿ ಆಸ್ಪತ್ರೆ ಲ್ಯಾಬ್ ಟೆಕ್ನಿಶಿಯನ್ ಬಂಧನ
ನ್ನನ್ನು ಕೆಲಸದಿಂದ ತೆಗೆದು ಹಾಕಲು ಕೆಲವರು ನಿರತಂತರ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದಿವ್ಯಾಂಗ ವ್ಯಕ್ತಿಯೊಬ್ಬ ಜಿಲ್ಲಾಧಿಕಾರಿ ಕಚೇರಿ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ನಡೆದಿದೆ.
ಬೆಂಗಳೂರು (ಸೆ.8) : ಸಿಟಿ ಸ್ಕಾ್ಯನ್ ವೇಳೆ ವೃದ್ಧೆ ರೋಗಿಯೊಬ್ಬರನ್ನು ವಿವಸ್ತ್ರಗೊಳಿಸಿ ಅನುಚಿತ ವರ್ತನೆ ತೋರಿದ ಆರೋಪದ ಮೇರೆಗೆ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಶಿಯನ್‌ನನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಶ್ವನಾಗೇನಹಳ್ಳಿ ನಿವಾಸಿ ಅಶೋಕ್ ಬಂಧಿತನಾಗಿದ್ದು, ಹೆಬ್ಬಾಳ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ 60 ವರ್ಷದ ವೃದ್ಧೆ ದಾಖಲಾಗಿದ್ದರು. ಆಗ ರಾತ್ರಿ 1.30ರ ಸುಮಾರಿಗೆ ಸಿಟಿ ಸ್ಕಾ್ಯನ್‌ಗೆ ವೈದ್ಯರು ಸೂಚಿಸಿದ್ದರು. ಅಂತೆಯೇ ಸ್ಕಾ್ಯನಿಂಗ್‌ಗೆ ವೃದ್ಧೆ ತೆರಳಿದ್ದಾಗ ಲ್ಯಾಬ್ ಟಿಕ್ನಿಶಿಯನ್ ಅಸಭ್ಯ ವರ್ತನೆ ತೋರಿದ್ದಾನೆ. ಈ ಸಂಬಂಧ ಕೊಡಿಗೇಹಳ್ಳಿ ಠಾಣೆಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಲೈಂಗಿಕ ಕಿರುಕುಳ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಅಶೋಕ್ ಮೂಲತಃ ಪಶ್ಚಿಮ ಬಂಗಾಳ ರಾಜ್ಯದವನಾಗಿದ್ದು, 9 ತಿಂಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಲಾಡ್ಲಾಪುರ ಹೈಸ್ಕೂಲ್ ಮುಖ್ಯ ಶಿಕ್ಷಕ ಬಂಧನ
ಕೆಲಸದಿಂದ ತೆಗೆದುಹಾಕಲು ಯತ್ನ; ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿ
ಕಲಬುರಗಿ: ತನ್ನನ್ನು ಕೆಲಸದಿಂದ ತೆಗೆದು ಹಾಕಲು ಕೆಲವರು ನಿರತಂತರ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದಿವ್ಯಾಂಗ ವ್ಯಕ್ತಿಯೊಬ್ಬ ಜಿಲ್ಲಾಧಿಕಾರಿ ಕಚೇರಿ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ನಡೆದಿದೆ.
ಅಣವೀರಪ್ಪ ಗೌಡಗಾಂವ ಎಂಬುವರೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ತಕ್ಷಣವೇ ಪೊಲೀಸರು ಮತ್ತು ಸಹೋದ್ಯೋಗಿಗಳು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಣವೀರಪ್ಪ ಅವರು ಅಫಜಲಪುರ ತಾಲೂಕಿನ ಉಡಚಣ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾಗಿ ಗೌರವ ಧನದ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ಕೆಲವರು ಅವರನ್ನು ಕೆಲಸದಿಂದ ತೆಗೆಯಲು ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್‌ಸ್ಟಾಗ್ರಾಮ್‌ನಲ್ಲಿ ಲೈಂಗಿಕ ಕಿರುಕುಳ: ಫೋಕ್ಸೋ ಕಾಯ್ದೆಯಡಿಯಲ್ಲಿ ಪ್ಯಾರಮೆಡಿಕಲ್ ವಿದ್ಯಾರ್ಥಿ ಬಂಧನ