Asianet Suvarna News Asianet Suvarna News

ಮತದಾರರಿಗೆ ಕುಕ್ಕರ್, ಮದ್ಯ ಪೂರೈಕೆ: ಕಟ್ಟುನಿಟ್ಟಿನ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ

ಕಾನೂನು ಉಲ್ಲಂಘಿಸಿದವರ ವಿರುದ್ದ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ ಚುನಾವಣಾ ಆಯೋಗ 

Election Commission Notice for Strict Action on Provision of Cooker Liquor to Voters grg
Author
First Published Feb 2, 2023, 12:00 AM IST

ಬೆಂಗಳೂರು(ಫೆ.02):  ವಿವಿಧ ರಾಜಕೀಯ ಪಕ್ಷಗಳು ಜನಸಾಮಾನ್ಯರಿಗೆ ವಿವಿಧ ರೀತಿಯ ಉಚಿತ ಉಡುಗೊರೆ/ಆಮಿಷಗಳನ್ನು ನೀಡುತ್ತಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಆಮಿಷ ಒಡ್ಡುವುದಕ್ಕೆ ಬ್ರೇಕ್ ಹಾಕಲು ಸೂಚನೆ ನೀಡಿದ್ದಾರೆ. 

ವಿವಿಧ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಕ್ಕರ್, ಮದ್ಯ, ಹಣದಂತಹ ಆಮಿಷಗಳನ್ನು ಒಡ್ಡುತ್ತಿರುವುದು ಮಾಧ್ಯಮಗಳ ಮೂಲಕ ಕಂಡು ಬಂದಿರುವುದರಿಂದ ಚುನಾವಣಾ ಆಯೋಗ ಎಚ್ಚೆತ್ತುಕೊಂಡಿದೆ. ಈ ಕುರಿತಂತೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ರು. ಆಮಿಷಗಳಿಗೆ ಬ್ರೇಕ್ ಹಾಕಲು ಕಾನೂನು ನಿಯಮಗಳಂತೆ ಕ್ರಮವಹಿಸಿ, ಕಾನೂನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ತೆಗದುಕೊಳ್ಳುವಂತೆ ನಿರ್ದೇಶನ ನೀಡಿದರು.

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್‌ಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ!

ಇಂದಿನ ಸಭೆಯಲ್ಲಿ  ಮುಂಬರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯ ಕುರಿತು ಪೂರ್ವಸಿದ್ದತೆ ಮಾಡಿಕೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿಗಳು ಸೂಚನೆ ನೀಡಿದರು. ಮತದಾರರಿಗೆ ಮದ್ಯಪಾನ ಸೇರಿದಂತೆ ವಿವಿಧ ರೀತಿಯ ಉಡುಗೂರೆಗಳ ಆಮಿಷಗಳನ್ನು ಕೂಪನ್‍ಗಳ ಮೂಲಕ ವಿತರಿಸುತ್ತಿರುವ ಬಗ್ಗೆ ಸಹ ಮಾಧ್ಯಮಗಳ ಮೂಲಕ ವರದಿಯಾಗುತ್ತಿದೆ. ಕಳೆದ ವರ್ಷದ ಈ ಸಮಯದಲ್ಲಿ ಮಾರಾಟವಾದ ಮದ್ಯ ಹಾಗೂ ಪ್ರಸ್ತುತ ಈಗ ಮಾರಾಟವಾಗುತ್ತಿರುವ ಮದ್ಯ  ಕುರಿತಂತೆ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಬೇಕು. ಅಂತರ ರಾಜ್ಯ ಚೆಕ್ ಪೋಸ್ಟ್‍ಗಳನ್ನು ತೆರೆಯಲು ಸೂಚಿಸಿದರು.

ಸಮಾಜದಲ್ಲಿ ನಡೆಯುತ್ತಿರುವ ಆಮಿಷಗಳ ಕುರಿತಂತೆ ಸಂಬಂಧಿತ ಇಲಾಖೆಗಳು ತಮ್ಮಲ್ಲಿರುವ ಮಾಹಿತಿಯನ್ನು ಅಂತರ ಇಲಾಖಾ ಮಟ್ಟದಲ್ಲಿ ಹಂಚಿಕೊಳ್ಳುವ ಮೂಲಕ ಸುಗಮ ಚುನಾವಣೆಗೆ ಎಲ್ಲರೂ ಕರ್ತವ್ಯ ನಿರ್ವಹಿಸಬೇಕು.
ವಿವಿಧ ಇಲಾಖೆಗಳ ಮೂಲಕ ಸ್ವೀಕರಿಸಲಾಗುವ ನೋಂದಾಯಿತ ಪ್ರಕರಣಗಳ ಕುರಿತು ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳಲಿದೆ. ಹಣ ಮತ್ತು ಬಂಗಾರದಂತಹ ಬೆಲೆ ಬಾಳುವ ವಸ್ತುಗಳ ಸಾಗಣಿಕೆ ಮೇಲೆ ನಿಗಾವಹಿಸಬೇಕು.
ಮಾದಕ ವಸ್ತುಗಳ ಸಾಗಣಿಕೆ, ಮಾರಾಟದ ಮೇಲೆ ಕಣ್ಣಿಡಬೇಕು, ಇದಕ್ಕೆ ಸಂಬಂಧಿಸಿದಂತೆ ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ಇದಕ್ಕಾಗಿ ವಿಶೇಷ ನೂಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.

ಹಣದ ರೂಪದಲ್ಲಿ ಮತ್ತು ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳ ಮೂಲಕ ನಡೆಯುವ ಚಲಾವಣೆಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಮನೋಜ್ ಕುಮಾರ್ ಸೂಚಿಸಿದರು. 

Dharwad: ಕಡ್ಡಾಯ ಮತದಾನ ಮಾಡೋಣ- ಸದೃಡ ದೇಶ ನಿರ್ಮಿಸೋಣ: ಡಿಸಿ ಗುರುದತ್ತ ಹೆಗಡೆ ಸಲಹೆ

ಸಮಾಜಘಾತುಕ ಭಾಷಣ/ ಸಮಾಜದ ನೆಮ್ಮದಿ ಕದಡುವ ಹಾಗೂ ದ್ವೇಷವನ್ನು ಹರಡುವ ಮಾತುಗಳು ಮತ್ತು ಅಂತಹ ಸಭೆಗಳ ಮೇಲೆ ನಿಗಾವಹಿಸಬೇಕು. ಆ ರೀತಿಯ ಘಟನೆಗಳು ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು. 

ಭಾರತ ಚುನಾವಣಾ ಆಯೋಗದ ಹಿರಿಯ ಉಪ ಚುನಾವಣಾ ಆಯುಕ್ತರ ಅಧ್ಯಕ್ಷತೆಯಲ್ಲಿ ದಿನಾಂಕ: 24.11.2022 ರಂದು ರಾಜ್ಯ ಹಾಗೂ ಕೇಂದ್ರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಕುರಿತು ತೆಗೆದುಕೊಂಡಿರುವ ಕ್ರಮ ಮತ್ತು ವರದಿಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

Follow Us:
Download App:
  • android
  • ios