ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ಪೂರ್ವ ತಯಾರಿ ಪರಿವೀಕ್ಷಣೆ ನಡೆಸಲು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ರಾಜ್ಯಕ್ಕೆ ಆಗಮಿಸಿದೆ. 

ಬೆಂಗಳೂರು (ಮಾ.9): ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ಪೂರ್ವ ತಯಾರಿ ಪರಿವೀಕ್ಷಣೆ ನಡೆಸಲು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಬಂದಿಳಿಯಿತು. ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರ ತಂಡದಲ್ಲಿ ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಈ ತಂಡದಲ್ಲಿದ್ದಾರೆ.

ಚುನಾವಣೆ ಹೊತ್ತಲ್ಲಿ ದೈವದ ಮೊರೆ: ಅಧಿಕಾರ, ಆರೋಗ್ಯ ವೃದ್ಧಿಗೆ ಎಚ್‌ಡಿಕೆ ಕುಟುಂಬ ಮಹಾಯಾಗ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ , ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್‌ ಮೀನಾ ಅವರು ಸ್ವಾಗತಿಸಿದರು.

ಚುನಾವಣಾ ಆಯೋಗದ ಅಧಿಕಾರಿ ನೇಮಕ ಸಮಿತಿಯಲ್ಲಿ ಇನ್ನು ಸಿಜೆಐಗೂ ಸ್ಥಾನ!

ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಚುನಾವಣಾಧಿಕಾರಿಗಳಾಗಿರುವ ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ, ಡಿಜಿಪಿ ಮತ್ತು ಐಜಿ ಪ್ರವೀಣ್ ಸೂದ್, ಕರ್ನಾಟಕ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಆರ್. ವೆಂಕಟೇಶಕುಮಾರ್, ರಾಜೇಂದ್ರ ಚೋಳನ್,
ಬೆಂಗಳೂರು ‌ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಇತರರು ಇದ್ದರು.