ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ದಿನದಿಂದ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆಯೂ ಜಾರಿಯಾಗಿದೆ ಮತ್ತು ಚುನಾವಣೆಯಲ್ಲಿ ಮತದಾರರಿಗೆ ಹಣ, ಉಡುಗೊರೆಗಳ ಕೊಡುವ ಮೂಲಕ ಮತದಾರರಿಗೆ ಲಂಚ ನೀಡುವುದನ್ನು ತಡೆಯಲು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಕಟ್ಟೆಚ್ಚರವಹಿಸಿದ್ದಾರೆ.

ಮಾಗಡಿ (ಮಾ.21): ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ದಿನದಿಂದ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆಯೂ ಜಾರಿಯಾಗಿದೆ ಮತ್ತು ಚುನಾವಣೆಯಲ್ಲಿ ಮತದಾರರಿಗೆ ಹಣ, ಉಡುಗೊರೆಗಳ ಕೊಡುವ ಮೂಲಕ ಮತದಾರರಿಗೆ ಲಂಚ ನೀಡುವುದನ್ನು ತಡೆಯಲು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಕಟ್ಟೆಚ್ಚರವಹಿಸಿದ್ದಾರೆ.

ಚುನಾವಣಾ ಅಭ್ಯರ್ಥಿ ಪರವಾಗಿ ಮತ ನೀಡುವಂತೆ ಮತದಾರರಿಗೆ ಹಂಚಲು ಕಾಂಗ್ರೆಸ್ ಮುಖಂಡನ ಕುಕ್ಕರ್, ಡಿನ್ನರ್ ಸೆಟ್‌ಗಳು ಇಟ್ಟಿರುವ ಖಚಿತ ಮಾಹಿತಿ ಮೇರೆಗೆ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಒಟ್ಟು 140 ಡಿನ್ನರ್ ಸೆಟ್‌ಗಳು ವಶಕ್ಕೆ ಪಡೆಯಲಾಗಿದೆ.

ಧಾರವಾಡ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ

ಮಾಗಡಿ ತಾಲೂಕು ತಟವಾಳು ಗ್ರಾಮದ ಕಾಂಗ್ರೆಸ್ ಮುಖಂಡ ಪ್ರಕಾಶ ಎಂಬುವವರ ಮನೆಯಲ್ಲಿ ಮತದಾರರಿಗೆ ಹಂಚಲು ಕುಕ್ಕರ್, ಡಿನ್ನರ್ ಸೆಟ್‌ಗಳನ್ನು ಇಡಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು. ಇಂದು ಮನೆಯ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡ ಅಧಿಕಾರಿಗಳು.