ಬೆಂಗಳೂರಿನಲ್ಲಿ ಜು.21ರಿಂದ ಆ.21ರವರೆಗೆ ಮತದಾರಪಟ್ಟಿವಿಶೇಷ ಪರಿಷ್ಕರಣೆ ನಡೆಯಲಿದ್ದು, ಮತದಾರರು ತಮ್ಮ ಹೆಸರು ಸೇರ್ಪಡೆ, ಹೆಸರು ಬದಲಾವಣೆ, ಸ್ಥಳ ಬದಲಾವಣೆ, ಮತದಾರ ಪಟ್ಟಿಯಿಂದ ಹೆಸರು ತೆಗೆಯುವುದು ಸೇರಿದಂತೆ ಮೊದಲಾದ ಪರಿಷ್ಕರಣೆ ಮಾಡಿಕೊಳ್ಳಬಹುದಾಗಿದೆ.

ಬೆಂಗಳೂರು (ಜು.21) :  ಬೆಂಗಳೂರಿನಲ್ಲಿ ಜು.21ರಿಂದ ಆ.21ರವರೆಗೆ ಮತದಾರಪಟ್ಟಿವಿಶೇಷ ಪರಿಷ್ಕರಣೆ ನಡೆಯಲಿದ್ದು, ಮತದಾರರು ತಮ್ಮ ಹೆಸರು ಸೇರ್ಪಡೆ, ಹೆಸರು ಬದಲಾವಣೆ, ಸ್ಥಳ ಬದಲಾವಣೆ, ಮತದಾರ ಪಟ್ಟಿಯಿಂದ ಹೆಸರು ತೆಗೆಯುವುದು ಸೇರಿದಂತೆ ಮೊದಲಾದ ಪರಿಷ್ಕರಣೆ ಮಾಡಿಕೊಳ್ಳಬಹುದಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರತ ಚುನಾವಣಾ ಆಯೋಗ ಮತದಾರರ ಪಟ್ಟಿವಿಶೇಷ ಸಂಕ್ಷಿಪ್ತ ಪರಿಷ್ಕಣೆಗೆ ಜುಲೈ 21ರಿಂದ ಆಗಸ್ಟ್‌ 21ರ ವರೆಗೆ ಅವಕಾಶ ನೀಡಿದೆ. ಮತಗಟ್ಟೆಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಬಿಎಲ್‌ಒ ತಂತ್ರಾಂಶದ ಮೂಲಕ ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಕೆಲಸ ಮಾಡಲಿದ್ದಾರೆ. ಸಾರ್ವಜನಿಕರು, ಅಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಮನವಿ ಮಾಡಲಾಗಿದೆ.

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರಿಸೋದು ಹೇಗೆ? ಇಲ್ಲಿದೆ ಡೀಟೇಲ್ಸ್‌

ಅಧಿಕಾರಿಗಳ ಸಭೆ: ಮತದಾರರ ಪಟ್ಟಿವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಗುರುವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬೂತ್‌ ಅಧಿಕಾರಿಗಳು ಮನೆ ಮನೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಬೂತ್‌ ಮಟ್ಟದ ಏಜೆಂಟ್‌ಗಳಲ್ಲಿ ಸ್ಥಳದಲ್ಲಿರಬೇಕು. ಬೂತ್‌ ಮಟ್ಟದ ಏಜೆಂಟ್‌ಗಳನ್ನು ನಿಯೋಜಿಸುವಂತೆ ರಾಜಕೀಯ ಪಕ್ಷಗಳಿಗೆ ಸೂಚಿಸ ಲಾಯಿತು. ವಿಶೇಷ ಪರಿಷ್ಕರಣೆ ಸಂಬಂಧ ಈಗಾಗಲೇ ಎಲ್ಲಾ 28 ವಿಧಾನಸಭಾ ಕ್ಷೇತ್ರದ ಮತಗಟ್ಟೆಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ಬೂತ್‌ ಮಟ್ಟದ ಅಧಿಕಾರಿಗಳು ಕೊರತೆ ಇರುವ ಕಡೆ ಅಧಿಕಾರಿಗಳನ್ನು ನಿಯೋಜಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್‌ ಕುಮಾರ್‌ ಘೋಷ್‌, ಸಹಾಯಕ ಆಯುಕ್ತ ಅಜಯ್‌ ಉಪಸ್ಥಿತರಿದ್ದರು.

ಮೊಬೈಲ್‌ನಲ್ಲೇ ವೋಟರ್‌ ಲಿಸ್ಟ್‌ಗೆ ಅರ್ಜಿ ಹಾಕಿ: ಹೊಸ ಮತದಾರರ ನೋಂದಣಿಗೆ ಬಿಬಿಎಂಪಿ ಜಾಗೃತಿ