ಮುಂದಿನ 3 ವರ್ಷವೂ ವಿದ್ಯುತ್ ದರ ಏರಿಕೆ?
ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನ.30 ಕೊನೆಯ ದಿನವಾಗಿತ್ತು. ಆ ಗಡುವಿನೊಳಗೆ ಎಲ್ಲಾ ಎಸ್ಕಾಂಗಳು ಕೂಡ ದರ ಏರಿಕೆಗೆ ಪ್ರಸ್ತಾವನೆ ಕೊಟ್ಟಿವೆ. ದರ ಏರಿಕೆ ಒಟ್ಟೊಟ್ಟಿಗೆ ಬಹುತೇಕ ಏಕ ಮಾದರಿಯಲ್ಲಿಯೇ ಆಗಲಿದೆ ಎಂದು ಕೆಇಆರ್‌ಸಿ ಮೂಲಗಳು ತಿಳಿಸಿವೆ.
ಬೆಂಗಳೂರು(ಡಿ.06): ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ(ಬೆಸ್ಕಾಂ) ಸೇರಿ ರಾಜ್ಯದ ಎಲ್ಲ ಎಸ್ಕಾಂಗಳು ತನ್ನ ಗ್ರಾಹಕರಿಗೆ ವಿದ್ಯುತ್ ದರ ಹೆಚ್ಚಳದ ಶಾಕ್ ನೀಡಲು ಮುಂದಾಗಿವೆ. ಸುಮಾರು 60 ಪೈಸೆಯಿಂದ 1 ರು.ವರೆಗೆ ಪ್ರತಿ ಯುನಿಟ್ ದರ ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಮನವಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ.
ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನ.30 ಕೊನೆಯ ದಿನವಾಗಿತ್ತು. ಆ ಗಡುವಿನೊಳಗೆ ಎಲ್ಲಾ ಎಸ್ಕಾಂಗಳು ಕೂಡ ದರ ಏರಿಕೆಗೆ ಪ್ರಸ್ತಾವನೆ ಕೊಟ್ಟಿವೆ. ದರ ಏರಿಕೆ ಒಟ್ಟೊಟ್ಟಿಗೆ ಬಹುತೇಕ ಏಕ ಮಾದರಿಯಲ್ಲಿಯೇ ಆಗಲಿದೆ ಎಂದು ಕೆಇಆರ್‌ಸಿ ಮೂಲಗಳು ತಿಳಿಸಿವೆ.
15 ವರ್ಷ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ: ಇಂದಿನಿಂದಲೇ ಜಾರಿ
ಬೆಸ್ಕಾಂ ಪ್ರಸ್ತಾಪ ಏನು?:
ಮುಂದಿನ ಮೂರು ವರ್ಷಗಳ ಕಾಲ ಕ್ರಮವಾಗಿ ಪ್ರತಿ ಯುನಿಟ್‌ಗೆ 67 ಪೈಸೆ, 75 ಪೈಸೆ ಹಾಗೂ 91 ಪೈಸೆಯಂತೆ ದರ ಹೆಚ್ಚಳ ಮಾಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬೆಸ್ಕಾಂ ಮನವಿ ಸಲ್ಲಿಸಿದೆ. ತನ್ನ ದರ ಪರಿಷ್ಕರಣೆಯ ಮನವಿ ಪ್ರಸ್ತಾವನೆಯಲ್ಲಿ ಮುಂದಿನ ವರ್ಷದಲ್ಲಿ (2025-26) ಬೆಸ್ಕಾಂಗೆ 2,572.69 ಕೋಟಿ ರು.ಗಳಷ್ಟು ಆದಾಯ ಕೊರತೆ ಉಂಟಾಗಲಿದೆ. ಇದನ್ನು ನೀಗಿಸಲು 2025ರ ಏ.1ರಿಂದ ಅನ್ವಯವಾಗುವಂತೆ 2025-26ರ ಸಾಲಿಗೆ ಪ್ರತಿ ಯುನಿಟ್‌ಗೆ 67 ಪೈಸೆಯಂತೆ ದರ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದೆ.
ಇನ್ನು 2026-27ನೇ ಆರ್ಥಿಕ ವರ್ಷದಲ್ಲಿ 3,018.95 ಕೋಟಿ ರು. ಆದಾಯ ಕೊರತೆ ಉಂಟಾಗಲಿದೆ. ಹೀಗಾಗಿ 2026-27ನೇ ಸಾಲಿಗೆ ಪ್ರತಿ ಯುನಿಟ್ ಗೆ 75 ಪೈಸೆ ದರ ಹೆಚ್ಚಳ ಮಾಡಬೇಕು. 2027-28ರಲ್ಲಿ 3,882.69 ಕೊರತೆ ಉಂಟಾಗಲಿದ್ದು, ಪ್ರತಿ ಯುನಿಟ್‌ಗೆ 91 ಪೈಸೆ ಪರಿಷ್ಕರಣೆ ಮಾಡಬೇಕು ಎಂದು ಬೆಸ್ಕಾಂ ಕೋರಿದೆ.
ಎಚ್‌ಟಿ ಗ್ರಾಹಕರಿಗೆ ನಿಗದಿತ ಶುಲ್ಕವನ್ನೂ ಪರಿಷ್ಕರಣೆ ಮಾಡಬೇಕು ಎಂಬುದು ಸೇರಿ ಹಲವು ಅಂಶಗಳನ್ನು ಪ್ರಸ್ತಾವನೆಯಲ್ಲಿ ಸಲ್ಲಿಕೆ ಮಾಡಿದೆ. ಬೆಸ್ಕಾಂ ಸೇರಿ ಎಲ್ಲಾ ಎಸ್ಕಾಂಗಳು ದರ ಏರಿಕೆ ಬಗ್ಗೆ ಪ್ರಸ್ತಾವನೆ ಮಾತ್ರ ಸಲ್ಲಿಸಿವೆ. ಈ ಬಗ್ಗೆ ಕೆಇಆರ್‌ಸಿಯು ಸಾರ್ವಜನಿಕರು, ಉದ್ಯಮಿಗಳು, ವ್ಯಾಪಾರಸ್ಥರು ಸೇರಿ ಎಲ್ಲಾ ವರ್ಗದವರಿಂದ ಅಹವಾಲು ಸ್ವೀಕರಿಸುತ್ತದೆ. ಬಳಿಕ ಅಂತಿಮವಾಗಿ ದರ ಹೆಚ್ಚಳದ ಅಂತಿಮ ಆದೇಶ ಹೊರಡಿಸುತ್ತದೆ. ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಈ ಆದೇಶ ಹೊರ ಬೀಳಲಿದ್ದು, 2025ರ ಏ.1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ.
ಏ.1ರಿಂದ ಮತ್ತೆ ವಿದ್ಯುತ್ ದರ ಏರಿಕೆ ಶಾಕ್ ; ಪ್ರತಿ ಯುನಿಟ್‌ಗೆ ಎಷ್ಟು ಹೆಚ್ಚಳ?
ಮೊಬೈಲ್ ರಿಚಾರ್ಜ್‌ನಂತೆ ಇನ್ಮುಂದೆ ಬೆಸ್ಕಾಂ ರೀಚಾರ್ಜ್ ಪ್ಲಾನ್; ನೀವು ಹಣ ಕಟ್ಟಿದಷ್ಟೇ ಕರೆಂಟ್ ಸಪ್ಲೈ!
ಬೆಂಗಳೂರು: ಬೆಂಗಳೂರಿನಲ್ಲಿ ಇನ್ನುಮುಂದೆ ಮೊಬೈಲ್ ರೀಚಾರ್ಜ್ ಮಾದರಿಯಲ್ಲಿಯೇ ಅಡ್ವಾನ್ಸ್ ಆಗಿಯೇ ಬೆಸ್ಕಾಂ ರೀಚಾರ್ಜ್ ಮಾಡಿಸಿಕೊಂಡು ವಿದ್ಯುತ್ ಅನ್ನು ಪಡೆಯುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ನೀವು ರೀಚಾರ್ಜ್ ಮಾಡಿದ ಹಣದ ಮೌಲ್ಯದಷ್ಟು ವಿದ್ಯುತ್ ಪೂರೈಕೆಯಾದ ನಂತರ ತಂತಾನೆ ಸ್ಥಗಿತಗೊಳ್ಳುತ್ತದೆ. ಆಗ ಪುನಃ ರೀಚಾರ್ಜ್ ಮಾಡಿ ವಿದ್ಯುತ್ ಪೂರೈಕೆಯನ್ನು ಪಡೆದುಕೊಳ್ಳಬಹುದು. ಇದಕ್ಕಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಲು ಬೆಸ್ಕಾಂ ಮುಂದಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತಿರುವ ನಗರವಾಗಿರುವುದರಿಂದ ಇಲ್ಲಿ ವಾಸ ಮಾಡುವ ಜನರಿಂದ ದೊಡ್ಡ ಮಟ್ಟದಲ್ಲಿಯೇ ಹಣ ವಸೂಲಿ ಮಾಡಿ ಸುಗಮ ಸೇವೆಯನ್ನು ಕೊಡುವ ನಿಟ್ಟಿನಲ್ಲಿ ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ, ಬೆಸ್ಕಾಂ, ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಸೇವೆಗಳನ್ನು ಕೊಡಲು ಸರ್ಕಾರದಿಂದ ಯೋಜನೆ ರೂಪಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕೆಲವು ಮನೆಗಳಿಗಾಗಲೇ ನೀವು ಗೇಲ್ ಗ್ಯಾಸ್‌ನಿಂದ ಎಷ್ಟು ಮೀಟರ್ ಅಳವಡಿಕೆ ಮಾಡಿ ಗ್ಯಾಸ್ ಸಪ್ಲೈ ಮಾಡಲಾಗುತ್ತದೆ. ನೀವು ಬಳಕೆ ಮಾಡುವಷ್ಟು ಹಣವನ್ನು ಪಾವತಿ ಮಾಡಬೇಕಾಗುತ್ತದೆ.