Asianet Suvarna News Asianet Suvarna News

ವರ್ಷದ ಕೊನೆಯಲ್ಲಿ ಕರ್ನಾಟಕದ ಜನತೆಗೆ ಗುಡ್ ನ್ಯೂಸ್..!

ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ: ಸಚಿವ ಸುನಿಲ್‌ ಕುಮಾರ್‌ 

Electricity Tariff Reduction in Karnataka grg
Author
First Published Dec 30, 2022, 10:08 AM IST

ಬೆಂಗಳೂರು(ಡಿ.30):  ವರ್ಷದ ಕೊನೆಯಲ್ಲಿ ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿನ ಜನರಿಗೆ ಇಂಧನ ಸಚಿವ ಸುನಿಲ್‌ ಕುಮಾರ್‌ ಅವರು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೌದು, ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ ಅಂತ ತಿಳಿಸಿದ್ದಾರೆ. 

ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಅಂತ ಸಚಿವ ಸುನಿಲ್‌ ಕುಮಾರ್‌ ಟ್ವೀಟ್ ಮಾಡಿ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. 

 

ಆದರೆ, ವಿದ್ಯುತ್‌ ದರ ಕಡಿತ ಮಾಡಿದ್ದು ಕೇವಲ ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಮಾತ್ರ. ಇನ್ನುಳಿದ ಹೆಸ್ಕಾಂ ಹಾಗೂ ಜೆಸ್ಕಾಂ ವ್ಯಾಪ್ತಿಯಲ್ಲಿ ಜಾರಿಯಾಗಿಲ್ಲ. 
 

Follow Us:
Download App:
  • android
  • ios