15 ಶಾಲೆಗಳಿಗೆ ಇಮೇಲ್ ಬಾಂಬ್ ಬೆದರಿಕೆ ಪ್ರಕರಣ; ಇದರ ಮೂಲ ಪತ್ತೆ ಹಚ್ಚುವವರೆಗೆ ಬಿಡುವುದಿಲ್ಲ: ಗೃಹ ಸಚಿವ ಪರಮೇಶ್ವರ್

ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚಿನ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆ ಶಾಲಾ ಆಡಳಿತ ಮಂಡಳಿ, ಪೋಷಕರು ಬೆಚ್ಚಿಬಿದ್ದಿದ್ದಾರೆ. ಪೋಷಕರಲ್ಲಿ ಆತಂಕ ಹೆಚ್ಚಾದ ಕಾರಣ ಸುರಕ್ಷತಾ ದೃಷ್ಟಿಯಿಂದ ತಮ್ಮ ಮಕ್ಕಳನ್ನು ಶಾಲೆಯಿಂದ ಕರೆದೊಯ್ಯುತ್ತಿದ್ದಾರೆ.  ಬಾಂಬ್ ಬೆದರಿಕೆ ಹಿನ್ನೆಲೆ ಕೆಲ ಶಾಲೆಗಳಿಗೆ ರಜೆ ಘೊಷಣೆ ಮಾಡಲಾಗಿದೆ.

Email bomb threat case to 15 schools Home minister dr g parameshwar reaction at bengaluru rav

ಬೆಂಗಳೂರು (ಡಿ.1) : ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚಿನ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆ ಶಾಲಾ ಆಡಳಿತ ಮಂಡಳಿ, ಪೋಷಕರು ಬೆಚ್ಚಿಬಿದ್ದಿದ್ದಾರೆ. ಪೋಷಕರಲ್ಲಿ ಆತಂಕ ಹೆಚ್ಚಾದ ಕಾರಣ ಸುರಕ್ಷತಾ ದೃಷ್ಟಿಯಿಂದ ತಮ್ಮ ಮಕ್ಕಳನ್ನು ಶಾಲೆಯಿಂದ ಕರೆದೊಯ್ಯುತ್ತಿದ್ದಾರೆ.  ಬಾಂಬ್ ಬೆದರಿಕೆ ಹಿನ್ನೆಲೆ ಕೆಲ ಶಾಲೆಗಳಿಗೆ ರಜೆ ಘೊಷಣೆ ಮಾಡಲಾಗಿದೆ.

ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಂಡರು. ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಎಲ್ಲ ಸ್ವಾಡ್‌ಗಳನ್ನು ಕಳುಹಿಸಿ ತಪಾಸಣೆ ನಡೆಸಬೇಕು, ಶಾಲಾ ಸುತ್ತಮುತ್ತ ಕಟ್ಟೆಚ್ಚರಿಕೆ ವಹಿಸುವಂತೆ ನಿರ್ದೇಶಿಸಿದರು. 

ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್​ ಬೆದರಿಕೆ, ಯಾವೆಲ್ಲ ಸ್ಕೂಲ್ ಪಟ್ಟಿ ಇಲ್ಲಿದೆ

ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ಮಾಹಿತಿ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಬೆದರಿಕೆ ಬಂದಿರುವ 15 ಶಾಲೆಗಳಲ್ಲಿಯೂ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಲಿದ್ದಾರೆ. ಕಳೆದ ವರ್ಷವು ಇದೇ ರೀತಿ ಕರೆ ಬಂದಿತ್ತು ಎನ್ನಲಾಗುತ್ತಿದೆ. ಪ್ರಕರಣವನ್ನು  ಗಂಭೀರವಾಗಿ ಪರಿಗಣಿಸಲಾಗಿದೆ. ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶಿಲೀಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ‌ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ. ತುಮಕೂರಿನಿಂದ ಬೆಂಗಳೂರಿಗೆ ವಾಪಾಸ್ ಆದ ನಂತರ ಇಲಾಖೆಯ ಅಧಿಕಾರಿಗಳಿಂದ  ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಪೋಷಕರು ಮಕ್ಕಳು ಆತಂಕಪಡುವುದು ಬೇಡ ಎಂದರು.

ರಾತ್ರಿ ಮಂಕಿ ಕ್ಯಾಪ್ ಧರಿಸಿ ಬಂದಿದ್ದ ಕಿರಾತಕನಿಂದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮೇಲೆ ಮಾರಣಾಂತಿಕ ಹಲ್ಲೆ!

ಈಗಾಗಲೇ ಕಮಿಷನರ್ ಜೊತೆ ಮಾತನಾಡಿದ್ದೇನೆ. ಇಮೇಲ್‌ನಲ್ಲಿ ಟೈಪಿಂಗ್ ಮಾಡಿರುವುದು ನೋಡಿದ್ರೆ ಹೈ ಲೆವೆಲ್ ಟೆರರಿಸ್ಟ್ ತರ ಕಾಣುತ್ತೆ. ಅಲ್ಲಾಹ್ ಗೆ ತೊಂದರೆ ಮಾಡ್ತಿದ್ದೀರಿ, ಮುಂಬೈನಲ್ಲಿ ಗಲಾಟೆ ಮಾಡಿದ್ರಿ ಹೀಗೆಲ್ಲಾ ಮೆಸೇಜ್ ಮಾಡಿದ್ದಾರೆ. ಇವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ. ಇಲ್ಲಿ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್  ಬಂದಿದೆ. ಇಲ್ಲಿವರೆಗೇ ಏನೂ ಸಿಕ್ಕಿಲ್ಲ. ಸದ್ಯ ಹದಿನೈದು ಶಾಲೆಗೆ ಮೇಲ್ ಬಂದಿದೆ. ಇದರಿಂದ ಪೋಷಕರಲ್ಲಿ ಆತಂಕ ಶುರುವಾಗಿದೆ. ಏನೇ ಆದ್ರೂ ಮಕ್ಕಳೆ ಹೀಗಾಗಿ ನಾನೂ ಸಹ ಭೇಟಿ ನೀಡಿದ್ದೇನೆ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಸೂಕ್ತ ಭದ್ರತಾ, ತಪಾಸಣೆ ನಡೆಸಲಾಗುತ್ತದೆ ಎಂದು ಧೈರ್ಯ ತುಂಬಿದರು. 

Latest Videos
Follow Us:
Download App:
  • android
  • ios