ಮೌಲಾನಾ ಅಜಾದ್‌ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಇಂಗ್ಲಿಷ್‌ ಜೊತೆಗೆ ಕನ್ನಡ ಕಲಿಕೆಗೂ ಹೆಚ್ಚು ಒತ್ತು ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹ್ಮದ್‌ ಸೂಚಿಸಿದ್ದಾರೆ. ಅವರು ಸೋಮವಾರ ಅಬ್ದುಲ್‌ ಕಲಾಂ ಅಜಾದ್‌ ಭವನದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು.

ಬೆಂಗಳೂರು (ಜೂ.13) ಮೌಲಾನಾ ಅಜಾದ್‌ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಇಂಗ್ಲಿಷ್‌ ಜೊತೆಗೆ ಕನ್ನಡ ಕಲಿಕೆಗೂ ಹೆಚ್ಚು ಒತ್ತು ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹ್ಮದ್‌ ಸೂಚಿಸಿದ್ದಾರೆ.

ಅವರು ಸೋಮವಾರ ಅಬ್ದುಲ್‌ ಕಲಾಂ ಅಜಾದ್‌ ಭವನದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು.

ಅಲ್ಪಸಂಖ್ಯಾತ ವಸತಿ ಶಾಲೆಗಳಲ್ಲಿ ಭಾಷೆ ಕಲಿಕೆ ವಿಚಾರದಲ್ಲಿ ಇಂಗ್ಲಿಷ್‌ ಜತೆಗೆ ಕನ್ನಡ ಕಲಿಕೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಕನ್ನಡ ಕಲಿಯಲು ಅಗತ್ಯ ಶಿಕ್ಷಕರು ಹಾಗೂ ಸಂಪನ್ಮೂಲ ವ್ಯಕ್ತಿಗಳ ನೇಮಿಸಿಕೊಳ್ಳಬೇಕು. ಇಲ್ಲಿ ಈಗಾಗಲೇ ಇಂಗ್ಲಿಷ್‌ ಕಲಿಸುತ್ತಿದ್ದು, ಜತೆಗೆ ಕನ್ನಡ ಕಲಿಕೆಗೆ ಮಹತ್ವ ನೀಡಿ ಎಂದು ಹೇಳಿದರು.

ಆ.1ರಿಂದ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಸಚಿವ ಜಮೀರ್‌ ಜನತಾ ದರ್ಶನ

ತನಿಖೆಗೆ ಸೂಚನೆ: ಅಲ್ಪಸಂಖ್ಯಾತರ ಇಲಾಖೆ ಯೋಜನೆ ಮಾಹಿತಿ ನೀಡುವ ಸಲುವಾಗಿ ಸಹಾಯವಾಣಿ ನಿರ್ವಾಹಕರಿಗೆ ತಿಂಗಳಿಗೆ. 4ಲಕ್ಷ ವೇತನ ಪಾವತಿಸಿದ ಬಗ್ಗೆ ತನಿಖೆ ನಡೆಸುವಂತೆ ಸಚಿವರು ಸೂಚಿಸಿದರು. ಈವರೆಗೆ ಸಹಾಯವಾಣಿಯಿಂದ ಹೇಳಿಕೊಳ್ಳುವಂತ ಯಾವುದೇ ಪ್ರಯೋಜನ ಆಗಿಲ್ಲ. ಆದರೂ ಮುಂದುವರಿಸಿದ ಬಗ್ಗೆ ತನಿಖೆ ನಡೆಸಿ ವರದಿ ನೀಡಿ. ಸಹಾಯವಾಣಿ ಕೇಂದ್ರಕ್ಕೆ ವಾರ್ಷಿಕ . 2.5 ಕೋಟಿ ವೆಚ್ಚ ಮಾಡುತ್ತಿದ್ದರೂ ಪ್ರತ್ಯೇಕವಾಗಿ ಸಹಾಯವಾಣಿ ಅಗತ್ಯವೇನಿತ್ತು? ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕಿದೆ ಎಂದು ಸಚಿವರು ಹೇಳಿದರು.

ಹಜ್‌ ಭವನಕ್ಕೆ ಸಿದ್ದರಾಮಯ್ಯ 5000 ಕೋಟಿ ನೀಡಿಲ್ಲ: ಜಮೀರ್‌ ಅಹಮದ್‌ ಖಾನ್‌

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ವೇಳೆ ಡ್ರಾಪ್‌ಔಟ್‌ ಆಗದಂತೆ ಕ್ರಮ ವಹಿಸಲು ತಿಳಿಸಿರುವ ಅಗತ್ಯ ಇರುವೆಡೆ ವಸತಿಶಾಲೆ ನಿರ್ಮಿಸಲು ಸೂಚಿಸಿದ್ದಾರೆ. ರಾಜ್ಯದ ಎಲ್ಲ ತಾಲೂಕಲ್ಲಿ ವಸತಿಸಹಿತ ಶಾಲಾ ಕಾಲೇಜು ವ್ಯವಸ್ಥೆ ಕಡ್ಡಾಯವಾಗಿರುವಂತೆ ಇರುವಂತೆ ನೋಡಿಕೊಳ್ಳಿ ಎಂದರು.

ಇಲಾಖೆ ಕಾರ್ಯದರ್ಶಿ ಮನೋಜ… ಜೈನ್‌, ನಿರ್ದೇಶಕ ರಾಘವೇಂದ್ರ ಇದ್ದರು.