ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಸಲುವಾಗಿ ರಾಜ್ಯಸರ್ಕಾರಕ್ಕೆ ಆದಾಯ ಸಂಗ್ರಹ ಮಾಡಿಕೊಡುವ ಇಲಾಖೆಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಮಹತ್ವದ ಸಭೆ ನಡೆಸಿ ದ್ದಾರೆ.

ಬೆಂಗಳೂರು (ಜೂ.20) ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಸಲುವಾಗಿ ರಾಜ್ಯಸರ್ಕಾರಕ್ಕೆ ಆದಾಯ ಸಂಗ್ರಹ ಮಾಡಿಕೊಡುವ ಇಲಾಖೆಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಮಹತ್ವದ ಸಭೆ ನಡೆಸಿ ದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಜತೆ ನಡೆದ ಸಭೆಯಲ್ಲಿ ಆಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಿ ತನ್ಮೂಲಕ ನೋಂದಣಿ ಮತ್ತು ಮುದ್ರಾಂಕ ಶುಲ್ಕದ ಆದಾಯ ಹೆಚ್ಚಳ ಮಾಡಿಕೊಳ್ಳಬೇಕು. ಜತೆಗೆ, ಅಬಕಾರಿ ತೆರಿಗೆ ಪರಿಷ್ಕರಣೆ ಮಾಡಬೇಕು ಎಂಬುದರ ಬಗ್ಗೆ ಚರ್ಚೆಯಾಗಿರುವುದಾಗಿ ತಿಳಿದುಬಂದಿದೆ.

ವಾಣಿಜ್ಯ ತೆರಿಗೆ ಇಲಾಖೆಯಡಿ ಕಳೆದ ವರ್ಷ 32,000 ಕೋಟಿ ರು. ರಾಜಸ್ವ ಸಂಗ್ರಹವಾಗಿದೆ. ಈ ವರ್ಷ ತೆರಿಗೆ ಸೋರಿಕೆ ತಡೆದು ಕನಿಷ್ಠ 5 ಸಾವಿರ ಕೋಟಿ ರು. ಹೆಚ್ಚುವರಿ ತೆರಿಗೆ ಸಂಗ್ರಹಿಸಬೇಕು. 2023-24ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಶುಲ್ಕದಿಂದ 19,000 ಕೋಟಿ ರು. ಆದಾಯ ಸಂಗ್ರಹವಾಗಿದ್ದು, ಮಾರ್ಗಸೂಚಿ ದರ ಪರಿಷ್ಕರಣೆ ಮಾಡುವ ಮೂಲಕ ಆದಾಯ ಹೆಚ್ಚಳ ಮಾಡಬೇಕು. ಸಾರಿಗೆ ಇಲಾಖೆ ಆದಾಯ ಕನಿಷ್ಠ ಶೇ.15 ರಷ್ಟುಹೆಚ್ಚಿಸಬೇಕು ಎಂಬ ಬಗ್ಗೆ ಚರ್ಚೆ ನಡೆದಿರುವುದಾಗಿ ಮೂಲಗಳು ತಿಳಿಸಿವೆ.

ರಾಜ್ಯಾದ್ಯಂತ ಇಂದು ಕಾಂಗ್ರೆಸ್‌, ಬಿಜೆಪಿ ‘ಉಚಿತ ಅಕ್ಕಿ ಹೋರಾಟ’