ಕೃಷಿ ಪಂಪ್‌ಸೆಟ್ ಫೀಡರ್‌ಗಳಿಗೆ ಹಗಲು ವೇಳೆ ನಿರಂತರ 7 ಗಂಟೆಗಳ ಕಾಲ ‘ಮೂರು ಫೇಸ್’ ಹಾಗೂ ಗೃಹ ಬಳಕೆ ವಿದ್ಯುತ್ ಪೂರೈಕೆ ಮಾಡುವಲ್ಲಿ ಆಗುವ ವ್ಯತ್ಯಯಗಳಿಗೆ ವಲಯ ಮುಖ್ಯ ಎಂಜಿನಿಯರ್‌ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು (ಫೆ.25): ಕೃಷಿ ಪಂಪ್‌ಸೆಟ್ ಫೀಡರ್‌ಗಳಿಗೆ ಹಗಲು ವೇಳೆ ನಿರಂತರ 7 ಗಂಟೆಗಳ ಕಾಲ ‘ಮೂರು ಫೇಸ್’ ಹಾಗೂ ಗೃಹ ಬಳಕೆ ವಿದ್ಯುತ್ ಪೂರೈಕೆ ಮಾಡುವಲ್ಲಿ ಆಗುವ ವ್ಯತ್ಯಯಗಳಿಗೆ ವಲಯ ಮುಖ್ಯ ಎಂಜಿನಿಯರ್‌ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ (V Sunil Kumar) ಎಚ್ಚರಿಕೆ ನೀಡಿದ್ದಾರೆ.
ಬೇಸಿಗೆ ಕಾಲದಲ್ಲಿ ಮೂರು ತಿಂಗಳು ಕಾಲ ಗೃಹ, ವಾಣಿಜ್ಯ, ಕೈಗಾರಿಕೆ ಬಳಕೆ ಹಾಗೂ ಕೃಷಿ ಪಂಪಸೆಟ್‌ಗೆ ವಿದ್ಯುತ್ ಪೂರೈಕೆಗೆ ಸಂಬಂಧಪಟ್ಟಂತೆ ಹೆಚ್ಚು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಎಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಸಮಸ್ಯೆಗಳಿಗೆ ವಲಯ ಎಂಜಿನಿಯರ್‌ಗಳನ್ನು ಹೊಣೆ ಮಾಡಲಾಗುವುದು. ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿ ರೈತರು, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದರು.
‘ರಾಜ್ಯದಲ್ಲಿ ಸಾಮಾನ್ಯ ದಿನಗಳ ವಿದ್ಯುತ್ ಬಳಕೆ ಪ್ರಮಾಣ ಕಳೆದ ವರ್ಷಕ್ಕಿಂತ ಹೆಚ್ಚಿದೆ. ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ. ಆದರೆ ಸರಬರಾಜು ಸಂದರ್ಭದಲ್ಲಿ ವ್ಯತ್ಯಾಸವಾಗುತ್ತದೆ. ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ರಾಜ್ಯದ ಅನೇಕ ಭಾಗಗಳಿಂದ ಜನಪ್ರತಿನಿಧಿಗಳು , ರೈತಮುಖಂಡರು, ರೈತರು ನೀರಾವರಿ ಪಂಪ್‌ಸೆಟ್‌ಗಳಿಗೆ ಸರಕಾರದ ನಿಯಮಾವಳಿ ಪ್ರಕಾರ 7 ಗಂಟೆ ಮೂರು ಪೇಸ್ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ದೂರು ನೀಡುತ್ತಿದ್ದಾರೆ. ಇದಕ್ಕೆ ಹೊಣೆ ಯಾರು?’ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
Power Tariff Hike: ವಿದ್ಯುತ್ ದರ ಏರಿಸದಿದ್ದರೆ 4600 ಕೋಟಿ ‘ನಷ್ಟ’
ಪರಿಹಾರ ಬಿಡುಗಡೆ: ವಿದ್ಯುತ್ ಅವಘಡದಿಂದ ಎರಡು ಕೈ ಕಳೆದುಕೊಂಡಿದ್ದ ವ್ಯಕ್ತಿಗೆ ಕೃತಕ ಕೈ ಅಳವಡಿಸುವುದಕ್ಕೆ 2,56,236 ರು. ಪರಿಹಾರ ಧನ ಬಿಡುಗಡೆ ಮಾಡುವಂತೆ ಸಚಿವರು ಇದೇ ವೇಳೆ ಆದೇಶಿಸಿದರು. ಕಲಬುರಗಿ ಜಿಲ್ಲೆ ಬಸವನಬಾಗೇವಾಡಿಯ ಕೆ.ಎನ್. ಸದಾಶಿವ ಎಂಬುವವರು ವಿದ್ಯುತ್ ಅವಘಡದಲ್ಲಿ ಕೈ ಕಳೆದು ಕೊಂಡಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ಬಿಡುಗಡೆ ಮಾಡಲಾಗಿದೆ.
ಚಿಕ್ಕಮಗಳೂರಿಗೆ ಇಂದಿನಿಂದ 12 ಗಂಟೆ 3-ಫೇಸ್ ವಿದ್ಯುತ್: ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯಲ್ಲಿ ಕಾಫಿ ಬೆಳೆಗಾರರಿಗೆ ಹಾಗೂ ಇತರೆ ರೈತ ವರ್ಗಕ್ಕೆ ಅನುಕೂಲವಾಗುವಂತೆ ಪ್ರತಿ ದಿನ 12 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಪೂರೈಕೆ ಮಾಡಲು ಸಚಿವ ಸುನೀಲ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾಫಿ ಬೆಳೆಗಾರರಿಗೆ ಮುಂದಿನ ಮೂರು ತಿಂಗಳ ಅವಧಿಯಲ್ಲಿ ನಿರಂತರ 12 ಗಂಟೆ ವಿದ್ಯುತ್ ಪೂರೈಸುವಂತೆ ರೈತರಿಂದ ಬೇಡಿಕೆ ವ್ಯಕ್ತವಾಗಿತ್ತು.
ವಿದ್ಯುತ್ ವ್ಯತ್ಯಯ ಕರ್ತವ್ಯ ಲೋಪವೆಂದು ಪರಿಗಣನೆ
ಎಲ್ಲ ಎಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಮತ್ತು ವಿದ್ಯುತ್ ವ್ಯತ್ಯಯವಾಗುವ ಬಗ್ಗೆ ಪ್ರತಿ ದಿನ ಬೆಳಗ್ಗೆ 11 ಗಂಟೆಯೊಳಗೆ ಮಾಹಿತಿ ಸಂಗ್ರಹಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ವಿದ್ಯುತ್ ವ್ಯತ್ಯಯದಿಂದ ಆಗುವ ತೊಂದರೆಯನ್ನು ಕರ್ತವ್ಯ ಲೋಪ ಎಂದೇ ಪರಿಗಣಿಸಲಾಗುತ್ತದೆ.
-ಸುನೀಲ್ ಕುಮಾರ್, ಇಂಧನ ಸಚಿವ
HESCOM Golmal: 86 ಕೋಟಿ ಅಕ್ರಮ: 20 ಮಂದಿ ಸಸ್ಪೆಂಡ್: ಸಚಿವ ಸುನಿಲ್
ಬಜೆಟ್‌ನಲ್ಲಿ ಕನ್ನಡಕ್ಕೆ ಹೆಚ್ಚಿನ ಅನುದಾನ: ಸಂಸ್ಕೃತ ವಿಶ್ವವಿದ್ಯಾಲಯಕ್ಕೆ (University of Sanskrit) ವಿರೋಧ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕನ್ನಡ ವಿವಿಗೆ ಹೆಚ್ಚಿನ ಅನುದಾನ ನೀಡಬೇಕು. ಆದರೆ, ಸಂಸ್ಕೃತಕ್ಕೆ ವಿರೋಧ ಮಾಡುವುದು ಸರಿಯಲ್ಲ. ಸಂಸ್ಕೃತ ಎಲ್ಲ ಭಾಷೆಗಳ ತಾಯಿ ಎಂದರು. ಸಂಸ್ಕೃತ ಕನ್ನಡದ ತಾಯಿ ಎಂದು ದಾಖಲೆ ಕೇಳುವ ವಿಚಾರ ಅಲ್ಲ. ಅದಕ್ಕೆ ಆರ್‌ಟಿಸಿ ಕೊಡಿ, ಪಹಣಿ ಕೊಡಿ ಅಂದರೆ ಆಗಲ್ಲ. ಆದರೆ, ಕನ್ನಡಕ್ಕೆ(Kannada) ಹೆಚ್ಚಿನ ಆದ್ಯತೆ ಕೊಡಲೇಬೇಕು. ಮುಂದಿನ ಬಜೆಟ್‌ನಲ್ಲಿ ಕನ್ನಡಕ್ಕೆ ಹೆಚ್ಚಿನ ಅನುದಾನ ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು.
