ಕೆಎಎಸ್‌ ಹುದ್ದೆಗೆ ಎಂಜಿನಿಯರ್, ವೈದ್ಯರು, ಪದವೀಧರರ ಅರ್ಜಿ !

 ಕೆಎಎಸ್‌ ಹುದ್ದೆಗೆ ಎಂಜಿನಿಯರ್, ವೈದ್ಯರು, ಪದವೀಧರರ ಅರ್ಜಿ ,803 ವೈದ್ಯರು, 38,692 ಬಿ.ಇ ಪದವೀಧರರ ಅರ್ಜಿ 384 ಹುದ್ದೆಗೆ 2.10 ಲಕ್ಷ ಜನರಿಂದ ಅರ್ಜಿ ಸಲ್ಲಿಕೆ

engineers, doctors, graduates application for  kas government jobs gow

ಬೆಂಗಳೂರು (ಆ.4): ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ 2,10,910 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅತಿ ಹೆಚ್ಚು ಅರ್ಜಿಗಳು (63,769) ಬಿ.ಎ ಪದವೀಧರರಿಂದ ಸಲ್ಲಿಕೆಯಾಗಿವೆ. ಅರ್ಜಿ ಸಲ್ಲಿಸಿರುವವರ ಶೈಕ್ಷಣಿಕ ಅರ್ಹತೆಯ ವಿವರವನ್ನು ಕರ್ನಾಟಕ ಲೋಕಸೇವಾ ಆಯೋಗ ಶನಿವಾರ ಬಿಡುಗಡೆ ಮಾಡಿದೆ.

 ಬಿಎ ಪದವೀಧರರ ಬಳಿಕ  ಎಂಜಿನಿಯರಿಂಗ್ ಪದವೀಧರರು ಎರಡನೇ ಅತಿ ಹೆಚ್ಚು ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿರುವುದು ವಿಶೇಷವಾಗಿದೆ. ಬಿಎ ಪದವೀಧರರು 38,692 ಅರ್ಜಿ, ಬಿಎಸ್ಸಿ ಪದವೀಧರರು 36,091,  ಬಿ.ಕಾಂ 34,795, ಬಿಟೆಕ್‌ 6,156, ಬಿಸಿಎ 3,306 ಹಾಗೂ 803  ಎಂಬಿಬಿಎಸ್‌ ಪದವೀಧರರು  ಕೆಎಎಸ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.

ನೇರ ಪದವಿ, ನೇರ ಸ್ನಾತಕೋತ್ತರ ಪದವಿ ಸೇರಿದಂತೆ ಒಟ್ಟು 144 ಪ್ರಕಾರದ ಪದವಿ ವ್ಯಾಸಂಗ ಮಾಡಿರುವವರು ಕೆಎಎಸ್ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕೆಪಿಎಸ್‌ಸಿ ಮಾಹಿತಿ ನೀಡಿದೆ.

ಮಾತ್ರೆ ಸೇವಿಸಿ ಬ್ರಿಟನ್‌ ವ್ಯಕ್ತಿ ಬೆಂಗಳೂರಿನಲ್ಲಿ ಸಾವಿಗೆ ಶರಣು!

ಎಂಜಿನಿಯರ್‌, ಬಿಎಂಟಿಸಿ, ಎಸ್‌ಐ, ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ದಿನಾಂಕ ಬದಲು:
ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ‌ ಎಂಜಿನಿಯರ್ ಹುದ್ದೆಗಳ‌ ನೇಮಕಕ್ಕೆ ಆಗಸ್ಟ್ 11ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಅದೇ ರೀತಿ ಬಿಎಂಟಿಸಿ (ಕಲ್ಯಾಣ ಕರ್ನಾಟಕೇತರ) ಪರೀಕ್ಷೆ ಸೆ.1ರಂದು, ಪಿಎಸ್ಐ ಪರೀಕ್ಷೆ ಸೆ.22ರಂದು, ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಗೆ ಕಡ್ಡಾಯ ಕನ್ನಡ ಪರೀಕ್ಷೆ ಸೆ.29ರಂದು ನಡೆಯಲಿದೆ. ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪ್ರಮುಖ ಪರೀಕ್ಷೆ ಅ. 27ರಂದು ನಡೆಸಲಾಗುವುದು. ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್‌ಸೈಟ್‌ ವೀಕ್ಷಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಿಜಿ ದಂತ ವೈದ್ಯ: ಆ.3ರಿಂದ 2ನೇ ಸುತ್ತಿನ ಸೀಟು ಹಂಚಿಕೆ:
ಪ್ರಸಕ್ತ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ (ಪಿಜಿಇಟಿ- ಎಂಡಿಎಸ್) ಕೋರ್ಸುಗಳ ಎರಡನೇ ಸುತ್ತಿನ ಸೀಟು ಹಂಚಿಕೆಯನ್ನು ಆಗಸ್ಟ್ 3ರಿಂದ ಪ್ರಾರಂಭಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ನಾನು ಬದುಕಬೇಕು ದಯವಿಟ್ಟು ನನ್ನನ್ನು ಉಳಿಸಿಕೋ, ಕೊನೆ ಕ್ಷಣ ಆ ನಟನ ಬಳಿ ಆಂಗಲಾಚಿ ಬೇಡಿಕೊಂಡಿದ್ದ ನಟಿ ಮಂಜುಳಾ!

ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದ್ದರೂ ಮುಂದಿನ ಸುತ್ತಿನ ಕೌನ್ಸೆಲಿಂಗ್‌ಗೆ ಆಯ್ಕೆ ಮಾಡಿಕೊಂಡಿರುವ ಹಾಗೂ ಯಾವುದೇ ಸೀಟು ಹಂಚಿಕೆಯಾಗದೇ ಇರುವವರು ಆ.3ರಿಂದ ಕೆಇಎ ಕಚೇರಿಯಲ್ಲಿ ತಮ್ಮ ಎಲ್ಲ ಮೂಲ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ದಾಖಲೆ ಸಲ್ಲಿಸದಿದ್ದರೆ ಅಂತಹವರಿಗೆ ಸೀಟು ಹಂಚಿಕೆ ಮಾಡಲಾಗುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆ.3ರಂದು ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಲಾಗುತ್ತದೆ. ಆ.4ರಿಂದ 6ರವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಸಮಯ ನೀಡಲಾಗುತ್ತದೆ. ಆ.7ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಆ.8ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುವುದು. ನಂತರ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಲು ಹಾಗೂ ಕಾಲೇಜಿಗೆ ವರದಿ ಮಾಡಿಕೊಳ್ಳಲು ಆ.13 ಕೊನೆ ದಿನ ಎಂದು ಅವರು ವಿವರಿಸಿದ್ದಾರೆ.

Latest Videos
Follow Us:
Download App:
  • android
  • ios