ಹೊಸ ವರ್ಷಾಚರಣೆಯ ಸಂಭ್ರಮಾಚರಣೆಗೆ ನಂದಿಬೆಟ್ಟ ಪ್ರವೇಶಕ್ಕೆ ನಿರ್ಬಂಧ: ಪೊಲೀಸ್‌ ಇಲಾಖೆ

ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಪ್ರವಾಸಿಗರು, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. 

Entry to Nandi Hills Restricted for New Year Celebrations Says Police Department gvd

ಚಿಕ್ಕಬಳ್ಳಾಪುರ (ಡಿ.30): ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಪ್ರವಾಸಿಗರು, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಡಿಸೆಂಬರ್ 31ರ ಸಂಜೆ 6 ರಿಂದ 2025ರ ಜ.1ರ ಬೆಳಗ್ಗೆ 7ರವರೆಗೆ ಪ್ರವೇಶ ನಿಷೇಧಿಸಲಾಗಿದೆ. ಗಿರಿಧಾಮದಲ್ಲಿನ ಅತಿಥಿಗೃಹಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸುವುದನ್ನು ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶದಲ್ಲಿ ತಿಳಿಸಿದ್ದಾರೆ. ಹೊಸ ವರ್ಷಾಚರಣೆಯ ಸಂಭ್ರಮಾಚರಣೆ ಮಧ್ಯೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಜಾರಿಗೊಳಿಸಿದೆ. 

ನಂದಿಬೆಟ್ಟ ಪ್ರವೇಶದ ಜತೆಗೆ ಹೋಟೆಲ್‌, ರೆಸಾರ್ಟ್‌, ಹೋಂ ಸ್ಟೇಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಹಲವು ಮಿತಿಗಳನ್ನು ಹೇರಲಾಗಿದೆ. ಪ್ರತಿ ವರ್ಷವೂ ನಂದಿಬೆಟ್ಟಕ್ಕೆ ನಿಷೇಧ ಹೇರಲಾಗುತ್ತಿದೆ. ಕುಡಿದು ವಾಹನ ಚಾಲನೆ, ಅಪಘಾತ, ಪರಿಸರ ಮಾಲಿನ್ಯ ಸೇರಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಂದಿಬೆಟ್ಟ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಂದಿಗಿರಿಧಾಮದಲ್ಲಿ ಡಿ.31ರಂದು ರೂಮ್‌ ಬುಕ್ಕಿಂಗ್‌ ಸಹ ರದ್ದುಪಡಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗಿದೆ.

ನಗರದಲ್ಲಿ ಪೊಲೀಸ್‌ ಬಂದೋಬಸ್ತ್‌: ನಗರದಲ್ಲಿ ಹೊಸವರ್ಷಾಚರಣೆ ವೇಳೆ ಸಾರ್ವಜನಿಕರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ, ಅಬಕಾರಿ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಬೆಸ್ಕಾಂ, ಬಿಎಂಆರ್‌ಸಿಎಲ್‌ ಹಾಗೂ ಇತರೆ ಇಲಾಖೆಗಳು ಮತ್ತು ಸಂಘ-ಸಂಸ್ಥೆಗಳೊಂದಿಗೆ ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು. 

ಸಚಿನ್‌ ಪಂಚಾಳ ಕುಟುಂಬಕ್ಕೆ ₹10 ಲಕ್ಷ ಪರಿಹಾರ: ಸಚಿವ ಈಶ್ವರ್‌ ಖಂಡ್ರೆ

ನಗರದಲ್ಲಿ ಪ್ರಮುಖವಾಗಿ ಹೊಸ ವರ್ಷಾಚರಣೆ ಮಾಡಲಾಗುವ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್‌ ಮಾರ್ಕ್ಸ್‌ ರಸ್ತೆ, ಕಬ್ಬನ್‌ ಪಾರ್ಕ್‌, ಟ್ರಿನಿಟಿ ಸರ್ಕಲ್‌, ಕೋರಮಂಗಲ, ಫಿನಿಕ್ಸ್ ಮಾಲ್‌, ಇಂದಿರಾನಗರ 100 ಅಡಿ ರಸ್ತೆ, ಪ್ರಮುಖ ಸ್ಟಾರ್‌ ಹೋಟೆಲ್‌ಗಳು, ಪಬ್‌-ಕ್ಲಬ್‌ಗಳು ಸೇರಿದಂತೆ ಹಲವು ಸ್ಥಳಗಳಲ್ಲಿ ಜನದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಸೂಕ್ತ ಬಂದೋಬಸ್ತ್‌ ಪಿಕೇಟಿಂಗ್‌ ಪಾಯಿಂಟ್‌ಗಳನ್ನು ನೇಮಕ ಮಾಡುವುದಾಗಿ ಹೇಳಿದರು.

Latest Videos
Follow Us:
Download App:
  • android
  • ios