ಉಡುಪಿ ಜಿಲ್ಲೆಗೆ ESI ಆಸ್ಪತ್ರೆ ಮಂಜೂರು: ಸಂಸದೆ ಶೋಭಾ ಕರಂದ್ಲಾಜೆ ಸಂತಸ

ಕೇಂದ್ರ ಕಾರ್ಮಿಕ ಸಚಿವಾಲಯ ದೇಶದಾದ್ಯಂತ 23 ನೂತನ ESI ಆಸ್ಪತ್ರೆಗಳನ್ನು ಮಂಜೂರು ಮಾಡಿದ್ದು, ಕರ್ನಾಟಕದಲ್ಲಿ ಉಡುಪಿ ಹಾಗೂ ತುಮಕೂರು ಜಿಲ್ಲೆಗಳಿಗೆ 100 ಬೆಡ್ ಸಾಮರ್ಥ್ಯದ ESI ಆಸ್ಪತ್ರೆಗಳ ನಿರ್ಮಾಣಕ್ಕೆ ತಾತ್ವಿಕ ಅನುಮೋದನೆಯನ್ನು ಕೇಂದ್ರ ಸರ್ಕಾರ ನೀಡಿದೆ.

ESI Hospital sanctioned for Udupi district gvd

ಉಡುಪಿ (ಜು.15): ಕೇಂದ್ರ ಕಾರ್ಮಿಕ ಸಚಿವಾಲಯ ದೇಶದಾದ್ಯಂತ 23 ನೂತನ ESI ಆಸ್ಪತ್ರೆಗಳನ್ನು ಮಂಜೂರು ಮಾಡಿದ್ದು, ಕರ್ನಾಟಕದಲ್ಲಿ ಉಡುಪಿ ಹಾಗೂ ತುಮಕೂರು ಜಿಲ್ಲೆಗಳಿಗೆ 100 ಬೆಡ್ ಸಾಮರ್ಥ್ಯದ ESI ಆಸ್ಪತ್ರೆಗಳ ನಿರ್ಮಾಣಕ್ಕೆ ತಾತ್ವಿಕ ಅನುಮೋದನೆಯನ್ನು ಕೇಂದ್ರ ಸರ್ಕಾರ ನೀಡಿದೆ. ಕರಾವಳಿಯ ಜನತೆಯ ಬಹುದಿನಗಳ ಬೇಡಿಕೆಯಾದ ESI ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ, ಶೋಭಾ ಕರಂದ್ಲಾಜೆಯವರು ಈ ಹಿಂದೆ ಒತ್ತಾಯಿಸಿದ್ದರು.

ಈ ಕುರಿತು ಕೇಂದ್ರ ಕಾರ್ಮಿಕ ಸಚಿವರು ಭೂಪೆಂದ್ರ ಯಾದವ್ ಅವರನ್ನು ಕೂಡ ಭೇಟಿಯಾಗಿ ಚರ್ಚಿಸಿ, ಉಡುಪಿಗೆ ESI ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ವಿನಂತಿಸಿಕೊಂಡಿದ್ದರು. ಇದರ ಪರಿಣಾಮವಾಗಿ, ESIC ತನ್ನ 188 ನೇ ಸಾಮಾನ್ಯ ಸಭೆಯಲ್ಲಿ ಉಡುಪಿ ಜಿಲ್ಲೆಗೆ ESI ಆಸ್ಪತ್ರೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಗೆ ESI ಆಸ್ಪತ್ರೆಯನ್ನು ಮಂಜೂರು ಮಾಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ, ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಅವರಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು, ಕರಾವಳಿಯ ಸಮಸ್ತ ಶ್ರಮಿಕರ ಪರವಾಗಿ ಧನ್ಯವಾದವನ್ನು ತಿಳಿಸಿದ್ದಾರೆ.

ಎಲೆಕ್ಷನ್ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದತ್ತ ಸಂಸದರ ಒಲವು? ಏನಿದು ಲೆಕ್ಕಾಚಾರ?

ಕೃಷಿ ವಿವಿಗಳಲ್ಲಿ ಸಮಗ್ರ ಮಾಹಿತಿ ಸಿಗಲಿ: ರಾಜ್ಯದ ಕೃಷಿ, ತೋಟಗಾರಿಕೆ ಮತ್ತು ಪಶು ವೈದ್ಯಕೀಯ ವಿಶ್ವವಿದ್ಯಾನಿಲಯಗಳು ಸಮಗ್ರ ಕೃಷಿ ವಿಶ್ವವಿದ್ಯಾನಿಲಯಗಳಾಗಿ ರೈತರಿಗೆ ಒಂದೇ ಸೂರಿನಡಿ ಮಾಹಿತಿ ಲಭ್ಯವಾಗಬೇಕು, ಆಗ ಮಾತ್ರ ರೈತರ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು. 

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಡಾ.ಜಿ.ಕೆ.ವೀರೇಶ್‌ ದತ್ತಿ ನಿಧಿಯಡಿ ಶನಿವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ‘5ನೇ ಸಮಗ್ರ ಕೃಷಿ ಪದ್ಧತಿ ರೈತರ ಸಮಾವೇಶ’ದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ರುವ ಕೃಷಿ, ತೋಟಗಾರಿಕಾ, ಪಶು ವೈದ್ಯಕೀಯ ವಿವಿಗಳಲ್ಲಿ ಎಲ್ಲ ರೀತಿಯ ಮಾಹಿತಿ ಸಿಗಬೇಕು. ಇದರಿಂದ ರೈತರು ಹಲವು ಕಡೆ ಸುತ್ತುವುದು ತಪ್ಪುತ್ತದೆ. ಈ ವಿವಿಗಳು ಸಮಗ್ರ ಮಾಹಿತಿ ನೀಡುವ ಕೋಶಗಳಾಗಬೇಕು ಎಂದರು.

ಚಿಕ್ಕಮಗಳೂರು ನೆರೆ ಪ್ರದೇಶಗಳಿಗೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಪರಿಶೀಲನೆ

ಪ್ರವಾಸಕ್ಕೆ ಕರೆದೊಯ್ಯಿರಿ: ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡ ರೈತರನ್ನು ಸನ್ಮಾನಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಇದರ ಜೊತೆಗೆ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡ ರೈತರ ಜಮೀನಿಗೆ ಇತರ ರೈತರನ್ನು ಪ್ರವಾಸ ಕರೆದುಕೊಂಡು ಹೋಗುವ ಕಾರ್ಯಕ್ರಮ ರೂಪಿಸಬೇಕು. ಇದರಿಂದ ಸಂಶೋಧನಾ ಫಲಗಳು ರೈತರಿಗೆ ಶೀಘ್ರವಾಗಿ ತಲುಪುತ್ತವೆ ಎಂದು ಸಲಹೆ ನೀಡಿದರು. ವಿಶ್ರಾಂತ ಕುಲಪತಿ ಡಾ. ಜಿ.ಕೆ.ವೀರೇಶ್‌ ಅವರು ತಮ್ಮ ನಿವೃತ್ತಿ ವೇತನವನ್ನು ಸಮಗ್ರ ಕೃಷಿ ಕೈಗೊಳ್ಳುವ ರೈತರನ್ನು ಪ್ರೋತ್ಸಾಹಿಸಲು ದತ್ತಿ ನಿಧಿಗೆ ಕೊಡುಗೆ ನೀಡಿರುವುದು ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು.

Latest Videos
Follow Us:
Download App:
  • android
  • ios