ಬಿಜೆಪಿಗರ ಮೇಲೆ ಐಟಿ ದಾಳಿ ಆದರೂ ದುಡ್ಡು ಸಿಗುತ್ತೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಕಾಂಗ್ರೆಸ್ಸಿಗರನ್ನೇ ಗುರಿಯಾಗಿಸಿ ಯಾಕೆ ಆದಾಯ ತೆರಿಗೆ (ಐಟಿ) ದಾಳಿ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿಗರ ಮೇಲೆ ಐಟಿ ದಾಳಿಯಾದರೂ ಸಾಕಷ್ಟು ಹಣ ಸಿಗುತ್ತದೆ. ಆದರೆ ಮಾಡುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರು (ಡಿ.11) : ಕಾಂಗ್ರೆಸ್ಸಿಗರನ್ನೇ ಗುರಿಯಾಗಿಸಿ ಯಾಕೆ ಆದಾಯ ತೆರಿಗೆ (ಐಟಿ) ದಾಳಿ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿಗರ ಮೇಲೆ ಐಟಿ ದಾಳಿಯಾದರೂ ಸಾಕಷ್ಟು ಹಣ ಸಿಗುತ್ತದೆ. ಆದರೆ ಮಾಡುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಜಾರ್ಖಂಡ್ ಕಾಂಗ್ರೆಸ್ ಸಂಸದನ ಮೇಲಿನ ತೆರಿಗೆ ದಾಳಿ ಪ್ರಕರಣವನ್ನು ಪ್ರಸ್ತಾಪಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮುಸಲ್ಮಾನರಿಗೆ ಆರ್ಥಿಕತೆಯಲ್ಲಿ ಪಾಲು ಸಮಾನವಾಗಿ ಸಿಗುತ್ತಿಲ್ಲ ಎನ್ನುವ ಕಾಂಗ್ರೆಸ್‌ನವರ ಮನೆಯಲ್ಲಿಯೇ ಅಪಾರ ಹಣ ದೊರೆಯುತ್ತಿದೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ಟ್ವೀಟರ್‌ನಲ್ಲಿ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಯಾರ ಬಳಿ ಬೇನಾಮಿ ಹಣ ದೊರೆತರೂ ಅದು ಕಾನೂನು ರೀತಿಯಲ್ಲಿ ತಪ್ಪು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲೇ ಬೇಕು ಎಂದಿದ್ದಾರೆ
ಅದು ಸಂಸದನ ಮನೆ ಅಲ್ಲ..ಕೋಟಿ ನೋಟಿನ ಕೋಟೆ..! ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಕಾಂಗ್ರೆಸ್ ಮುಖಂಡ..?
ಆದರೆ, ಯಾಕೆ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿಗಳನ್ನು ಮಾಡಲಾಗುತ್ತಿದೆ. ಬಿಜೆಪಿಯವರ ಮೇಲೆ ಐಟಿ ದಾಳಿಗಳು ಆಗುತ್ತಿಲ್ಲ. ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು. ಆದರೆ, ಅವರ ಮೇಲೆ ದಾಳಿ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.