ವಿದ್ಯುತ್ ಕೊರತೆ ಇದ್ದರೂ ರೈತರಿಗೆ 3 ಪಾಳಿ ವಿದ್ಯುತ್: ಇಂಧನ ಸಚಿವ ಕೆ.ಜೆ. ಜಾರ್ಜ್
‘ರಾಜ್ಯದಲ್ಲಿ ಪೂರೈಕೆಗಿಂತ ಹೆಚ್ಚು ವಿದ್ಯುತ್ ಬೇಡಿಕೆ ಸೃಷ್ಟಿಯಾಗಿರುವುದರಿಂದ ವಿದ್ಯುತ್ ಅಭಾವ ಸೃಷ್ಟಿಯಾಗಿದೆ. ಹೀಗಾಗಿ ಉಷ್ಣ ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕಾಗಿ ವಿದೇಶದಿಂದ ಕಲ್ಲಿದ್ದಲು ಆಮದು ಮಾಡಲು ನಿರ್ಧರಿಸಲಾಗಿದೆ. ವಿದೇಶಿ ಕಲ್ಲಿದ್ದಲು ದುಬಾರಿಯಾದರೂ ಖರೀದಿ ಮಾಡಲೇಬೇಕಾಗಿದೆ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಬೆಂಗಳೂರು (ಅ.17) : ‘ರಾಜ್ಯದಲ್ಲಿ ಪೂರೈಕೆಗಿಂತ ಹೆಚ್ಚು ವಿದ್ಯುತ್ ಬೇಡಿಕೆ ಸೃಷ್ಟಿಯಾಗಿರುವುದರಿಂದ ವಿದ್ಯುತ್ ಅಭಾವ ಸೃಷ್ಟಿಯಾಗಿದೆ. ಹೀಗಾಗಿ ಉಷ್ಣ ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕಾಗಿ ವಿದೇಶದಿಂದ ಕಲ್ಲಿದ್ದಲು ಆಮದು ಮಾಡಲು ನಿರ್ಧರಿಸಲಾಗಿದೆ. ವಿದೇಶಿ ಕಲ್ಲಿದ್ದಲು ದುಬಾರಿಯಾದರೂ ಖರೀದಿ ಮಾಡಲೇಬೇಕಾಗಿದೆ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ರಾಜ್ಯದಲ್ಲಿ ಸೃಷ್ಟಿಯಾಗಿರುವ ವಿದ್ಯುತ್ ಅಭಾವ ಹಾಗೂ ಮುಖ್ಯಮಂತ್ರಿಗಳ ಸೂಚನೆಯಂತೆ ಕೃಷಿ ಪಂಪ್ ಸೆಟ್ ಗಳಿಗೆ ನಿತ್ಯ 5 ಗಂಟೆ ವಿದ್ಯುತ್ ಪೂರೈಸುವುದು, ಕಲ್ಲಿದ್ದಲು ಖರೀದಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಇಂಧನ ಇಲಾಖೆ ಹಾಗೂ ಎಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ವಾರದಲ್ಲಿ ಒಂದು ದಿನ ಸಂಪೂರ್ಣ ವಿದ್ಯುತ್ ಕಡಿತ; ರೈತರಿಗೆ ಮತ್ತೊಂದು ಶಾಕ್ ನೀಡಲು ಸರ್ಕಾರ ಸಿದ್ಧತೆ!
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಕಲ್ಲಿದ್ದಲು ಆಮದಿಗೆ ಕೇಂದ್ರ ಸರ್ಕಾರದ ನೆರವು ಕೋರಿದ್ದೇವೆ. ಕೇಂದ್ರ ಸರ್ಕಾರವೂ ಸಹಕಾರ ನೀಡುವ ಭರವಸೆ ಕೊಟ್ಟಿದೆ. ವಿದೇಶಿ ಕಲ್ಲಿದ್ದಲು ದುಬಾರಿಯಾದರೂ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡುವುದೇ ನಮ್ಮ ಆದ್ಯತೆ ಎಂದು ಹೇಳಿದರು.
ನಿತ್ಯ 5 ಗಂಟೆ ವಿದ್ಯುತ್ ಪೂರೈಕೆ:
ರೈತರಿಗೆ ಕೃಷಿ ಪಂಪ್ ಸೆಟ್ ಗಾಗಿ 5 ಗಂಟೆ ವಿದ್ಯುತ್ ಪೂರೈಕೆ ಮಾಡಲು ನಿರ್ಧರಿಸಲಾಗಿದೆ. ರಾತ್ರಿ ಹಾಗೂ ಹಗಲು ವೇಳೆಯಲ್ಲಿ ರೊಟೇಷನ್ ಪದ್ದತಿ ಅನುಸರಿಸಿ ವಿದ್ಯುತ್ ನೀಡಲಾಗುವುದು. ಇದಕ್ಕಾಗಿ ಉತ್ತರ ಪ್ರದೇಶ ಹಾಗೂ ಪಂಜಾಬ್ ನಿಂದ ವಿದ್ಯುತ್ ಪಡೆಯಲು ತೀರ್ಮಾನ ಮಾಡಲಾಗಿದೆ. ರಾಜ್ಯಗಳೊಂದಿಗೂ ಚರ್ಚಿಸಿದ್ದು, ವಿದ್ಯುತ್ ಪೂರೈಕೆಗೆ ಸಮಸ್ಯೆಯಾಗುವುದಿಲ್ಲ ಎಂದರು.
ಹಿಂದಿನ ಸರ್ಕಾರ ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕೆ ಆದ್ಯತೆ ನೀಡಿಲ್ಲ. ಕಳೆದ ವರ್ಷ ಈ ವೇಳೆಗೆ 8,500 ಮೆ.ವ್ಯಾಟ್‌ನಷ್ಟಿದ್ದ ಬೇಡಿಕೆ ಈಗ 15 ಸಾವಿರ ಮೆ.ವ್ಯಾಟ್‌ಗೆ ತಲುಪಿದೆ. ಏಕಾಏಕಿ ಹೆಚ್ಚಳವಾಗಿರುವ ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲು ಸಮಸ್ಯೆಯಾಗುತ್ತಿದೆ. ಆದರೆ ರಾಜ್ಯ ಕತ್ತಲಲ್ಲಿ ಇಲ್ಲ. ಲಭ್ಯವಿರುವ ವಿದ್ಯುತ್ ಅನ್ನು ಸಮರ್ಥವಾಗಿ ಪೂರೈಕೆ ಮಾಡುತ್ತಿದ್ದೇವೆ ಎಂದು ಸಮರ್ಥಿಸಿಕೊಂಡರು.
ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ. ಹೀಗಾಗಿ ಜಲವಿದ್ಯುತ್ ಉತ್ಪಾದನೆ ಕುಸಿತಗೊಂಡಿದೆ. ಪವನ ವಿದ್ಯುತ್ ಉತ್ಪಾದನೆಯೂ ಕುಸಿದಿದೆ. ಇದೇ ಅವಧಿಯಲ್ಲಿ ಉಷ್ಣ ವಿದ್ಯುತ್ ಸ್ಥಾವರಗಳು ನಿರ್ವಹಣೆ ಹಂತದಲ್ಲಿವೆ. ಏಕಾಏಕಿ ಉತ್ಪಾದನೆ ಹೆಚ್ಚಿರುವುದು ಹಾಗೂ ವಿವಿಧ ಕಾರಣಗಳಿಂದ ಉತ್ಪಾದನೆ ಕುಸಿದಿರುವುದು ಸಮಸ್ಯೆಗೆ ಕಾರಣ. ಹೀಗಾಗಿ ನಾವು ಉತ್ಪಾದನಾ ವಲಯಕ್ಕೆ ಆದ್ಯತೆ ಕೊಡುತ್ತಿದ್ದೇವೆ ಎಂದರು.
ಸೆಕ್ಷನ್ 11 ಜಾರಿ ಮಾಡಿದ್ದೇವೆ:
ರಾಜ್ಯದಲ್ಲಿ ವಿದ್ಯುತ್ ತೀವ್ರ ಕೊರತೆ ಉಂಟಾಗಿರುವುದರಿಂದ ರಾಜ್ಯದಲ್ಲಿ ಉತ್ಪಾದನೆಯಾಗುವ ವಿದ್ಯುತ್ ರಾಜ್ಯಕ್ಕೇ ನೀಡುವಂತೆ ನಿರ್ದೇಶನ ನೀಡಲಾಗಿದೆ. ಇದಕ್ಕಾಗಿ ವಿದ್ಯುತ್ ಕಾಯಿದೆ ಸೆಕ್ಷನ್ 11 ಪ್ರಕಾರ ಆದೇಶ ಜಾರಿ ಮಾಡಲಾಗಿದೆ. ಇದರಿಂದ ಹೆಚ್ಚುವರಿಯಾಗಿ ವಿದ್ಯುತ್ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.
ಕರ್ನಾಟಕ ಬಂದ್ ಮಾಡಿದ್ರೆ, ನೀರು ಹರಿಯುವುದು ನಿಲ್ಲುತ್ತಾ? ಶಾಸಕ ಲಕ್ಷ್ಮಣ್ ಸವದಿ
ನಾನು ಎಲ್ಲೂ ಕಾಣೆಯಾಗಿಲ್ಲ: ಜಾರ್ಜ್
ಬಿಜೆಪಿ ಸರ್ಕಾರ ಕಳೆದ ಅವಧಿಯಲ್ಲಿ ವಿದ್ಯುತ್ ಉತ್ಪಾದನೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನಾನು ರಾಜ್ಯದಲ್ಲಿ ಆಗಿರುವ ವಿದ್ಯುತ್ ಸಮಸ್ಯೆ ಬಗೆಹರಿಸಲು ಕೇಂದ್ರದ ಸಚಿವರನ್ನು ಭೇಟಿ ಮಾಡಿ ಪ್ರಯತ್ನ ಮಾಡಿದ್ದೇನೆ. ಹೀಗಿರುವಾಗ ನಾನು ಕಾಣೆಯಾಗಿರುವುದಾಗಿ ಬಿಂಬಿಸಿ ಕೀಳು ರಾಜಕೀಯ ಮಾಡಿದ್ದಾರೆ. ನಾನು ಎಲ್ಲೂ ಕಾಣೆಯಾಗಿಲ್ಲ. ಹಗಲು-ರಾತ್ರಿ ಕೆಲಸ ಮಾಡುತ್ತಿದ್ದೇನೆ ಎಂದು ಕೆ.ಜೆ. ಜಾರ್ಜ್ ತಿರುಗೇಟು ನೀಡಿದರು.