ಜನಸಂದಣಿ ಇರುವೆಡೆ ಎಲ್ಲರೂ ಮಾಸ್ಕ್ ಧರಿಸಿ: ಸಚಿವ ದಿನೇಶ್ ಗುಂಡೂರಾವ್
ಕೊರೋನಾ ಸೋಂಕಿನ ಭೀತಿ ಮತ್ತೆ ಎದುರಾಗಿರುವ ಕಾರಣ, ಹೆಚ್ಚು ಜನಸಂದಣಿ ಇರುವ ಜಾಗಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಲು ಒತ್ತು ನೀಡಿ ಮಾರ್ಗಸೂಚಿ ಪ್ರಕಟಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು (ಡಿ.23): ಕೊರೋನಾ ಸೋಂಕಿನ ಭೀತಿ ಮತ್ತೆ ಎದುರಾಗಿರುವ ಕಾರಣ, ಹೆಚ್ಚು ಜನಸಂದಣಿ ಇರುವ ಜಾಗಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಲು ಒತ್ತು ನೀಡಿ ಮಾರ್ಗಸೂಚಿ ಪ್ರಕಟಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ದೇಶದಲ್ಲಿ 21 ಮಂದಿಯಲ್ಲಿ ಕೊರೋನಾ ಉಪತಳಿ ಜೆಎನ್ 1 ಸೋಂಕು ಪತ್ತೆಯಾಗಿದೆ.
ಗೋವಾದಲ್ಲಿ ಅತಿಹೆಚ್ಚು 18 ಪ್ರಕರಣಗಳು ಪತ್ತೆಯಾಗಿದ್ದು, ಮಹಾರಾಷ್ಟ್ರ, ಕೇರಳದಲ್ಲೂ ಉಪತಳಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು, ಯಾವುದೇ ಸಮಸ್ಯೆಯಿಲ್ಲ. ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಎಲ್ಲರೂ ಮಾಸ್ಕ್ ಧರಿಸುವುದನ್ನು ಮಾರ್ಗಸೂಚಿಯಲ್ಲಿ ಪ್ರಕಟಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು. ಸದ್ಯ ರಾಜ್ಯದಲ್ಲಿ ಔಷಧದ ಶೇಖರಣೆಯಿದೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಸಿದ್ಧಗೊಳಿಸಲಾಗುತ್ತಿದೆ. ಅಗತ್ಯಕ್ಕೆ ತಕ್ಕಂತೆ ಔಷಧಗಳನ್ನು ಖರೀದಿಸಲಾಗುತ್ತಿದೆ. ಎಲ್ಲೆಲ್ಲಿ ಕೊರತೆ ಆಗುತ್ತದೆಯೋ ಅಲ್ಲಿಗೆ ಅದನ್ನು ಸರಬರಾಜು ಮಾಡಲಾಗುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರೀದಿ ಮಾಡದಿರಲೂ ನಿರ್ಧರಿಸಲಾಗಿದೆ ಎಂದರು.
ಕಾರ್ಮಿಕ ಕಾನೂನು ವ್ಯಾಪ್ತಿಗೆ ಐಟಿ, ಬಿಟಿ ಕಂಪನಿ?: ಸಚಿವ ಸಂತೋಷ್ ಲಾಡ್
ಕೇಂದ್ರ ಸಚಿವರೊಂದಿಗೆ ಸಭೆ: ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ರಾಜ್ಯಗಳಲ್ಲಿ ಕೈಗೊಂಡಿರುವ ನಡೆಸಿ ಕ್ರಮಗಳ ಕುರಿತಂತೆ ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವೀಯ ಅವರು ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾಹಿತಿ ಪಡೆದರು. ಈ ವೇಳೆ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೊರೋನಾ ಪರೀಕ್ಷೆಯ ಸಂಖ್ಯೆ ಹೆಚ್ಚಳ, ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಮಾಡಿಕೊಳ್ಳಲಾಗಿರುವ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು. ಜತೆಗೆ ವೆಂಟಿಲೇಟರ್ ನಿರ್ವಹಣೆ ಖರ್ಚು ಹೆಚ್ಚುತ್ತಿದ್ದು, ಆ ನಿಟ್ಟಿನಲ್ಲಿ ಕೇಂದ್ರದಿಂದ ನೆರವು ನೀಡುವಂತೆ ಮನವಿ ಮಾಡಿದರು.