ಲೋಕಸಭಾ ಚುನಾವಣೆ ಪ್ರಚಾರದ ನಿಮಿತ್ತ ಜಿಲ್ಲೆಯ ಕಡೂರು ತಾಲೂಕಿನ ಬೀರೂರಿಗೆ ಆಗಮಿಸುತ್ತಿದ್ದ ಮಾಜಿ ಸಚಿವ ಮಾಧುಸ್ವಾಮಿ ಕಾರು ಗುಜರಿ ಆಟೋಗೆ ಡಿಕ್ಕಿಯಾದ ಪರಿಣಾಮ‌ ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ.  

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಏ.22): ಲೋಕಸಭಾ ಚುನಾವಣೆ ಪ್ರಚಾರದ ನಿಮಿತ್ತ ಜಿಲ್ಲೆಯ ಕಡೂರು ತಾಲೂಕಿನ ಬೀರೂರಿಗೆ ಆಗಮಿಸುತ್ತಿದ್ದ ಮಾಜಿ ಸಚಿವ ಮಾಧುಸ್ವಾಮಿ ಕಾರು ಗುಜರಿ ಆಟೋಗೆ ಡಿಕ್ಕಿಯಾದ ಪರಿಣಾಮ‌ ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. 

ಮಾಜಿ ಸಚಿವ ಮಾಧುಸ್ವಾಮಿ ಇಂದು ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಾನಭೋಗನಹಳ್ಳಿ, ಹೆಚ್.ರಂಗಾಪುರ, ನೇರಲಕೆರೆ, ಸೊಕ್ಕೆ ಸೇರಿದಂತೆ ವಿವಿಧ ಗ್ರಾಮದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಪರ ಮತಯಾಚನೆಗೆ ಆಗಮಿಸುತ್ತಿದ್ದರು. ಈ ವೇಳೆ ಅವರ ಕಾರು ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ರಸ್ತೆಯಲ್ಲಿ ಹೋಗುತ್ತಿದ್ದ ಗುಜರಿ ಆಟೋಗೆ ಡಿಕ್ಕಿಯಾಗಿದೆ. 

ಬಿಜೆಪಿ ಕೋಟೆಯಲ್ಲಿ ಸಚಿವೆ ಶೋಭಾ ಕರಂದ್ಲಾಜೆಗೆ ಕಾಂಗ್ರೆಸ್‌ನ ರಾಜೀವ್‌ ಗೌಡ ಸವಾಲು!

ಕಾರು ಗುದ್ದಿದ ಪರಿಣಾಮ ಆಟೋ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಸಚಿವರ ಕಾರು ನಿಗದಿತ ವೇಗದಲ್ಲಿ ಕಾರಣ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಅಪಘಾತದ ಬಳಿಕ ಮಾಧುಸ್ವಾಮಿ ಕಾರಿನಿಂದ ಇಳಿದ ಆಟೋ ಚಾಲಕನ ಯೋಗಕ್ಷೇಮ ವಿಚಾರಿಸಿದ್ದಾರೆ. ಬಳಿಕ ತರೀಕೆರೆ ಮಾಜಿ ಶಾಸಕ ಸ್.ಎಂ.‌ನಾಗರಾಜು ಅವರು ತಮ್ಮ ಕಾರನ್ನ ತಂದು ಮಾಧುಸ್ವಾಮಿ ಅವರನ್ನ ಪ್ರಚಾರಕ್ಕೆ ಕರೆದೊಯ್ದಿದ್ದಾರೆ. ಕಡೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.