ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇವೇಗೌಡ ದಂಪತಿ ಭೇಟಿ: ವಿಶೇಷ ಪೂಜೆ ಸಲ್ಲಿಕೆ!
ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಮತ್ತು ಪತ್ನಿ ಚನ್ನಮ್ಮ ಅವರು ನಿನ್ನೆ (ಭಾನುವಾರ) ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದು, ಇಂದು ವಿಶೇಷ ಪೂಜೆಗಳನ್ನು ನೆರವೇರಿಸಿ ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ತೆರಳಲಿದ್ದಾರೆ.
ಸುಬ್ರಹ್ಮಣ್ಯ (ಅ.09): ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಮತ್ತು ಪತ್ನಿ ಚನ್ನಮ್ಮ ಅವರು ನಿನ್ನೆ (ಭಾನುವಾರ) ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದು, ಇಂದು ವಿಶೇಷ ಪೂಜೆಗಳನ್ನು ನೆರವೇರಿಸಿ ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ತೆರಳಲಿದ್ದಾರೆ. ದೇವೇಗೌಡ ದಂಪತಿ ನಿನ್ನೆ ಮಧ್ಯಾಹ್ನ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು.
ಆದರೆ, ಸಕಲೇಶಪುರ ಮತ್ತು ಕುಕ್ಕೆ ಸುಬ್ರಹ್ಮಣ್ಯ ಕಡೆಗಳಲ್ಲಿ ದಟ್ಟವಾದ ಮೋಡ ಕವಿದ ವಾತಾವರಣವಿದ್ದ ಹಿನ್ನೆಲೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಬಂದು ಬಳಿಕ ರಸ್ತೆ ಮಾರ್ಗವಾಗಿ ರಾತ್ರಿಯೇ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಇಲ್ಲಿ ವಾಸ್ತವ್ಯ ಹೂಡಿದರು. ಇಂದು ಮುಂಜಾನೆ ದೇಗುಲಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ತುಲಾಭಾರ ಸೇವೆ, ಆಶ್ಲೇಷ ಬಲಿ, ನಾಗ ಪ್ರತಿಷ್ಟೆ ಸೇರಿದಂತೆ ವಿಶೇಷ ಪೂಜೆಗಳಲ್ಲಿ ಭಾಗವಹಿಸಿದ್ದು ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಬಿಎಸ್‌ವೈರನ್ನು ಕತ್ತಲೆಯಲ್ಲಿಟ್ಟು ಜೆಡಿಎಸ್ ಜೊತೆ ಮೈತ್ರಿ: ರೇಣುಕಾಚಾರ್ಯ ಹೊಸ ಬಾಂಬ್
ಡಿಕೆಶಿ ನಿಮ್ಮ ಕೆಟ್ಟ ರಾಜಕೀಯ, ಆಟ ನಡೆಯಲ್ಲ: ಜೆಡಿಎಸ್ ಪಕ್ಷವನ್ನು ಶೂನ್ಯ ಮಾಡಿಬಿಡುತ್ತೇನೆ. ಅಲ್ಲಿ ಒಬ್ಬ ಸಮರ್ಥ ನಾಯಕನನ್ನು ಇರಲು ಬಿಡಲ್ಲ ಎಂದು ಮಿಸ್ಟರ್ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆದರೆ, ಮಿಸ್ಟರ್ ಡಿಕೆಶಿಯವರೇ, ನಿಮ್ಮ ಈ ಕಸನು ಎಂದಿಗೂ ಈಡೇರುವುದಿಲ್ಲ. ನಿಮ್ಮ ಕೆಟ್ಟ ರಾಜಕೀಯ ಆಟ ನನ್ನ ಬಳಿ ನಡೆಯಲ್ಲ. ಅದು ನಿಮಗೆ ಗೊತ್ತಿರಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದರು.
ಬಿಡದಿಯ ಕೇತಿಗಾನಹಳ್ಳಿಯ ಎಚ್.ಡಿ.ಕುಮಾರಸ್ವಾಮಿ ಅವರ ತೋಟದಲ್ಲಿ ಜೆಡಿಎಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು ಹಾಗೂ ಹಿರಿಯ ಮುಖಂಡರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಡಿಕೆಶಿ ಅವರೇ, ನಿಮ್ಮ ಕೆಟ್ಟ ರಾಜಕೀಯ ಆಟ ಏನೆಂದು ನನಗೆ ಗೊತ್ತಿದೆ. ಅದೆಲ್ಲ ನನ್ನ ಬಳಿ ನಡೆಯಲ್ಲ. ಅದು ನಿಮಗೆ ಗೊತ್ತಿರಲಿ, ನಿಮ್ಮಿಂದ ನಮ್ಮ ಪಕ್ಷವನ್ನು ಏನು ಮಾಡಲು ಸಾಧ್ಯವಿಲ್ಲ ಎಂದರು. ಆ ವ್ಯಕ್ತಿಗೆ ಉತ್ತರ ಕೊಡಬೇಕು, ಕೊಡುವ ಕೆಲಸ ಮಾಡುತ್ತೇವೆ. ಇವತ್ತು ಕುಮಾರಸ್ವಾಮಿ ಅವರು ಗಟ್ಟಿಯಾದ ಸಂದೇಶ ಕೊಟ್ಟಿದ್ದಾರೆ.
ಬೆಳ್ಳಂ ಬೆಳ್ಳಿಗ್ಗೆ ಬೆಂಗಳೂರಿನಲ್ಲಿ ಮಳೆರಾಯ ಆಗಮನ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ನಮ್ಮ ಪಕ್ಷವನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ವೇಳೆ ಯಾರಾದರೂ ಹಾಗೆ ಭಾವಿಸಿದ್ದರೆ ಅದು ಅವರ ಭ್ರಮೆ ಅಷ್ಟೇ. ಈ ಸಭೆ ಮೂಲಕ ಕುಮಾರಸ್ವಾಮಿ ಅವರು ಒಳ್ಳೆಯ ಸಂದೇಶ ನೀಡಿದ್ದಾರೆ. ಪಕ್ಷದ ಶಕ್ತಿ ಏನು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ. ಈ ಸಭೆಗೆ ಬಂದ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದು ದೇವೇಗೌಡರು ಭಾವುಕರಾದರು. ಪಕ್ಷದ ಬೆಳೆವಣಿಗೆಗೆ ಒಳ್ಳೆಯ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ರಾಜಕೀಯ ಬೆಳವಣಿಗೆ ಆಗುತ್ತಿದೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸಮರ್ಥಿಸಿಕೊಂಡರು.