ಬೆಂಗಳೂರು (ಆ. 25):  ರಾಜ್ಯದ ಒಳನಾಡು ಜಿಲ್ಲೆಗಳ ಕೆಲವು ಪ್ರದೇಶಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಆ.26ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಯಾದಗಿರಿ ಸೇರಿದಂತೆ ಉತ್ತರ ಒಳನಾಡು ಹಾಗೂ ಹಾಸನ, ಚಿಕ್ಕಮಗಳೂರು, ಕೊಡಗು, ಬೆಂಗಳೂರು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆ ಬೀಳುವ ನೀರಿಕ್ಷೆ ಇದ್ದು, ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಈ ಸಂದರ್ಭದಲ್ಲಿ ತಾಪಮಾನ ಗರಿಷ್ಠ 28 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಮಹಾಮಳೆಗೆ ತತ್ತರಿಸಿದೆ ಭಾರತ, 3 ರಾಜ್ಯಗಳಿಗೆ ಕಂಟಕ, 5 ರಾಜ್ಯಗಳಿಗೆ ಅಪಾಯ!

ಮಳೆ ಬಿದ್ದ ಪ್ರಮಾಣ:

ಆ. 24ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಯಲ್ಲಿ ಉತ್ತರ ಕನ್ನಡದ ಕ್ಯಾಸಲ್‌ ರಾಕ್‌ 12 ಸೆಂ.ಮೀ, ಉತ್ತರ ಕನ್ನಡದ ಮಂಕಿ 9, ಚಾಮರಾಜನಗರ ಜಿಲ್ಲೆಯ ಯಳಂದೂರು 5, ಉಡುಪಿಯ ಕೊಲ್ಲೂರು 4, ಕೋಲಾರದ ಮಾಲೂರು ಮತ್ತು ರಾಯಲ್‌ಪಾಡುನಲ್ಲಿ 3 ಸೆಂ.ಮೀ. ಮಳೆಯಾಗಿದೆ.