ಕರ್ನಾಟಕ ರಾಜ್ಯವನ್ನು ಕೈಗಾರಿಕ ಸ್ನೇಹಿ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ...

ಹುಬ್ಬಳ್ಳಿ(ಫೆ.15): ರಾಜ್ಯವನ್ನು ಕೈಗಾರಿಕಾ ಸ್ನೇಹಿಯನ್ನಾಗಿಸಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಕೈಗಾರಿಕೆಗಳ ಅನುಮೋದನೆ ಪ್ರಕ್ರಿಯೆಯನ್ನು ತ್ವರಿತವಾಗಿ ನಿಭಾಯಿಸಲು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದ್ದು, ಭೂ ಸ್ವಾಧೀನ ಮತ್ತು ಭೂ ಪರಿವರ್ತನೆಗೆ 60 ದಿನಗಳ ಬದಲಾಗಿ 30 ದಿನಗಳಲ್ಲೇ ಅನುಮತಿ ನೀಡುವ ವ್ಯವಸ್ಥೆ ಜಾರಿಗೊಳಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ.

Scroll to load tweet…

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಉದ್ಯೋಗ ಮಿತ್ರ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸಹಯೋಗದಲ್ಲಿ ಆಯೋಜನೆಯಾಗಿದ್ದ ‘ಇನ್‌ವೆಸ್ವ್‌ ಕರ್ನಾಟಕ ಹುಬ್ಬಳ್ಳಿ -2020’ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ಸಿಎಂ ನನ್ನ ಖಾತೆ ಬದಲಿಸಲಿ: ಆನಂದ ಸಿಂಗ್‌

ಉದ್ಯಮ ಆರಂಭಿಸಲು ಉಂಟಾಗುವ ಅನಗತ್ಯ ವಿಳಂಬ ತಪ್ಪಿಸುವುದು ಹಾಗೂ ಶೀಘ್ರ ಅನುಮೋದನೆ ಸಿಗುವಂಥ ವ್ಯವಸ್ಥೆ ರೂಪಿಸುವುದು ಸರ್ಕಾರದ ಆದ್ಯತೆ. ರಾಜ್ಯಕ್ಕೆ ಹೆಚ್ಚಿನ ಹೂಡಿಕೆ ಆಕರ್ಷಿಸಲು ಹಾಗೂ ಯಾವುದೇ ರೀತಿಯ ಉದ್ಯಮ ಆರಂಭಿಸುವವರಿಗೆ ಅನುಮತಿಗೆ ಇಲ್ಲಿವರೆಗೆ 60 ದಿನಗಳ ಕಾಲಾವಕಾಶದ ಅಗತ್ಯವಿತ್ತು. ಈ ಅವಧಿಯನ್ನು 30 ದಿನಗಳಿಗೆ ಇಳಿಸುತ್ತಿದ್ದೇವೆ. ಇದಕ್ಕಾಗಿ ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ಸೆಕ್ಷನ್‌ 109ಕ್ಕೆ ತಿದ್ದುಪಡಿ ತರಲಾಗುತ್ತಿದೆ. ಒಂದು ವೇಳೆ 30 ದಿನಗಳಲ್ಲಿ ಅನುಮತಿ ನೀಡದಿದ್ದರೆ, ಡೀಮ್‌್ಡ ಅಂದರೆ ಪರಿಗಣಿತ ಅನುಮೋದನೆ ಮತ್ತು ಪರಿವರ್ತನೆ ಎಂದು ಪರಿಗಣಿಸುವ ವ್ಯವಸ್ಥೆಯನ್ನು ಸಹ ಅಡಕಗೊಳಿಸುತ್ತಿದ್ದೇವೆ ಎಂದರು.

Scroll to load tweet…

ಕೈಗಾರಿಕಾ ಕ್ಲಸ್ಟರ್‌ ಸ್ಥಾಪನೆ:

ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೋದ್ಯಮ ಅಭ್ಯುದಯದ ಉದ್ದೇಶದಿಂದ ಉತ್ತರ ಕರ್ನಾಟಕದ ವಿವಿಧ ವಲಯಗಳಲ್ಲಿ ಕ್ಲಸ್ಟರ್‌ಗಳನ್ನು ಸ್ಥಾಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಕೊಪ್ಪಳದಲ್ಲಿ ಕರಕುಶಲ ಆಟಿಕೆಗಳ ಕ್ಲಸ್ಟರ್‌, ಬಳ್ಳಾರಿಯಲ್ಲಿ ಟೆಕ್ಸ್‌ಟೈಲ್‌ ಕ್ಲಸ್ಟರ್‌, ಹುಬ್ಬಳ್ಳಿಯಲ್ಲಿ ಎಫ್‌ಎಂಸಿಜಿ ಕ್ಲಸ್ಟರ್‌, ಕಲಬುರಗಿಯಲ್ಲಿ ಸೌರ ವಿದ್ಯುತ್‌ ಸರಕುಗಳ ಕ್ಲಸ್ಟರ್‌ ಮತ್ತು ಬೀದರ್‌ನಲ್ಲಿ ಕೃಷಿ ಉಪಕರಣಗಳ ಕ್ಲಸ್ಟರ್‌ ತೆರೆಯಲಾಗುತ್ತಿದೆ ಎಂದರು.

ಹುಬ್ಬಳ್ಳಿ- ಧಾರವಾಡ ಭೂ ಪ್ರದೇಶ ದೇಶಿಯ ಮತ್ತು ಜಾಗತಿಕ ಬಂಡವಾಳ ಹೂಡಿಕೆಗೆ ಸೂಕ್ತ ಸ್ಥಳವಾಗಿದೆ. ಇಲ್ಲಿ ಸಕಲ ಮೂಲಸೌಕರ್ಯ, ನುರಿತ ಮಾನವ ಸಂಪನ್ಮೂಲದ ಲಭ್ಯತೆ ಇದೆ. ಉತ್ತರ ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.

'ಭಾರತ ಐದು ಟ್ರಿಲಿಯನ್‌ ಡಾಲರ್‌ ಆರ್ಥಿಕ ವ್ಯವಸ್ಥೆಯತ್ತ ಹೆಜ್ಜೆ ಇಟ್ಟಿದ್ದು, ಅದರಲ್ಲಿ ಕರ್ನಾಟಕದ ಪಾಲುದಾರಿಕೆ ಅತ್ಯಂತ ಪ್ರಮುಖವಾಗಿದೆ. ಅರ್ಥ ವ್ಯವಸ್ಥೆಗೆ ಮಹತ್ವದ ಕೊಡುಗೆ ನೀಡುವಂಥ ಸಾಮರ್ಥ್ಯ ಕರ್ನಾಟಕಕ್ಕಿದೆ'.

#NewsIn100Seconds ಈ ಕ್ಷಣದ ಪ್ರಮುಖ ಸುದ್ದಿಗಳು

"