Ration ಅಂಗಡಿಗಳ ಮುಷ್ಕರ: ಈ ತಿಂಗಳು ರಾಜ್ಯದಲ್ಲಿ ಪಡಿತರ ವಿತರಣೆ ತಡ?
ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನ್ಯಾಯಬೆಲೆ ಅಂಗಡಿ ಮಾಲೀಕರು ರಾಜ್ಯಾದ್ಯಂತ ಪಡಿತರ ಎತ್ತುವಳಿ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಪ್ರಸಕ್ತ ತಿಂಗಳು ಪಡಿತರ ಆಹಾರ ಹಂಚಿಕೆಯಲ್ಲಿ ವಿಳಂಬವಾಗುವ ಸಾಧ್ಯತೆ ಇದೆ.

ಬೆಂಗಳೂರು (ನ.03): ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನ್ಯಾಯಬೆಲೆ ಅಂಗಡಿ ಮಾಲೀಕರು ರಾಜ್ಯಾದ್ಯಂತ ಪಡಿತರ ಎತ್ತುವಳಿ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಪ್ರಸಕ್ತ ತಿಂಗಳು ಪಡಿತರ ಆಹಾರ ಹಂಚಿಕೆಯಲ್ಲಿ ವಿಳಂಬವಾಗುವ ಸಾಧ್ಯತೆ ಇದೆ. ಈ ನಡುವೆ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನ.7ರಂದು ಬೃಹತ್ ಪ್ರತಿಭಟನೆ ನಡೆಸಲು ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸಂಘ ಕರೆ ಕೊಟ್ಟಿದ್ದು, ಸಾವಿರಾರು ಮಂದಿ ಭಾಗಿಯಾಗುವ ನಿರೀಕ್ಷೆಯಿದೆ.
ಈ ಬಗ್ಗೆ ಆಹಾರ ಇಲಾಖೆ ಸಚಿವರು ಹಾಗೂ ಅಧಿಕಾರಿಗಳ ಜತೆ ಮೂರ್ನಾಲ್ಕು ಬಾರಿ ಸಭೆ ನಡೆದರೂ ಸಮಸ್ಯೆ ಈಡೇರಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯ ಪ್ರವೇಶಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು. ಪಡಿತರ ಕಾರ್ಡ್‌ದಾರರಿಗೆ ಅಕ್ಕಿ ಬದಲು ಹಣ ನೀಡುವುದರಿಂದ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸಿಗಬೇಕಿದ್ದ ಕಮಿಷನ್ ಸಿಗುತ್ತಿಲ್ಲ. ಹಾಗಾಗಿ ಎಲ್ಲರಿಗೂ 10 ಕೆಜಿ ಅಕ್ಕಿಯನ್ನೇ ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಸರ್ಕಾರ: ಸಿದ್ದರಾಮಯ್ಯ ಖಡಕ್ ಹೇಳಿಕೆ
ಇಕೆವೈಸಿ ಕೆಲಸ ನಿರ್ವಹಿಸಿದ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಬಾಕಿಯಿರುವ 23.75 ಕೋಟಿ ರು. ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಕ್ವಿಂಟಲ್‌ಗೆ 250 ರು. ಕಮೀಷನ್ ಕೊಡಬೇಕು. ಮಾಲೀಕರು ಮೃತಪಟ್ಟರೆ ಅವರ ಕುಟುಂಬಕ್ಕೆ ಸರ್ಕಾರ ನೆರವು ನೀಡಬೇಕು. ಸರ್ವರ್ ಸಮಸ್ಯೆ ನಿವಾರಿಸಲು ಪ್ರತಿ ಜಿಲ್ಲೆಗೆ ಪ್ರತ್ಯೇಕ ಸರ್ವರ್ ಕೇಂದ್ರ ಸ್ಥಾಪಿಸಬೇಕು. ಡಿಬಿಟಿ ಮೂಲಕವೇ ಕಮೀಷನ್ ಹಣವನ್ನು ಪಡಿತರ ವಿತರಕರಿಗೆ ನೀಡಬೇಕು ಎಂದು ಸಂಘ ಆಗ್ರಹಿಸಿದೆ.