Asianet Suvarna News Asianet Suvarna News

ನನ್ನ ವಿರುದ್ಧ ಸುಳ್ಳು ಆರೋಪ, ತೇಜೋವಧೆ ಮಾಡಿದವರ ಮೇಲೆ ಮಾನನಷ್ಟ ಕೇಸ್‌: ಚನ್ನಣ್ಣನವರ್‌

*   ಕಾನೂನುಬದ್ಧವಾಗಿ ಆಸ್ತಿ ಖರೀದಿ
*   ತೇಜೋವಧೆ ಮಾಡಿದವರ ಮೇಲೆ 3 ಕೋಟಿ ಮಾನನಷ್ಟ ಕೇಸ್‌
*   ನನಗೆ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ
 

False Accusations against Me Says Karnataka IPS officer Ravi Channannavar grg
Author
Bengaluru, First Published Feb 1, 2022, 9:26 AM IST

ಬೆಂಗಳೂರು(ಫೆ.01):  ಇತ್ತೀಚಿಗೆ ಸಾಮಾಜಿಕ ತಾಲತಾಣಗಳಲ್ಲಿ(Social Media) ಕೆಲ ವ್ಯಕ್ತಿಗಳು ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಆಧಾರರಹಿತ ಆರೋಪವು ದುರುದ್ದೇಶದಿಂದ ಕೂಡಿದೆ ಎಂದು ಐಪಿಎಸ್‌ ಅಧಿಕಾರಿ(IPS officer) ರವಿ ಚನ್ನಣ್ಣನವರ್‌(Ravi Channannavar) ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನನ್ನ ತಂದೆ-ತಾಯಿಯವರ ಹೆಸರಿನಲ್ಲಿರುವ ಕೆಲ ಪಹಣಿ ಹಾಕಿ ನನ್ನ ವಿರುದ್ಧ ಆರೋಪಿಸಿದ್ದಾರೆ(Allegation). ಈ ಆಸ್ತಿಗಳೆಲ್ಲ ಕಾನೂನುಬದ್ಧವಾಗಿಯೇ ಖರೀದಿಸಿದ್ದು, ಅವು ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಾಗಿವೆ. ಅಲ್ಲದೆ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ(Department of Income Tax) ಮಾಹಿತಿ ನೀಡಿದ್ದೇನೆ ಎಂದು ಖಚಿತಪಡಿಸಿದ್ದಾರೆ.

30 ವರ್ಷ ಹಿಂದೆ ತಾವು ಕೂಲಿ ಕೆಲಸ ಮಾಡಿದ್ದ ಊರಿಗೆ ರವಿ ಚನ್ನಣ್ಣನವರ್‌ ಭೇಟಿ

ಈ ಆಸ್ತಿಗಳನ್ನು ನಾನು ಭ್ರಷ್ಟ(Corruption) ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕು ಎಂದೇ ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸಲಾಗುತ್ತಿದೆ. ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳಡಿ ವರ್ತಿಸಬೇಕಾಗಿದೆ. ನನ್ನ ಕರ್ತವ್ಯ ಆದ್ದರಿಂದ ಈ ಕುರಿತಂತೆ ನಾನು ಇದಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನು ಬದ್ಧವಾಗಿ ಕ್ರಮ ಕೈಗೊಂಡಿದ್ದೇನೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ನಾನು ಈಗಾಗಲೇ ಕಾನೂನಾತ್ಮಕವಾಗಿ(Legal) ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್‌ ನೋಟಿಸ್‌(Legal Notice) ನೀಡಿದ್ದೇನೆ. ಇದಕ್ಕೆ ಉತ್ತರ ಬಂದಿಲ್ಲ. ಈ ಸುಳ್ಳು ಆರೋಪ ಸಂಬಂಧ ನ್ಯಾಯಾಲಯದಲ್ಲಿ 3 ಕೋಟಿ ಮಾನನಷ್ಟ ಮೊಕದ್ದಮೆಯನ್ನು(Defamation Case) ದಾಖಲಿಸಿರುತ್ತೇನೆ. ಸುಳ್ಳು ಆಪಾದನೆ ಮಾಡಿದ್ದಕ್ಕೆ ಎರಡು ವರ್ಷಗಳು ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ನ್ಯಾಯಾಲಯದಲ್ಲಿ(Court) ಕ್ರಿಮಿನಲ್‌ ಮಾನ ಹಾನಿ ಪ್ರಕರಣ ದಾಖಲಿಸಿದ್ದೇನೆ ಎಂದು ಹೇಳಿದ್ದಾರೆ.

ನನಗೆ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರೆಗೆ ಎಲ್ಲ ಸುಳ್ಳು ಸುದ್ದಿಗಳನ್ನು ನಂಬಬೇಡಿ. ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಾಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಾಜ್ಞೆ ತಂದದ್ದನ್ನು ಅನ್ಯತಾ ಭಾವಿಸರಬಾರದು ಎಂದಿದ್ದಾರೆ.

ನನಗೆ ನ್ಯಾಯವಾದಿಗಳ ಬಗ್ಗೆ, ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ ಅಪಾರ ಗೌರವವಿದೆ. ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು. ಆಶ್ಲೀಲ ಪದ ಬಳಕೆ ಹಾಗೂ ಹೀಯಾಳಿಸುವುದನ್ನು ಮಾಡಬಾರದು ಎಂದು ರವಿ ಚನ್ನಣ್ಣನವರ್‌ ವಿನಂತಿಸಿದ್ದಾರೆ.

ಡ್ರಗ್ಸ್‌ ದೊರೆತರೆ ಅಧಿಕಾರಿಗಳೇ ಹೊಣೆ: ರವಿ ಡಿ ಚನ್ನಣ್ಣನವರ್‌

ರವಿ ಡಿ ಚನ್ನಣ್ಣನವರ್ ವರ್ಗಾವಣೆ ತಡೆಹಿಡಿದ ಕರ್ನಾಟಕ ಸರ್ಕಾರ

ಬೆಂಗಳೂರು: ಐಪಿಎಸ್ ರವಿ ಡಿ ಚನ್ನಣ್ಣನವರ್ ಅವರನ್ನ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ತಡೆಹಿಡಿಯಲಾಗಿತ್ತು.
ಜ.27 ರಂದು ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿತ್ತು ಇದರಲ್ಲಿ ರವಿ ಡಿ ಚನ್ನಣ್ಣನವರ್ ಸಹ ಇದ್ದರು. ಸಿಐಡಿಯಿಂದ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ(Transfer) ಮಾಡಲಾಗಿತ್ತು.

ಆದ್ರೆ, ಕರ್ನಾಟಕ ಸರ್ಕಾರ ಏಕಾಏಕಿ ರವಿ ಡಿ ಚನ್ನಣ್ಣನವರ್ ಅವರ ವರ್ಗಾವಣೆ ಆದೇಶನ್ನು ತಡೆಹಿಡಿಲಾಗಿದೆ ಎಂದು ಸುತ್ತೋಲೆ ಹೊರಡಿಸಿತ್ತು. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರವಿ ರವಿ ಡಿ ಚನ್ನಣ್ಣನವರ್ ವರ್ಗಾವಣೆಗೆ ಸರ್ಕಾರ ಬ್ರೇಕ್ ಹಾಕಿತ್ತು. 
 

Follow Us:
Download App:
  • android
  • ios