ಪಿಎಸ್‌ಐ ನೇಮಕದಲ್ಲಿ ಅಕ್ರಮ ಆರೋಪ ಸುಳ್ಳು: ಸಚಿವ ಆರಗ
* ಪರೀಕ್ಷೆಯಲ್ಲಿ ಬ್ಲೂಟೂಥ್ ಬಳಸಿದ ಆರೋಪ ಸುಳ್ಳು
* ಕಲ್ಯಾಣ ಕರ್ನಾಟಕ ಮೀಸಲು ಗೊಂದಲ ಹಿನ್ನೆಲೆ ನೇಮಕಾತಿ ಪಟ್ಟಿಗೆ ತಡೆ
* ಕಾಂಗ್ರೆಸ್‌ನ ಅರವಿಂದ ಕುಮಾರ್ ಅರಳಿ ಪ್ರಶ್ನೆಗೆ ಉತ್ತರಿಸಿದ ಸಚಿವ ಆರಗ
ಬೆಂಗಳೂರು(ಮಾ.31): ಪೊಲೀಸ್ ಸಬ್ ಇನ್‌ಸ್ಪೆಕ್ಟರ್(PSI) ನೇಮಕದಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಕಲ್ಯಾಣ ಕರ್ನಾಟಕ(Kalyana Karnataka) ಭಾಗಕ್ಕೆ ಮೀಸಲು ಗೊಂದಲಗಳನ್ನು ಸರಿಪಡಿಸುವ ಉದ್ದೇಶದಿಂದ ನೇಮಕಾತಿ ತಡೆ ಹಿಡಿಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ತಿಳಿಸಿದರು.
ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ನ(Congress) ಅರವಿಂದ ಕುಮಾರ್ ಅರಳಿ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಪಿಎಸ್‌ಐ ನೇಮಕಾತಿ(Recruitment) ಪರೀಕ್ಷೆಯಲ್ಲಿ(Competitive Exam) ಬ್ಲೂ ಟೂಥ್ ಬಳಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬೆಳಗಾವಿ, ಕಲಬುರಗಿ ಸೇರಿ ಕೆಲವು ಕಡೆ ಹೋಟೆಲ್ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆಯಲಾಗಿದೆ. ಆದರೆ ಪರೀಕ್ಷಾ ಕೊಠಡಿಯಲ್ಲಿ ಬ್ಲೂಟೂಥ್ ಬಳಕೆಯಾಗಿಲ್ಲ. ಪರೀಕ್ಷಾ ಕೇಂದ್ರದ ಸುತ್ತ ಎರಡು ಹಂತದ ಬಿಗಿ ಪೊಲೀಸ್(Police) ಭದ್ರತೆ ಒದಗಿಸಲಾಗಿತ್ತು ಎಂದು ತಿಳಿಸಿದರು.
PSI ನೇಮಕಾತಿ ಅಕ್ರಮ: ತನಿಖೆಗೆ ಮುನ್ನವೇ ಎಳ್ಳು ನೀರು ಬಿಟ್ರಾ ಗೃಹ ಸಚಿವ ಜ್ಞಾನೇಂದ್ರ?
ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಾತಿ(Reservation) ಗೊಂದಲ ಉಂಟಾಗಿದೆ ಎಂದು ಆ ಭಾಗದ ಸದಸ್ಯರು ಆಕ್ಷೇಪಿಸಿದ ಕಾರಣ ಅದನ್ನು ಪರಿಶೀಲಿಸಲು ಮುಖ್ಯಮಂತ್ರಿ ಅವರು ನೇಮಕಾತಿ ಪಟ್ಟಿಗೆ ತಡೆ ನೀಡಿದ್ದಾರೆ ಎಂದರು.
ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಹಣದ ವ್ಯವಹಾರವೂ ಇಲ್ಲ. ಪರೀಕ್ಷೆಯಲ್ಲಿ ನಕಲು ನಡೆದಿದೆ ಎಂಬುದು ಸತ್ಯಕ್ಕೆ ದೂರವಾಗಿದೆ. ಸದಸ್ಯರಿಗೆ ಕ್ಷೇತ್ರವಾರು ಫಲಿತಾಂಶ ಒದಗಿಸುತ್ತೇನೆ. ಒಂದೇ ಕ್ಷೇತ್ರದ ಹಾಗೂ ಒಂದೇ ಪರೀಕ್ಷಾ ಕೇಂದ್ರದ ಅಭ್ಯರ್ಥಿಗಳು ಹೆಚ್ಚಾಗಿ ಆಯ್ಕೆಯಾಗಿದ್ದಾರೆ ಎಂಬುದು ಸರಿಯಾದ ಆರೋಪವಲ್ಲ ಎಂದು ಹೇಳಿದರು.
ನೇಮಕಾತಿ ಪ್ರಕ್ರಿಯೆಯಲ್ಲಿ ಯಾವ ವ್ಯಕ್ತಿ, ಎಲ್ಲಿ ಎಷ್ಟು ಹಣ ಪಡೆದಿದ್ದಾರೆ ಎಂದು ನಿರ್ದಿಷ್ಟವಾಗಿ ಮಾಹಿತಿ ನೀಡಿದರೆ ತನಿಖೆಗೆ ಆದೇಶಿಸುತ್ತೇವೆ ಅದನ್ನು ಬಿಟ್ಟು ಪತ್ರಿಕೆಗಳಲ್ಲಿ ವರದಿಯಾಗಿರುವುದನ್ನು ಉಲ್ಲೇಖಿಸಿದರೆ ಪ್ರತಿಕ್ರಿಯಿಸುವುದು ಹೇಗೆ ಎಂದರು.
345 ಪಿಎಸ್‌ಐ ಹುದ್ದೆಗಳಿಗೆ ಒಂದು ಲಕ್ಷ ಜನರು, 4000 ಕಾನ್ಸ್‌ಟೇಬಲ್ ಹುದ್ದೆಗೆ ನಾಲ್ಕು ಲಕ್ಷ ಜನ ಪರೀಕ್ಷೆ ಬರೆದ್ದಾರೆ. ಅವಕಾಶ ಸಿಗದಿದ್ದವರು ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡುತ್ತಿದ್ದಾರೆ. ಅದಕ್ಕೆ ಸೂಕ್ತ ದಾಖಲೆಗಳಿವೆಯೇ, ಎಲ್ಲೋ ಕೇಳಿ ಬರುತ್ತಿತ್ತು ಎಂಬ ಮಾತುಗಳನ್ನು ಆಧರಿಸಿ ಇಲ್ಲಿ ಚರ್ಚೆ ಮಾಡಲು ಸಾಧ್ಯವೇ ಎಂದು ಸಚಿವರು ಪ್ರಶ್ನಿಸಿದರು.
PSI Recruitment Scam: ಸರ್ಕಾರಕ್ಕೆ ಕೆಟ್ಟ ಹೆಸರು ಬೇಡ, ತನಿಖೆಯಾಗಲಿ: ಸಚಿವ ಪ್ರಭು ಚವ್ಹಾಣ್
ಪಿಎಸ್‌ಐ ಆಕಾಂಕ್ಷಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟ ಸಚಿವ ಆರಗ
ಪೊಲೀಸ್ ಸಬ್ ಇನ್ಸ್‌ಪೆಕ್ಟರ್(Police Sub Inspector) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವುದರಿಂದ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ(Karnataka) ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆ ಖಾಲಿ ಇರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದರು.
ಮಾ.22 ರಂದು ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಟಿ.ವೆಂಕಟರಮಣಯ್ಯ ಪ್ರಶ್ನೆಗೆ ಉತ್ತರಿಸಿದ ಅವರು, ಪೊಲೀಸ್ ಇಲಾಖೆಯಲ್ಲಿ(Police Department) ವಿವಿಧ ಹಂತದ 35 ಸಾವಿರ ಹುದ್ದೆಗಳು ಖಾಲಿ ಇದ್ದವು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(BS Yediyurappa) ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರ ನೇತೃತ್ವದ ಸರ್ಕಾರದಲ್ಲಿ ನಿರಂತರವಾಗಿ ನೇಮಕಾತಿ(Recruitment) ಪ್ರಕ್ರಿಯೆಗಳು ನಡೆಯುತ್ತಿವೆ. ಪರಿಣಾಮ ಈಗ 12 ಸಾವಿರ ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ. 950 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆ ನೇಮಕಾತಿ ನಡೆಯುತ್ತಿದ್ದು, ಆದೇಶ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಇದು ಮುಕ್ತಾಯವಾದರೆ ರಾಜ್ಯದಲ್ಲಿ ಪಿಎಸ್‌ಐ(PSI) ಹುದ್ದೆಗಳು ಖಾಲಿ ಇರುವುದಿಲ್ಲ ಎಂದು ಹೇಳಿದ್ದರು.