Asianet Suvarna News Asianet Suvarna News

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೈದ್ಯ ಇನ್ನಿಲ್ಲ: ಸಾವಿನಲ್ಲೂ ಸಾರ್ಥಕತೆ ಮೆರೆದ ಜನಮೆಚ್ಚಿದ ಡಾಕ್ಟರ್

ಜಾನಪದ ಸಾಹಿತಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಜಯಪುರದ ಖಾಸಿಂಸಾಬ್ ನಿಧನದ ಬೆನ್ನಲ್ಲೇ ಮತ್ತೋರ್ವ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ವೈದ್ಯ ಕೊನೆಯುಸಿರೆಳೆದಿದ್ದಾರೆ

Famous doctor dr gururaj hebbar Passes Away In Hassan rbj
Author
First Published Sep 4, 2022, 12:35 PM IST

ಹಾಸನ. ಸೆಪ್ಟೆಂಬರ್.04):  ಹಾಸನದ ಖ್ಯಾತ ಹಾಗೂ ಅಪರೂಪದ ವೈದ್ಯರು, ಸಮಾಜ ಸೇವಕರೂ ಆಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಹಿರಿಯ ವೈದ್ಯ ಡಾ. ಗುರುರಾಜ ಹೆಬ್ಬಾರ್ (72) ನಿಧನರಾಗಿದ್ದಾರೆ. 

ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು(ಭಾನುವಾರ) ಹಾಸನದ ವೈದ್ಯಕೀಯ ಬೋದಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರೆದ ಜನಮೆಚ್ಚಿದ ಡಾಕ್ಟರ್
ತಾವು ಎಂಬಿಬಿಎಸ್ ಓದಿದ ಮೈಸೂರು ಮೆಡಿಕಲ್ ಕಾಲೇಜಿಗೆ ದೇಹದಾನ ಹಾಗೂ ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಬಯಕೆಯಂತೆ ಕುಟುಂಬ ಸದಸ್ಯರು ಡಾ.ಗುರುರಾಜ್ ಹೆಬ್ಬಾರ್ ದೇಹ ಹಾಗು ನೇತ್ರದಾನ ಮಾಡಿದರು.  ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ಹೆಬ್ಬಾರ್ ಡಾಕ್ಟರ್ ಮೃತದೇಹ ಬಳಕೆಯಾಗಲಿದೆ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಹು ಖ್ಯಾತಿಯ ಸಾಹಿತಿ ಖಾಸಿಂಸಾಬ್ ಇನ್ನಿಲ್ಲ

ಹಾಸನದಲ್ಲಿ  ನೂರಾರು ಜನರಿಂದ ಮೃತ ವೈದ್ಯರ ಮೃತದೇಹ ಮೆರವಣಿಗೆ ಮಾಡಿದರು.  ಬಳಿಕ ಪ್ರಾಥಮಿಕ ಶಿಕ್ಷಣ ಪಡೆದ ಹಾಸನ ತಾಲ್ಲೂಕಿನ ಕಟ್ಟಾಯದಲ್ಲಿ ಅಂತಿಮ ದರ್ಶನಕ್ಕೆ ಇಡಲಾಯ್ತು.

ಹೆಬ್ಬಾರ್ ಅವರು ಕೇವಲ ವೈದ್ಯರಷ್ಟೇ ಅಲ್ಲ, ಸಮಾಜ ಸೇವಕರಾಗಿ ತಮ್ಮ ತನು, ಮನ, ಧನ ವ್ಯಯಿಸಿದರು. ಬಡವರ ಬಂಧುವಾಗಿ, ಬಡವರಿಗಾಗಿಯೇ ಹಾಸನದಲ್ಲಿ ಮೊದಲಿಗೆ ಸಹಕಾರಿ ತತ್ವದಡಿ ಜನಕಲ್ಯಾಣ ರೀಸರ್ಚ್ ಅಂಡ್ ಚಾರಿಟಬಲ್ ಟ್ರಸ್ಟ್ ನಿಂದ ಸಿ.ಟಿ. ಸ್ಕ್ಯಾನಿಂಗ್ ಸೆಂಟರ್ ತೆರೆದರು. ಸಂಜೀವಿನಿ ಸಹಕಾರಿ ಆಸ್ಪತ್ರೆ, ಕಾಮಧೇನು ಸಹಕಾರಿ ವಿದ್ಯಾಶ್ರಮ (ವೃದ್ಧಾಶ್ರಮ), ರೈತ ಬಂಧು ಸಹಕಾರಿ ಸಂಸ್ಥೆ, ಪರಿಪೂರ್ಣ ಚಾರಿಟಬಲ್ ಟ್ರಸ್ಟ್‍ನಿಂದ ಪತ್ರಿಕೋದ್ಯಮ ಕ್ಷೇತ್ರಕ್ಕೂ ಪದಾರ್ಪಣೆ ಮಾಡಿದ್ದರು.

ಅಷ್ಟೇ ಅಲ್ಲದೆ ನಂದಗೋಕುಲ ಶಿಶುಕೇಂದ್ರ, ಗೋ ಸಂರಕ್ಷಣೆ, ಪ್ರಾಣಿಹಿಂಸಾ ನಿವಾರಣಾ ಸಂಘ, ಹಾಸನಾಂಬ ಧರ್ಮಛತ್ರ ಹೀಗೆ ನಾನಾ ಸಂಸ್ಥೆಗಳ ಹುಟ್ಟಿಗೆ ಕಾರಣರಾದರು.ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೂ ಆಗಿರುವ ಶ್ರೀಯುತರು, ಬಡವರು, ದೀನ ದಲಿತರು, ಅಸಹಾಯಕರನ್ನು ಕಂಡರೆ ಎಲ್ಲಿಲ್ಲದ ಪ್ರೀತಿ. ಇದೇ ಕಾರಣಕ್ಕೆ ಬಡವರಿಗೆ ಉಚಿತವಾಗಿ ವೈದ್ಯಕೀಯ ಸೇವೆ ನೀಡಿದ್ದರು.  ಈ ಎಲ್ಲಾ ಸೇವೆಗಳನ್ನ ಗಮನಿಸಿ ಅವರಿಎಗ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

1959 ರ ಜ.1 ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ತಾಲೂಕಿನ ಸೋಮೇಶ್ವರದಲ್ಲಿ ಜನಿಸಿದ ಇವರು, ನಂತರ ಹಾಸನಕ್ಕೆ ಬಂದು ಕಟ್ಟಾಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮುಗಿಸಿದ್ದರು. ಹಾಸನದ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ, ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿ, ಆಲೂರು ತಾಲೂಕು ಪಾಳ್ಯದಲ್ಲಿ ಖಾಸಗಿ ಕ್ಲಿನಿಕ್ ತೆರೆದರು. ಬಳಿಕ ಬೈಚನಹಳ್ಳಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸಲ್ಲಿಸಿದ ಶ್ರೀಯುತರು, ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ, ಹಾಸನದಲ್ಲಿ ಖಾಸಗಿ ಕ್ಲಿನಿಕ್ ತೆರೆದು, ತರುವಾಯ ಎಂ.ಜಿ.ರಸ್ತೆಯಲ್ಲಿ ಶ್ರೀ ರಾಮಕೃಷ್ಣ ನರ್ಸಿಂಗ್ ಹೋಂ ಸ್ಥಾಪಿಸಿದರು.

Follow Us:
Download App:
  • android
  • ios