ಸಿದ್ದು ಸಿಎಂ ಆಗಿದ್ದಕ್ಕೆ ಸೌದಿಯಿಂದ ಬಂದು ಹರಕೆ ತೀರಿಸಿದ ಅಭಿಮಾನಿ
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಕ್ಕೆ ಅವರ ಅಭಿಮಾನಿಯೊಬ್ಬರು ಸೌದಿ ಅರೇಬಿಯಾದಿಂದ ಬಂದು ತಮ್ಮ ಹರಕೆ ತೀರಿಸಿದ್ದಾರೆ. ಮೈಸೂರು ತಾಲೂಕು ಸಿದ್ಧರಾಮನಹುಂಡಿ ಗ್ರಾಮದ ಸಿದ್ದರಾಮೇಶ್ವರ ದೇವಾಲಯಕ್ಕೆ ಚಿನ್ನಲೇಪಿತ ಬೆಳ್ಳಿಯ ನಾಗಾಭರಣ ನೀಡಿ ಹರಕೆ ಸಲ್ಲಿಸಿದ್ದಾರೆ.
ಮೈಸೂರು (ಜು.19): ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಕ್ಕೆ ಅವರ ಅಭಿಮಾನಿಯೊಬ್ಬರು ಸೌದಿ ಅರೇಬಿಯಾದಿಂದ ಬಂದು ತಮ್ಮ ಹರಕೆ ತೀರಿಸಿದ್ದಾರೆ. ಮೈಸೂರು ತಾಲೂಕು ಸಿದ್ಧರಾಮನಹುಂಡಿ ಗ್ರಾಮದ ಸಿದ್ದರಾಮೇಶ್ವರ ದೇವಾಲಯಕ್ಕೆ ಚಿನ್ನಲೇಪಿತ ಬೆಳ್ಳಿಯ ನಾಗಾಭರಣ ನೀಡಿ ಹರಕೆ ಸಲ್ಲಿಸಿದ್ದಾರೆ. ದೇವೇಗೌಡನಹುಂಡಿ ನಿವಾಸಿ ಮಹದೇವರ ಪುತ್ರ ಹಾಗೂ ಅನಿವಾಸಿ ಭಾರತೀಯ ರವಿ ಮಹದೇವ ಅವರು ಹರಕೆ ತೀರಿಸಿದ ಅಭಿಮಾನಿ.
ರವಿ ಮಹದೇವ ಅವರು ಸದ್ಯ ಸೌದಿ ಅರೇಬಿಯಾದಲ್ಲಿ ವಾಸಿಯಾಗಿದ್ದು, ಸಾಗರೋತ್ತರ ಕನ್ನಡಿಗರು ಸಂಸ್ಥೆಯ ಸಂಸ್ಥಾಪಕ ಹಾಗೂ ಜಂಟಿ ಕಾರ್ಯದರ್ಶಿ ಆಗಿದ್ದಾರೆ. ಇವರು ಚುನಾವಣಾ ಪೂರ್ವದಲ್ಲಿ ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿ ಆಗಬೇಕು ಎಂದು ಪ್ರಾರ್ಥನೆ ಸಲ್ಲಿಸಿದ್ದು, ಅದರಂತೆ ಅವರು ಈಗ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ, ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ತಮ್ಮ ಹರಕೆ ಸೇವೆ ಜೊತೆಗೆ ವಿಶೇಷ ಅಭಿಷೇಕ ಪೂಜೆ ನೆರವೇರಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರ ಸಹೋದರ ಸಿದ್ದೇಗೌಡ ಹಾಗೂ ಗ್ರಾಮಸ್ಥರು ಇದ್ದರು.
ರಾಜ್ಯದಲ್ಲಿ ಹಿಂದೂಗಳು ಬದುಕಲು ಆಗದ ವಾತಾವರಣ ಇದೆ: ಯತ್ನಾಳ್
ಮೋದಿ ಮತ್ತೆ ಪ್ರಧಾನಿ ಆಗಲಿ ಎಂದು ಹರಕೆ ಹೊತ್ತಿದ್ದೇನೆ: ಪ್ರತಿ ಬಾರಿಯಂತೆ ಈ ಬಾರಿಯ ಆಷಾಢ ಶುಕ್ರವಾರದಲ್ಲೂ ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತಿ ದೇವರ ದರ್ಶನ ಪಡೆದಿರುವುದಾಗಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ತಾಯಿ ಚಾಮುಂಡೇಶ್ವರಿ ಮಹಿಷ ಮರ್ಧಿನಿ, ದುಷ್ಟರ ಸಂಹಾರ ಮಾಡಿ, ಶಿಷ್ಟರನ್ನು ರಕ್ಷಣೆ ಮಾಡಿ ಕಾಪಾಡಬೇಕೆಂಬುದು ನಮ್ಮ ಕೋರಿಕೆ. ಪ್ರಧಾನಿ ನರೇಂದ್ರಮೋದಿ ಅವರು 9 ವರ್ಷ ಅಧಿಕಾರ ಪೂರೈಸಿದ್ದಾರೆ.
ಮುಂದಿನ ವರ್ಷದ ಆಷಾಢ ಮಾಸ ಬರುವ ವೇಳೆಗೆ 3ನೇ ಬಾರಿ ನರೇಂದ್ರ ಮೋದಿ ಅವರು ಈ ದೇಶದ ಪ್ರಧಾನಿ ಆಗಬೇಕು ಎಂಬುದು ನನ್ನ ಕೋರಿಕೆ ಎಂದರು ಈ ದೇಶದ ರಕ್ಷಣೆ, ಅಭಿವೃದ್ಧಿಗೆ ಇಡೀ ಪ್ರಪಂಚದಲ್ಲಿ ಭಾರತದ ಧ್ವಜವನ್ನು ಎತ್ತಿ ಹಿಡಿಯಲು ನರೇಂದ್ರಮೋದಿ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕು ಎಂಬ ಕೋರಿಕೆಯೊಂದಿಗೆ ಚಾಮುಂಡಿ ಬೆಟ್ಟಹತ್ತುತ್ತಿದ್ದೇನೆ. ರಾಜ್ಯದಲ್ಲಿ ಇತ್ತೀಚೆಗೆ ಹಲವು ದುರ್ಘಟನೆಗಳು ನಡೆದಿವೆ. ಇವೆಲ್ಲವೂ ನಿವಾರಣೆ ಆಗಬೇಕು ಎಂದು ಅವರು ಹೇಳಿದರು. ಚಾಮುಂಡೇಶ್ವರಿ ತಾಯಿ ಭಕ್ತರಿಗೆ ರಕ್ಷಣೆ ಕೊಡಬೇಕು ಎಂಬುದು ನನ್ನ ಅಪೇಕ್ಷೆ.
ಮಿಲಿಟರಿ ವಸತಿ ಪ್ರದೇಶದಲ್ಲಿ ಬೀದಿ ನಾಯಿ ಗಣತಿಗೆ ಸಿಗುತ್ತಿಲ್ಲ ಅವಕಾಶ
ಜೈನ ಮುನಿಗಳ ಹತ್ಯೆ, ಟಿ. ನರಸೀಪುದಲ್ಲಿ ನಮ್ಮದೇ ಯುವಕನ ಹತ್ಯೆಯ ಜೊತೆಗೆ ಬೆಂಗಳೂರಲ್ಲೂ ಹತ್ಯೆಗಳಾಗಿದ್ದು ಮನಸ್ಸಿಗೆ ತುಂಬಾ ದುಖಃವಾಗಿದೆ. ಮನುಷ್ಯರ ಜೀವಗಳನ್ನು ಬಲಿ ತೆಗೆದುಕೊಳ್ಳುವ ದುಷ್ಟಶಕ್ತಿಗಳು ತಲೆ ಎತ್ತುತ್ತಿವೆ. ತಾಯಿ ಚಾಮುಂಡೇಶ್ವರಿ ಇಂತಹ ದುಷ್ಟಶಕ್ತಿಗಳನ್ನು ಸಂಹಾರ ಮಾಡಬೇಕು ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ಅವರು ಹೇಳಿದರು.