ಶಿವಮೊಗ್ಗ ಗಲಭೆ: ಮತಾಂಧ ಶಕ್ತಿಗಳ ಕೈವಾಡವಿದೆ -ನಳಿನ್ ಕುಮಾರ್ ಕಟೀಲ್
ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಸಂಘರ್ಷ ಖಂಡನೀಯ. ಹಿಂದೂಗಳ ಅಂಗಡಿ, ಮನೆಗಳ ಮೇಲೆ ದಾಳಿಯಾಗಿದೆ. ಇದರ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ. ಇದು ಸರ್ಕಾರದ ಪೂರ್ಣ ವೈಫಲ್ಯ. ಇದರ ಸಂಪೂರ್ಣ ತನಿಖೆ ನಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆಗ್ರಹಿಸಿದ್ದಾರೆ.
ಮಂಗಳೂರು (ಅ.3): ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಸಂಘರ್ಷ ಖಂಡನೀಯ. ಹಿಂದೂಗಳ ಅಂಗಡಿ, ಮನೆಗಳ ಮೇಲೆ ದಾಳಿಯಾಗಿದೆ. ಇದರ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ. ಇದು ಸರ್ಕಾರದ ಪೂರ್ಣ ವೈಫಲ್ಯ. ಇದರ ಸಂಪೂರ್ಣ ತನಿಖೆ ನಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ಚತುರ್ಥಿ ಹಬ್ಬ ಯಾವುದೇ ಗಲಾಟೆ ಇಲ್ಲದೆ ಶಾಂತಿಯುತವಾಗಿ ನಡೆದಿದೆ. ಆದರೆ ಈದ್ ಮಿಲಾದ್ ವೇಳೆ ಗಲಾಟೆ ನಡೆದಿದೆ. ಇದರ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ ಎಂದು ಆರೋಪಿಸಿದರು.
ಶಿವಮೊಗ್ಗ: ಭದ್ರಾವತಿ ಬಳಿ ಭೀಕರ ಅಪಘಾತ, ಸ್ಥಳದಲ್ಲಿಯೇ ಮೂವರು ಯುವಕರ ದುರ್ಮರಣ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಇಂಥ ಘಟನೆಗಳು ನಡೆಯುತ್ತಿವೆ. ಕಾಂಗ್ರೆಸ್ ಮೆರವಣಿಗೆಯಲ್ಲೇ ಪಾಕಿಸ್ತಾನಕ್ಕೆ ಘೋಷಣೆ ಕೂಗ್ತಾರೆ. ಕಾಂಗ್ರೆಸ್‌ಗೆ ರಾಷ್ಟ್ರವಿರೋಧಿ ಘೋಷಣೆ ಕೂಗುವವರನ್ನು ಬಂಧಿಸುವ ತಾಕತ್ತಿಲ್ಲ. ಇದರಿಂದ ರಾಜ್ಯದಲ್ಲಿ ಮತಾಂಧ ಶಕ್ತಿಗಳು ಹೆಚ್ಚಾಗುತ್ತಿವೆ ಎಂದರು.
ರಾಗಿಗುಡ್ಡ ಗಲಭೆಗೆ ಕಾರಣರಾದವರನ್ನು ಶಿಕ್ಷಿಸಿ: ಬಸವ ಮರಳುಸಿದ್ದ ಶ್ರೀ
ಶಿವಮೊಗ್ಗ: ರಾಗಿಗುಡ್ಡದಲ್ಲಿ ನಡೆದಿರುವ ಘಟನೆಗೆ ಕಾರಣದವರು ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಸರಿ ಅವರನ್ನು ಕಾನೂನಿನ ಕ್ರಮಕ್ಕೆ ಒಳಪಡಿಸಬೇಕು ಎಂದು ಬಸವ ಕೇಂದ್ರ ಶ್ರೀ ಡಾ.ಬಸವ ಮರಳುಸಿದ್ದ ಸ್ವಾಮೀಜಿ ಒತ್ತಾಯಿಸಿದರು.
ಶಿವಮೊಗ್ಗದಲ್ಲಿ ಈ ರೀತಿಯ ಘಟನೆಗಳು ಪದೇ ಪದೇ ನಡೆಯುತ್ತಿರುವುದು ಸರಿಯಲ್ಲ. ಧರ್ಮ ಗುರುಗಳು ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬಹುದು. ಆದರೆ, ಅದರಿಂದಾಚೆಗೆ ಕಾನೂನು ವ್ಯವಸ್ಥೆಯಲ್ಲಿ ಇಂತಹ ಗಲಭೆಗೆ ಕಾರಣ ಆದವರು ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಅವರನ್ನು ಶಿಕ್ಷೆಗೆ ಒಳಪಡಿಸುವಂತೆ ಕೆಲಸ ಆಗಬೇಕು.
ಸಿದ್ದರಾಮಯ್ಯಗೆ ಕಾವೇರಿ ವಿಷಯದಲ್ಲಿ ಸ್ಟಾಲಿನ್ ಮನವೊಲಿಸಲು ಸಾಧ್ಯವಿಲ್ಲವೆ?: ಬಿ.ವೈ.ರಾಘವೇಂದ್ರ
ಆಗ ಮಾತ್ರ ಶಿವಮೊಗ್ಗ ಶಾಂತಿಯುತವಾಗಿ ಇರಲು ಸಾಧ್ಯವಾಗುತ್ತದೆ ಎಂದರು. ಶಿವಮೊಗ್ಗದಲ್ಲಿ ಇಂತಹ ಘಟನೆಗಳು ನಡೆಯಬಾರದು. ಜನರಲ್ಲಿ ಶಾಂತಿ-ಸೌಹಾರ್ದತೆ ಬಗ್ಗೆ ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಎಲ್ಲರೂ ಸೇರಿ ಶಾಂತಿ ನಡಿಗೆ ಮಾಡಲಾಗಿತ್ತು. ಮುಂದೆಯೂ ಮಾಡಬೇಕು ಎಂದು ತೀರ್ಮಾನಿಸಿದ್ದೇವೆ. ಇದರಿಂದ ಧರ್ಮದ ಸಂದೇಶ ಸಾರುವವರು ಎಲ್ಲರೂ ಒಗ್ಗಟ್ಟಾಗಿದ್ದಾರೆ. ಇದನ್ನು ಕೇಳಿ ಜನರು ಒಗ್ಗಟ್ಟಾಗಿ ಬದುಕುತ್ತಾರೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ಹಿನ್ನೆಲೆ ಶಾಂತಿ ನಡಿಗೆಯಿಂದ ಧರ್ಮದ ಬಗ್ಗೆ ಅಪವ್ಯಾಖ್ಯಾನ ಮಾಡಿ, ದಿಕ್ಕು ತಪ್ಪಿಸುವಂತ ವಾತಾವರಣ ಕಡಿಮೆಯಾಗುತ್ತದೆ ಎಂದು ತಿಳಿಸಿದರು.