ಡಿಕೆ ಶಿವಕುಮಾರ್ ಮುಂದಿನ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆಯಾಗುತ್ತಿದ್ದಂತೆ ರಾಜ್ಯದ ಹಲವೆಡೆ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಪಟಾಕಿ, ಬೈಕ್ ರ್ಯಾಲಿ , ಡಿಕೆ ಡಿಕೆ ಘೋಷಣೆಗಳ ಮೂಲಕ ಸೆಲೆಬ್ರೇಷನ್ ಶುರುವಾಗಿದೆ.

ಬೆಂಗಳೂರು (ಮೇ.30) ಕರ್ನಾಟಕ ರಾಜ್ಯ ರಾಜಕಾರಣ ಕಳೆದ ಕೆಲ ದಿನಗಳಿಂದ ದೇಶದಲ್ಲಿ ಸದ್ದು ಮಾಡಿದೆ. ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆಯಾಗುತ್ತಿದ್ದಂತೆ ರಾಜ್ಯದಲ್ಲೆಡೆ ಸಂಭ್ರಮಾಚರಣೆ ಜೋರಾಗಿದೆ. ಶಾಸಕಾಂಗಪಕ್ಷದ ಸಭೆ ಬಳಿಕ ನಾಯಕರ ಹೊರಬಂದ ಬೆನ್ನಲ್ಲೇ ಅಭಿಮಾನಿಗಳು ಡಿಕೆ, ಡಿಕೆ ಎಂದು ಘೋಷಣೆ ಕೂಗಿದ್ದಾರೆ. ರಾಜ್ಯದ ಹಲವೆಡೆ ಡಿಕೆ ಶಿವಕುಮಾರ್ ಸಿಎಂ ಘೋಷಣೆ ಬೆನ್ನಲ್ಲೇ ಬೈಕ್ ರ್ಯಾಲಿ ಸೇರಿದಂತೆ ಹಲವು ರೀತಿಯ ಸಂಭ್ರಮಾಚರಣೆ ಶುರುವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ವಿಜಯೋತ್ಸವ

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕರು ಸೇರಿದಂತೆ ಡಿಕೆ ಶಿವಕುಮಾರ್ ಅಭಿಮಾನಿಗಳು ಭರ್ಜರಿ ಸಂಭ್ರಮಾಚರಣೆ ನಡೆಸಿದ್ದಾರೆ. ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ವಿಜಯೋತ್ಸವ ನಡೆದಿದೆ. ಡಿಕೆಶಿ ಫ್ಲೆಕ್ಸ್ ಗಳಿಗೆ ಕ್ಷೀರಾಭಿಷೇಕ , ಡಿಕೆಶಿ ಫೋಟೋಗೆ ಸಿಹಿ ತಿನ್ನಿಸಿ ಸಂಭ್ರಮಾಚರಣೆ ಮಾಡಲಾಗಿದೆ. ಇನ್ನು ಪಟಾಕಿ ಸಿಡಿಸಿ, ಡಿಕೆ ಶಿವಕುಮಾರ್ ಪರ ಜಯಘೋಷಗಳನ್ನು ಹಾಕಿದ್ದಾರೆ. ಇದೇ ವೇಳೆ ಡಿಕೆ ಶಿವಕುಮಾರ್ ಆಡಳಿತದಲ್ಲಿ ಕರ್ನಾಟಕ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಅಭಿಮಾನಿಗಳು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಬೈಕ್ ರ್ಯಾಲಿ

ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುತ್ತಿರುವ ಹಿನ್ನಲೆಯಲ್ಲಿ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಡಿಕೆ ಶಿವಕುಮಾರ್ ಅಭಿಮಾನಿಗಳು ಸಂಭ್ರಮಾಚರಿಸಿದ್ದಾರೆ. ಬಳ್ಳಾರಿಯಲ್ಲಿ ಬೈಕ್ ರ್ಯಾಲಿ ನಡೆಸಿದ್ದಾರೆ. ಇದೇ ವೇಳೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಬೆಂಗಳೂರಿನ ವಿಧಾನಸ ಸೌಧ ಮುಂಭಾಗ, ರಾಜಭವನ ಮುಂಭಾಗದಲ್ಲಿ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದಾರೆ. ಡಿಕೆ ಶಿವಕುಮಾರ್ ಪರ ಘೋಷಣೆಗಳು ಮೊಳಗುತ್ತಿದೆ. ಇತ್ತ ಡಿಕೆ ಶಿವಕುಮಾರ್ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೇಟಿಯಾಗಿದ್ದಾರೆ. ಬಳಿಕ ಸರ್ಕಾರ ರಚನೆಗೆ ಅನುಮತಿ ಕೋರಿ ಪತ್ರ ನೀಡಿದ್ದಾರೆ. ಸೋಮವಾರ ಡಿಕೆ ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣಚವನ ಸ್ವೀಕರಿಸಲಿದ್ದಾರೆ. ಡಿಕೆ ಶಿವಕುಮಾರ್ ಜೊತೆ 10 ಮಂತ್ರಿಗಳು ಪ್ರಮಾಣಚವನ ಸ್ವೀಕರಿಸಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ. ಇದೀಗ ಸಚಿವ ಸಂಪುಟ ಸರ್ಕಸ್ ನಡೆಯುತ್ತಿದೆ. ಡಿಕೆ ಶಿವಕುಮಾರ್ ಈಗಾಗಲೇ 10 ಶಾಸಕರ ಹೆಸರನ್ನು ಹೈಕಮಾಂಡ್‌ಗೆ ನೀಡಿದ್ದಾರೆ ಎನ್ನಲಾಗಿದೆ. ಮೊದಲ ಹಂತದಲ್ಲಿ 10 ಶಾಸಕರು ಪ್ರಮಾಣಚನ ಸ್ವೀಕರಿಸಲಿದ್ದಾರೆ. ರಾಜ್ಯಸಭೆ ಚುನಾವಣೆ ಬಳಿಕ ಎರಡನೇ ಹಂತದ ಸಂಪುಟ ವಿಸ್ತರಣೆಯಾಗಲಿದೆ ಅನ್ನೋ ಮಾತುಗಳು ಕೇಳಿಬಂದಿದೆ