ಬೆಂಗಳೂರು (ಡಿ.10): ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ನವರು ‘ಡೀಲ್‌’ ಮಾಡುವುದರಲ್ಲಿ ನೂರಕ್ಕೆ ನೂರರಷ್ಟುನಿಸ್ಸೀಮರು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹಾಗೂ ರೈತ ಮುಖಂಡ ಬಡಗಲಪುರ ನಾಗೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಬ್ಬರು ಮುಖಂಡರು ಪ್ರತ್ಯೇಕವಾಗಿ ಸುದ್ದಿಗಾರರ ಜೊತೆ ಮಾತನಾಡಿ, ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದರು.

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಡೀಲಿಂಗ್‌ ಕುಮಾರಸ್ವಾಮಿ, ವಿಧಾನಪರಿಷತ್‌ ಸದಸ್ಯ ಸ್ಥಾನಗಳಿಗೆ ತಲಾ 8 ಕೋಟಿ ಪಡೆದಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. 

ಭೂ ಸುಧಾರಣಾ ಕಾಯ್ದೆಗೆ ಜೆಡಿಎಸ್ ಬೆಂಬಲಿಸಿದ್ದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಎಚ್‌ಡಿಕೆ...

ಇತ್ತೀಚಿನ ಜೆಡಿಎಸ್‌ನ ನಡೆ ನೋಡಿದರೆ ಈ ಸುದ್ದಿ ನಿಜ ಅನ್ನಿಸುತ್ತದೆ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ದೂರಿದರು.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ ಮುಖಂಡರು ಬೆಳಗ್ಗೆ ರೈತರಿಗೆ ಬೆಂಬಲ ಸೂಚಿಸಿ, ಸದನಕ್ಕೆ ಹೋಗಿ ವಿಧೇಯಕ ಅಂಗೀಕಾರಕ್ಕೆ ಬೆಂಬಲಿಸಿರುವ ಹಿಂದೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರ ಬ್ರಹ್ಮಾಂಡ ಭ್ರಷ್ಟಾಚಾರ ಅಡಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.