Asianet Suvarna News Asianet Suvarna News

ಫಸಲ್ ಭೀಮಾ ಯೋಜನೆ ನೋಂದಣಿ ಪ್ರಾರಂಭಿಸಿ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ರೈತರು ಹಾಗೂ ಶೋಷಿತರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ.

Fasal Bima Yojana registration started Union Minister A. Narayanaswamy kannada news gow
Author
First Published Jun 20, 2023, 9:04 PM IST

ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿತ್ರದುರ್ಗ (ಜೂ.20): ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ರೈತರು ಹಾಗೂ ಶೋಷಿತರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ  (union minister A Narayana Swamy) ಹೇಳಿದರು. ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಲೀಡ್ ಬ್ಯಾಂಕ್‍ಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಸಲಹಾ ಮತ್ತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಪ್ರಾಯೋಜಿತ ಯೋಜನೆಗಳ ಬಗ್ಗೆ ವಿಳಂಬ ಹಾಗೂ ನಿರ್ಲಕ್ಷ್ಯ ಮಾಡಬಾರದು. ಅನೇಕ ಇಲಾಖೆಗಳ ಸಹಾಯಧನ ಸಹಿತ ಸಾಲ ನೀಡುವ ಸಾಮಾಜಿಕ ಭದ್ರತಾ ಯೋಜನೆಗಳು ಸಾಕಷ್ಟು ಲ್ಯಾಪ್ಸ್ ಆಗುತ್ತಿವೆ. ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನು ಜಾರಿಗೆ ತರಲು ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡಬೇಕು. ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಹಾಗೂ ನಿರ್ಲಕ್ಷ್ಯ ಮಾಡುವ ಬ್ಯಾಂಕ್ ಶಾಖೆಗಳನ್ನು ಮುಚ್ಚಲು ಕ್ರಮ ವಹಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಚಿತ್ರದುರ್ಗದಲ್ಲಿ ಚಿರತೆ ಪ್ರತ್ಯಕ್ಷ , ಜಮೀನುಗಳಿಗೆ ತೆರಳಲು ರೈತರ ಆತಂಕ

ತ್ವರಿತವಾಗಿ ಅರ್ಜಿ ವಿಲೇವಾರಿ ಮಾಡಿ: ಸರ್ಕಾರದ ವಿವಿಧ ನಿಗಮಗಳಡಿ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದವರ ಜೀವನಮಟ್ಟ ಸುಧಾರಣೆಗೆ ಹಲವು ಸ್ವಾವಲಂಬಿ ಯೋಜನೆಗಳಡಿ ಫಲಾನುಭವಿಗಳಿಗೆ ಸಹಾಯಯಧನ, ರೈತರಿಗೆ ಸಾಲಸೌಲಭ್ಯ, ಬೆಳೆವಿಮೆ ಪರಿಹಾರ ಸೇರಿದಂತೆ ಇಂತಹ ಪ್ರಕರಣಗಳಲ್ಲಿ ತ್ವರಿತವಾಗಿ ಅರ್ಜಿ ವಿಲೇವಾರಿಗೊಳಿಸಿ, ನೆರವು ಒದಗಿಸಲು ಸಚಿವರು ಸೂಚನೆ ನೀಡಿದರು.

ಕಳೆದ ಮೂರು ವರ್ಷಗಳಿಂದಲೂ ಅನೇಕ ಅರ್ಜಿಗಳು ಬಾಕಿ ಉಳಿದಿವೆ. ಕಳೆದ ಬಾರಿ ಸಭೆ ನಡೆಸಿ, ಸೂಚನೆ ನೀಡಿದರೂ ಒಂದು ಅರ್ಜಿಯೂ ವಿಲೇವಾರಿ ಆಗಿಲ್ಲ. ಬಡವರಿಗೆ, ಶೋಷಿತರಿಗೆ ಪರಿಹಾರ ನೀಡಲು ವಿಳಂಬ ಧೋರಣೆ ತೋರದೇ ಶೀಘ್ರವಾಗಿ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದರು. ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯಲ್ಲಿ 457 ಅರ್ಜಿಗಳಲ್ಲಿ 187 ಅರ್ಜಿಗಳು ವಿಲೇವಾರಿಯಾಗಿದ್ದು, ಇನ್ನೂ 285 ಅರ್ಜಿಗಳು ಬ್ಯಾಂಕ್ ವ್ಯವಸ್ಥಾಪಕರ ಲಾಗಿನ್‍ನಲ್ಲಿ ಬಾಕಿ ಉಳಿದಿವೆ. ಇದರಿಂದ ರೈತರಿಗೆ ಬೆಳೆ ವಿಮೆಯ ಪರಿಹಾರ ಹಣ ಪಾವತಿಯಾಗಿಲ್ಲ. ಬ್ಯಾಂಕ್ ವ್ಯವಸ್ಥಾಪಕರು ಎರಡು-ಮೂರು ದಿನಗಳಲ್ಲಿ ಈ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ ಸಭೆಗೆ ಮಾಹಿತಿ ನೀಡಿದರು. 

ಮುಂಗಾರು ಕೈಕೊಡುವ ಮುನ್ಸೂಚನೆಯೇ ಇಲ್ಲ: ಹವಾಮಾನ ಇಲಾಖೆ ಘೋಷಣೆ

ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭಿಸುವಂತೆ ಸಚಿವರು ಜಂಟಿ ಕೃಷಿ ನಿರ್ದೇಶಕರಿಗೆ ಸೂಚನೆ ನೀಡಿದರು. ಫಸಲ್ ಭೀಮಾ ಯೋಜನೆಗೆ ಸಂಬಂಧಪಟ್ಟಂತೆ ಈ ವರ್ಷ ಕೇಂದ್ರ ಕಚೇರಿ ವತಿಯಿಂದ ಇದುವರೆಗೂ ಯಾವುದೇ ನೋಟಿಫಿಕೇಷನ್ ಆಗಿಲ್ಲ. ನೋಟಿಫಿಕೇಷನ್ ಆದ ನಂತರ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅಗ್ರಿಕಲ್ಚರಲ್ ಇನ್ಸೂರೆನ್ಸ್ ಕಂಪನಿ ಜಿಲ್ಲೆಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ಎನ್‍ಆರ್‌ಎಲ್‍ಎಂ ಸಾಧನೆಗೆ ಮೆಚ್ಚುಗೆ: ಜಿಲ್ಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಎನ್‍ಆರ್‌ಎಲ್‍ಎಂ) ವತಿಯಿಂದ ಸುಮಾರು 60 ಕೋಟಿ ರೂಪಾಯಿಗಳನ್ನು ಮಹಿಳಾ ಸ್ವ ಸಹಾಯ ಸಂಘದ ಸದಸ್ಯರಿಗೆ ನೀಡಲಾಗಿದೆ. ಎಲ್ಲ ಮಹಿಳೆಯರು ಇದರಲ್ಲಿ ಭಾಗವಹಿಸಿ, ಮಹಿಳೆಯರು ಸ್ವಾಭಿಮಾನದಿಂದ ಆದಾಯ ಉತ್ಪನ್ನ ಮಾಡಿ, ಅವರದೇ ಆದಂತಹ ಬ್ಯಾಂಕಿಂಗ್ ವ್ಯವಸ್ಥೆ ಮಾಡಿಕೊಂಡಿರುವುದು ಆಶಾದಾಯಕ ಸಂಗತಿ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. 

Follow Us:
Download App:
  • android
  • ios