Asianet Suvarna News Asianet Suvarna News

ಕರ್ನಾಟಕದಿಂದ ಕೊರೋನಾ ಓಡಿಸಲು ವೈದ್ಯರು-ಅಧಿಕಾರಿಗಳ ಸಭೆಯ 12 ತೀರ್ಮಾನ

ಕೊರೋನಾ ವಿರುದ್ಧ ಹೋರಾಟ ನಿರಂತರ/  ಅಧಿಕಾರಿಗಳು ಮತ್ತು ವೈದ್ಯರ ಸಭೆ/ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳು/ ಪ್ರಕರಣಗಳನ್ನು ಆರಂಭದಲ್ಲಿಯೇ ಪತ್ತೆ ಮಾಡಲು ಸೂಚನೆ

Fight against coronavirus Seniors doctors and officials meeting Karnataka
Author
Bengaluru, First Published Apr 17, 2020, 4:48 PM IST

ಬೆಂಗಳೂರು(ಏ,. 17)  ಕೊರೋನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿ ತಜ್ಞ ವೈದ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆ ನಡೆಸಲಾಗಿದೆ. ಹಲವಾರು ಮಹತ್ವದ ಅಂಶಗಳನ್ನು ಜಾರಿಗೆ ತರುವ ಚರ್ಚೆ ಮಾಡಲಾಗಿದ್ದು ತೆಗೆದುಕೊಂಡ ತೀರ್ಮಾನಗಳ ಪಟ್ಟಿ ಇಲ್ಲಿದೆ..

ಶುಕ್ರವಾರ ಸಹ ರಾಜ್ಯದಲ್ಲಿ 38 ಪ್ರಕರಣ ಪತ್ತೆಯಾಗಿದ್ದು ಆತಂಕ ಹೆಚ್ಚಿಸಿದೆ. ಪ್ರಕರಣಗಳನ್ನು ಆರಂಭದಲ್ಲಿಯೇ ಪತ್ತೆ ಮಾಡಿ ಫಾಲೋ ಮಾಡಲು ಸೂಚನೆ ನೀಡಲಾಗಿದೆ.

ವಿಶ್ವಗುರು ಅಂದ್ರೆ ಸುಮ್ಮನೇನಾ? ಭಾರತಕ್ಕೆ ವಂದಿಸಿ ವಿಮಾನ ಏರಿದ ಬ್ರಿಟನ್ ಪ್ರೊಫೆಸರ್
 
*  ಚಿಕಿತ್ಸೆ ವಿಧಿ-ವಿಧಾನಗಳಿಗೆ ಹೆಚ್ಚಿನ ಒತ್ತು ನೀಡಬೇಕು 

*   ಐಸಿಯು ನಲ್ಲಿರುವ ವ್ಯಕ್ತಿಗಳ ಚಿಕಿತ್ಸೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಹಾಗೂ ಅವರಿಗೆ ಕೆಲವು ವಿಶೇಷ ಪರೀಕ್ಷೆಗಳನ್ನು ನಡೆಸಲು ತೀರ್ಮಾನ.

*  ಜೊತೆಗೆ ಕೋವಿಡ್ 19 ಚಿಕಿತ್ಸೆಗೆ ಸೂಕ್ತ ಮಾರ್ಗಸೂಚಿಯನ್ನು ಅನುಸರಿಸಲು ನಿರ್ಧಾರ

*    ಪ್ಲಾಸ್ಮಾ ಚಿಕಿತ್ಸೆಗೆ ಐಸಿಎಂಆರ್ ಅನುಮತಿ ನಿರೀಕ್ಷೆ

*   ಜ್ವರ, ಶೀತ, ಉಸಿರಾಟದ ತೊಂದರೆ ಇರುವವರು  ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯ

ಬೆಂಗಳೂರಿನಲ್ಲಿ ಮತ್ತೆರಡು ಹಾಟ್ ಸ್ಪಾಟ್

*  ಯಾವುದೇ ಪ್ರಕರಣ ವರದಿಯಾಗದೆ ಇರುವ ಜಿಲ್ಲೆಗಳಲ್ಲಿಯೂ ಈ ರೋಗ ಲಕ್ಷಣಗಳಿರುವ ವ್ಯಕ್ತಿಗಳ ಪರೀಕ್ಷೆ ನಡೆಸಲು ಸೂಚನೆ

*  ಪ್ರತಿ ಜಿಲ್ಲೆಯಲ್ಲಿ ಎರಡು ಹಾಗೂ ಪ್ರತಿ ವೈದ್ಯಕೀಯ ಕಾಲೇಜುಗಳಲ್ಲಿ ಒಂದು ಪರೀಕ್ಷಾ ಕೇಂದ್ರ ಸ್ಥಾಪಿಸುವಂತೆ ಐಸಿಎಂಆರ್ ಮಾರ್ಗಸೂಚಿ 

*  ಏಪ್ರಿಲ್ ಅಂತ್ಯದೊಳಗೆ ಇನ್ನೂ 10 ಪ್ರಯೋಗಾಲಯಗಳನ್ನು ಸ್ಥಾಪನೆ

*   ಲಾಕ್ ಡೌನ್ ಸಡಿಲಗೊಳಿಸಿದ ನಂತರ ಪ್ರಕರಣಗಳ ಸಂಖ್ಯೆ ಹೆಚ್ಚಾದಲ್ಲಿ ಅವುಗಳನ್ನು ನಿಭಾಯಿಸುವ ಸಿದ್ಧತೆ

* ಜೊತೆಗೆ, ವಿವಿಧ ಕಂಪೆನಿಗಳಲ್ಲಿ ಲಾಕ್ ಡೌನ್ ಸಡಿಲಗೊಳಿಸುವ ಸಂದರ್ಭದಲ್ಲಿ ಥರ್ಮಲ್ ಸ್ಕಾನರ್ ಮತ್ತಿತರ ಸರಳ ಪರೀಕ್ಷಾ ಪರಿಕರಗಳ ಮೂಲಕ ತಮ್ಮ ಸಿಬ್ಬಂದಿಯಲ್ಲಿ ರೋಗ ಲಕ್ಷಣವಿದೆಯೇ ಎಂದು ಪ್ರತಿ ದಿನ ಪರೀಕ್ಷೆ ಮಾಡುವುದು ಕಡ್ಡಾಯ

*   ಆರೋಗ್ಯ ಸೇತು ಆಪ್ ಅನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಡೌನ್ ಲೋಡ್ ಮಾಡಿಕೊಳ್ಳಲು ಮನವಿ 

*  ಏಪ್ರಿಲ್ 21ರಂದ ಇನ್ನೊಂದು ಸಭೆ ನಡೆಸಿ ಪರಿಸ್ಥಿತಿ ಅವಲೋಕನ

 

Follow Us:
Download App:
  • android
  • ios