ಕೊರೋನಾ ಮಧ್ಯೆ ಫೈನಲ್ ಇಯರ್ ಬಿಇ ಪರೀಕ್ಷೆ ಆರಂಭ
ಅಂತಿಮ ವರ್ಷದ ಪರೀಕ್ಷೆ ಬಿಇ ಆರಂಭ| ಯುವಿಸಿಇಯಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರು| ಸೆ.12ರಂದು ಕೊನೆ ಪರೀಕ್ಷೆ ಬಿಇ ಪರೀಕ್ಷೆ| ಕೊರೋನಾ ಪಾಸಿಟಿವ್ ವಿದ್ಯಾರ್ಥಿಗಳಿಗೂ ಪ್ರತ್ಯೇಕ ಕೊಠಡಿಯಲ್ಲಿ ಅವಕಾಶ| ಮುನ್ನೆಚ್ಚರಿಕೆ ಕ್ರಮವಾಗಿ ಆ್ಯಂಬುಲೆನ್ಸ್, ಪಿಪಿಇ ಕಿಟ್ ವ್ಯವಸ್ಥೆ| ಸೆ.12ರ ವರೆಗೆ ಪರೀಕ್ಷೆ|
ಬೆಂಗಳೂರು(ಸೆ.02): ಯೂನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್(ಯುವಿಸಿಇ) ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಂಗಳವಾರದಿಂದ ಪರೀಕ್ಷೆ ಆರಂಭವಾಯಿತು.
ಕೆ.ಆರ್.ವೃತ್ತದಲ್ಲಿರುವ ಯುವಿಸಿಇನಲ್ಲಿ ನಡೆದ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿರುವುದನ್ನು ಖಚಿತಪಡಿಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು.
ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಬಸ್ನಲ್ಲಿ ಉಚಿತ ಪ್ರಯಾಣ, ಕಂಡಿಷನ್ ಅಪ್ಲೈ
ಹಾಸ್ಟೆಲ್ ವ್ಯವಸ್ಥೆ:
ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಆರ್. ವೇಣುಗೋಪಾಲ್, ವೇಳಾಪಟ್ಟಿಯನ್ನು ಈ ಹಿಂದೆಯೇ ಬಿಡುಗಡೆ ಮಾಡಿದ್ದರಿಂದ ರಾಜ್ಯದ ವಿವಿಧೆಡೆಯಿಂದ ವಿದ್ಯಾರ್ಥಿಗಳು ಹತ್ತು ದಿನಗಳ ಹಿಂದೆಯೇ ಬಂದು ಹಾಸ್ಟೆಲ್‌ಗಳಲ್ಲಿ ಉಳಿದುಕೊಂಡಿದ್ದರು. 170 ವಿದ್ಯಾರ್ಥಿಗಳು ಹಾಗೂ 70 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್‌ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಈ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಿ ಕೊರೋನಾ ಸೋಂಕು ಇಲ್ಲದಿರುವುದನ್ನು ದೃಢಪಡಿಸಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಕೊರೋನಾ ಪಾಸಿಟಿವ್ ವಿದ್ಯಾರ್ಥಿಗಳಿಗೂ ಪ್ರತ್ಯೇಕ ಕೊಠಡಿಯಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಆ್ಯಂಬುಲೆನ್ಸ್, ಪಿಪಿಇ ಕಿಟ್ ವ್ಯವಸ್ಥೆ ಮಾಡಲಾಗಿತ್ತು. ಸೆ.12ರ ವರೆಗೆ ಪರೀಕ್ಷೆ ನಡೆಯಲಿದೆ ಎಂದರು.
ಎರಡು ಹೊಸ ಕೋರ್ಸ್ ಆರಂಭ
ಯುವಿಸಿಇನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಏರೋನಾಟಿಕಲ್ ಮತ್ತು ಏರೋಸ್ಪೇಸ್ ಎಂಜಿನಿಯರಿಂಗ್ ಕೋರ್ಸ್ ಆರಂಭಿಸಲಾಗುತ್ತದೆ ಎಂದು ಬೆಂ.ವಿವಿ ಕುಲಪತಿ ಪ್ರೊ. ಕೆ.ಆರ್. ವೇಣುಗೋಪಾಲ್ ತಿಳಿಸಿದರು.
ಐಐಟಿ ಮಾದರಿಯಲ್ಲಿ ಯುವಿಸಿಇ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಸಾಕಷ್ಟುಬದಲಾವಣೆ ತರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ ಕೋರ್ಸ್ ಆರಂಭಿಸುತ್ತಿದ್ದೇವೆ. ಇದಲ್ಲದೇ ಬೆಂ.ವಿವಿಯಲ್ಲಿ ಡಿಪ್ಲೊಮಾ, ಪಿ.ಜಿ ಡಿಪ್ಲೊಮಾದಲ್ಲಿ ಅಗ್ರಿಕಲ್ಚರಲ್ ಮ್ಯಾನೇಜ್‌ಮೆಂಟ್, ಪಿ.ಜಿ ಡಿಪ್ಲೊಮಾ ಇನ್ ನೇಚರ್ ಆ್ಯಂಡ್ ವೈಲ್ಡ್‌ಲೈಫ್, ಬಿ.ಎಸ್ಸಿ- ಅಗ್ರಿಕಲ್ಚರ್ ಎಂಟ್ರಪ್ರನರ್ ಆ್ಯಂಡ್ ಸ್ಕಿಲ್ ಡೆವಲೆಪ್‌ಮೆಂಟ್, ಬಿ.ಕಾಂ ಇನ್ ಬಿಸಿನೆಸ್ ಅನಾಲಿಟಿಕ್ಸ್ ಕೋರ್ಸ್‌ಗಳನ್ನು ಪರಿಚಯಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.