Asianet Suvarna News Asianet Suvarna News

ನನ್ನ ಜನ ಹೀಗೆ ಮಾಡಿದರು ಎಂದು ನಂಬಲಾಗುತ್ತಿಲ್ಲ: ಕೊನೆಗೂ ಜಮೀರ್‌ ವಿಷಾದ!

ಪಾದರಾಯನಪುರ ಗಲಭೆಗೆ ಕೊನೆಗೂ ಜಮೀರ್‌ ವಿಷಾದ| ನನ್ನ ಜನ ಹೀಗೆ ಮಾಡಿದರು ಎಂದು ನಂಬಲಾಗುತ್ತಿಲ್ಲ

Finally MLA Zameer Ahmed Expresses Regret For Padarayanapura riot
Author
Bangalore, First Published Apr 22, 2020, 9:09 AM IST

ಬೆಂಗಳೂರು(ಏ.22): ಪಾದರಾಯನಪುರ ಘಟನೆಗೆ ನನ್ನ ವಿಷಾದವಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಜಮೀರ್‌ ಅಹಮದ್‌ ಖಾನ್‌ ಹೇಳಿದ್ದಾರೆ.

ಘಟನೆ ಸಂಬಂಧ ತೀವ್ರ ಟೀಕೆ ಎದುರಿಸಿದ ಬೆನ್ನಲ್ಲೇ ಮಂಗಳವಾರ ಸರಣಿ ಟ್ವೀಟ್‌ ಮಾಡಿರುವ ಅವರು, ತಮ್ಮನ್ನು ಉಳಿಸಲು ಬಂದವರ ಮೇಲೆಯೇ ಜನ ಹಲ್ಲೆಗೆ ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ. ನನ್ನ ಜನ ಈ ರೀತಿ ವರ್ತಿಸುತ್ತಾರೆ ಎಂದು ನಾನು ಎಂದೂ ಭಾವಿಸಿರಲಿಲ್ಲ. ಯಾರೋ ಒಂದಷ್ಟುಜನರ ದುರ್ವರ್ತನೆಗೆ ಇಡೀ ಸಮುದಾಯವನ್ನು ದೂರುವುದು ಸರಿಯಲ್ಲ. ಧರ್ಮಾತೀತವಾಗಿ ಕೊರೋನಾ ವಿರುದ್ಧ ದೇಶ ಹೋರಾಡುತ್ತಿದೆ. ಇದು ಒಂದಾಗಬೇಕಾದ ಸಮಯವೇ ಹೊರತು ಸಮಾಜ ಒಡೆಯುವ ಸಮಯವಲ್ಲ ಎಂದಿದ್ದಾರೆ.

ಪಾದರಾಯನಪುರದಲ್ಲಿ ಇಂಥದ್ದೊಂದು ಘಟನೆ ನಡೆದಿದೆ ಎಂಬುದನ್ನು ನನಗೆ ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ. ಇನ್ನು ಮುಂದೆ ಇಂಥ ಘಟನೆ ಮರುಕಳಿಸದಂತೆ ಅಗತ್ಯ ಮುಂಜಾಗ್ರತೆ ವಹಿಸಲಾಗುತ್ತದೆ. ನನ್ನ ಕ್ಷೇತ್ರದ ಜನತೆ ಎಂದಿನಂತೆ ಮುಂದೆಯೂ ಸರ್ಕಾರ, ವೈದ್ಯಕೀಯ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡುತ್ತಾರೆ.

ನನ್ನ ಜನ ಹೀಗೆ ಮಾಡಿದರು ಎಂದು ನಂಬಲಾಗುತ್ತಿಲ್ಲ: ಕೊನೆಗೂ ಜಮೀರ್‌ ವಿಷಾದ!

ಪಾದರಾಯನಪುರ ಘಟನೆಗೆ ನನ್ನ ವಿಷಾದವಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಘಟನೆಗಳು ನನ್ನ ಕ್ಷೇತ್ರವೂ ಸೇರಿದಂತೆ ಇಡೀ ರಾಜ್ಯದಲ್ಲಿ ಎಲ್ಲಿಯೂ ನಡೆಯದಂತೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಮನವಿ ಮಾಡಿದ್ದಾರೆ.

ನಾನು ಯಾರಿಗೂ ನನ್ನ ಅಪ್ಪಣೆ ಪಡೆದು ಚಾಮರಾಜಪೇಟೆಗೆ ಬರಬೇಕು ಎಂದು ಎಲ್ಲಿಯೂ ಹೇಳಿಲ್ಲ, ಹೇಳುವುದೂ ಇಲ್ಲ. ನನ್ನ ಕ್ಷೇತ್ರವೂ ಇತರ ಕ್ಷೇತ್ರಗಳಂತೆ ಒಂದು ಸಾಮಾನ್ಯ ಕ್ಷೇತ್ರ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದಕ್ಕೆ ಸಾಕಷ್ಟುನೋವಾಗಿದೆ. ಈ ಒಂದು ಘಟನೆಯಿಂದ ನನ್ನ ಹೆಸರಿಗೆ ಮಸಿ ಬಳಿಯಲು ಎಷ್ಟೇ ಪ್ರಯತ್ನಿಸಿದರೂ ನಾನು ಜನಸೇವೆಯಿಂದ ಹಿಂದೆ ಸರಿಯುವವನಲ್ಲ. ಮಾನವೀಯತೆಯೇ ನನ್ನ ಧರ್ಮ. ಹಣ, ಅಧಿಕಾರ ಯಾವುದೂ ಶಾಶ್ವತವಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌ ಎಲ್ಲರೂ ಒಂದೇ ತಾಯಿಯ ಮಕ್ಕಳು. ನಮ್ಮ ದೇಶ, ರಾಜ್ಯವನ್ನು ಕೊರೊನಾದಿಂದ ಕಾಪಾಡಬೇಕು. ಇದಕ್ಕೆ ನನ್ನ ಕ್ಷೇತ್ರದ ಜನರ ಸಂಪೂರ್ಣ ಸಹಕಾರ ದೊರೆಯಲಿದೆ ಎಂದು ಹೇಳಿದ್ದಾರೆ.

Follow Us:
Download App:
  • android
  • ios